ಮಹಿಳೆಗೆ ಬಲವಂತವಾಗಿ ಮದ್ಯ ಕುಡಿಸಿ ಗ್ಯಾಂಗ್ ರೇಪ್ - Mahanayaka

ಮಹಿಳೆಗೆ ಬಲವಂತವಾಗಿ ಮದ್ಯ ಕುಡಿಸಿ ಗ್ಯಾಂಗ್ ರೇಪ್

rape
04/02/2022

ದಾವಣಗೆರೆ: ಮಹಿಳೆಗೆ ಬಲವಂತವಾಗಿ ಮದ್ಯ ಕುಡಿಸಿ ನಂತರ ಇಬ್ಬರು ಕಾಮುಕರು ಅತ್ಯಾಚಾರ ಎಸಗಿರುವ ಘಟನೆ ತಡವಾಗಿ ದಾವಣಗೆರೆ ತಾಲೂಕಿನ ಮ್ಯಾಸರಹಳ್ಳಿಯಲ್ಲಿ ಬೆಳಕಿಗೆ ಬಂದಿದೆ.

ಮ್ಯಾಸರಹಳ್ಳಿಯ ಪ್ರಭು ಹಾಗೂ ಕುಂದುವಾಡದ ಕಿರಣ್ ಅತ್ಯಾಚಾರ ಮಾಡಿದ ಆರೋಪಿಗಳು. 25 ವರ್ಷದ ಮಹಿಳೆ ಮೇಲೆ ಈ ಇಬ್ಬರು ಕಾಮುಕರು ಅತ್ಯಾಚಾರವೆಸಗಿದ್ದಾರೆ. ಮ್ಯಾಸರಹಳ್ಳಿ ಗ್ರಾಮದ ಹೊರವಲಯದಲ್ಲಿ ಮಹಿಳೆಯು ತೊಗರಿ ಹಾಕಿದ್ದರು. ಆ ವೇಳೆಗೆ ಅಲ್ಲಿಗೆ ಬಂದ ಕಿರಣ್ ಹಾಗೂ ಪ್ರಭು ಮಹಿಳೆಯನ್ನು ಹೆದರಿಸಿ ಜಮೀನಿಗೆ ಕರೆದುಕೊಂಡು ಹೋಗಿ, ಆಕೆಗೆ ಬಲವಂತವಾಗಿ ಮದ್ಯ ಕುಡಿಸಿದ್ದಾರೆ. ಇದಾದ ಬಳಿಕ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

ಮಹಿಳೆಯ ಕೂಗಾಟ ಕೇಳಿದ ಸಂಬಂಧಿಯೊಬ್ಬರು ಸ್ಥಳಕ್ಕೆ ಆಗಮಿಸಿದ್ದಾರೆ. ಅಷ್ಟರಲ್ಲಿ ಆರೋಪಿಗಳು ಅತ್ಯಾಚಾರವೆಸಗಿ ಪರಾರಿಯಾಗಿದ್ದಾರೆ. ಅಲ್ಲದೆ ಜಮೀನಿನಲ್ಲಿ ಮಹಿಳೆಯು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದು, ಈ ವೇಳೆ ಮಹಿಳೆಯ ಸಂಬಂಧಿ ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಹಿಳೆಯ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

 ಗಂಡನನ್ನು ಆನ್ ಲೈನ್ ಸೈಟ್ ನಲ್ಲಿ ಮಾರಾಟಕ್ಕಿಟ್ಟ ಪತ್ನಿ!

ವೃದ್ಧೆ ಬದುಕಿರುವಾಗಲೇ ಮರಣ ಪತ್ರ ನೀಡಿದ ಅಧಿಕಾರಿಗಳು

ಮುಸ್ಲಿಂ ವಿದ್ಯಾರ್ಥಿನಿಯರಿಗೆ ಕಾಲೇಜು ಗೇಟ್ ಹಾಕಿರುವುದು ಸಂವಿಧಾನ ವಿರೋಧಿ: ಸಿದ್ದರಾಮಯ್ಯ

ಮಾ.12ಕ್ಕೆ ನಿಗದಿಯಾಗಿದ್ದ ನೀಟ್‌ ಪಿಜಿ ಪರೀಕ್ಷೆ ಮುಂದೂಡಿಕೆ

ಭೀಕರ ರಸ್ತೆ ಅಪಘಾತ: ಆರು ಮಂದಿ ಸಾವು

 

ಇತ್ತೀಚಿನ ಸುದ್ದಿ