ಬಿಜೆಪಿ ಸೋಲಿಸಿ, ಸಿಎಂ ಯೋಗಿಯನ್ನು ಉತ್ತರಾಖಂಡಕ್ಕೆ ವಾಪಸ್ ಕಳುಹಿಸಿ: ಅಖಿಲೇಶ್ ಯಾದವ್
ಲಕ್ನೋ: ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷವು ಬಿಜೆಪಿಗೆ ಸೋಲನ್ನು ಖಚಿತಪಡಿಸುತ್ತದೆ. ನಂತರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಉತ್ತರಾಖಂಡಕ್ಕೆ ವಾಪಸ್ ಕಳುಹಿಸಲಾಗುತ್ತದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ.
ಲಕ್ನೋದಲ್ಲಿ ಶುಕ್ರವಾರ ಮಾತನಾಡಿದ ಅವರು, ಆಡಳಿತಾರೂಢ ಬಿಜೆಪಿ ಹೇಳಿಕೊಳ್ಳುತ್ತಿರುವಂತೆ ಅಪರಾಧಿಗಳು ರಾಜ್ಯದಿಂದ ಪಲಾಯನ ಮಾಡುತ್ತಿರುವುದನ್ನು ಯಾರಾದರೂ ನೋಡಿದ್ದೀರಾ ಎಂದು ಅವರು ಪ್ರಶ್ನಿಸಿದರು.
ಬಾಬಾಸಾಹೇಬ್ ಭೀಮರಾವ್ ಅಂಬೇಡ್ಕರ್ ದೇಶವನ್ನು ಮುನ್ನೆಡೆಸುವುದಕ್ಕಾಗಿ ನಮಗೆ ಸಂವಿಧಾನವನ್ನು ನೀಡಿದ್ದಾರೆ. ಈ ಚುನಾವಣೆಯು ಸಂವಿಧಾನವನ್ನು ರಕ್ಷಿಸುವ ಬಹುಮುಖ್ಯವಾಗಿದೆ. ಅದಕ್ಕಾಗಿ ಸಮಾಜವಾದಿ ಪಕ್ಷವು ಎಲ್ಲಾ ಗುಂಪಿನ ಜನರನ್ನು ಒಟ್ಟುಗೂಡಿಸಿ ಕರೆದುಕೊಂಡು ಹೋಗುತ್ತಿದೆ. ಈ ಚುನಾವಣೆಯು ಬಿಜೆಪಿ ಹಾಗೂ ಸೋದರತ್ವದ ವಿರುದ್ಧ ನಡೆಯುತ್ತಿರುವ ಹೋರಾಟ ಎಂದು ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದರು.
ಸಿಎಂ ಯೋಗಿ ಪೂರ್ವಜರ ಮೂಲ ಉಲ್ಲೇಖಿಸಿದ ಅಖಿಲೇಶ್ ಯಾದವ್, ಉತ್ತರ ಪ್ರದೇಶದ ಮತದಾರರು ಸಮಸ್ಯೆಗಳ ಆಧಾರದ ಮೇಲೆ ಮತ ಚಲಾಯಿಸುತ್ತಾರೆ. ಈಗಿನ ಮುಖ್ಯಮಂತ್ರಿಯನ್ನು ಉತ್ತರಾಖಂಡಕ್ಕೆ ವಾಪಸ್ ಕಳುಹಿಸುತ್ತಾರೆ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಕೌಟುಂಬಿಕ ಹಿಂಸಾಚಾರ ಆರೋಪ: ಅಧಿಕಾರ ವಹಿಸಿಕೊಂಡ ಮೂರೇ ದಿನದಲ್ಲಿ ಪೆರು ಪ್ರಧಾನಿ ವಜಾ
ಬಿಜೆಪಿಗೆ ಸಾಮೂಹಿಕ ರಾಜೀನಾಮೆ: ವಿಶ್ವಕರ್ಮ ಸಮುದಾಯ ಎಚ್ಚರಿಕೆ
ಆಧಾರ್ ಪೌರತ್ವದ ಪುರಾವೆಯಲ್ಲ: ಸಂಸತ್ ನಲ್ಲಿ ಕೇಂದ್ರ ಸ್ಪಷ್ಟನೆ
ವಿಶ್ವದ ಎತ್ತರದ ರಾಮಾನುಜಾಚಾರ್ಯರ ಪ್ರತಿಮೆ; ಇಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ
ಡ್ರಿಂಕ್ಸ್ ಮಾಡಲು ಪತಿಯನ್ನು ಕರೆದುಕೊಂಡು ಹೋಗುತ್ತಿದ್ದ ಬಾವನ ಕೊಲೆ