ಅಧಿಕೃತ ಕಾರ್ಯಕ್ರಮಗಳಲ್ಲಿ ನ್ಯಾಯಾಲಯಗಳಲ್ಲಿ ಡಾ.ಅಂಬೇಡ್ಕರ್ ಭಾವಚಿತ್ರ ಅಳವಡಿಕೆಗೆ ಹೈಕೋರ್ಟ್ ಆದೇಶ
ನವದೆಹಲಿ: ಅಧಿಕೃತ ಕಾರ್ಯಕ್ರಮಗಳಲ್ಲಿ ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಇಡಲು, ಹೈಕೋರ್ಟ್ ಮುಖ್ಯ ನಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದಲ್ಲಿ ಆಡಳಿತಾತ್ಮಕ ಪೂರ್ಣ ನ್ಯಾಯಾಲಯ ಸಭೆ ನಿರ್ಣಯ ಕೈಗೊಂಡಿದೆ.
ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ನ್ಯಾಯಾಲಯದ ಎಲ್ಲಾ ಅಧಿಕೃತ ಕಾರ್ಯಕ್ರಮಗಳಲ್ಲಿ ಇರಿಸಲು ಕರ್ನಾಟಕ ಹೈಕೋರ್ಟ್‍ನ ರಿಜಿಸ್ಟ್ರಾರ್ ಜನರಲ್ ಸುತ್ತೋಲೆ ಹೊರಡಿಸಿದ್ದಾರೆ. ಗಣರಾಜ್ಯೋತ್ಸವದ ಅಂಗವಾಗಿ ರಾಯಚೂರಿನ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಆಯೋಜಿಸಿದ್ದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಇರಿಸುವುದರ ಸುತ್ತ ಉಂಟಾದ ಗೊಂದಲಗಳ ಕುರಿತು ವಕೀಲರು ಹಾಗೂ ಕೆಲ ಸಂಘಟನೆಗಳು ರಾಜ್ಯ ಹೈಕೋರ್ಟ್‍ಗೆ ಮನವಿ ಸಲ್ಲಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ವರದಿ ಕೇಳಿತ್ತು.
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದಲ್ಲಿ ಶುಕ್ರವಾರ ನಡೆದ ಆಡಳಿತಾತ್ಮಕ ಪೂರ್ಣ ನ್ಯಾಯಾಲಯದ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿದ್ದು, ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ ಆಯೋಜಿಸಲಾಗುವ ಅಧಿಕೃತ ಕಾರ್ಯಕ್ರಮಗಳಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರವಿಡಲು ಕ್ರಮ ಕೈಗೊಳ್ಳುವಂತೆ ಆಯಾ ನ್ಯಾಯಾಲಯಗಳ ಮುಖ್ಯಸ್ಥರಿಗೆ ಸೂಚಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ನಿಧನ
ನಾಲ್ಕು ಜನ ಆತ್ಮಹತ್ಯೆ ಮಾಡಿಕೊಂಡ ಮನೆಯಲ್ಲಿ ಕಾಣಿಸಿಕೊಂಡ ಬೆಳಕು: ಮನೆಗೆ ನುಗ್ಗಿ ನೋಡಿದಾಗ ಸತ್ಯ ಬಯಲು
ಹಿಜಾಬ್ ವಿವಾದ: 6 ವಿದ್ಯಾರ್ಥಿನಿಯರನ್ನು ಸಸ್ಪೆಂಡ್ ಮಾಡಬೇಕಿತ್ತು | ಪ್ರಮೋದ್ ಮುತಾಲಿಕ್
ಬಿಎಸ್ ಪಿಯ ಮೊದಲ ಮಹಿಳಾ ರಾಷ್ಟ್ರೀಯ ವಕ್ತಾರರಾಗಿ ನಿರ್ಭಯ ಪ್ರಕರಣದ ವಕೀಲೆ ಸೀಮಾ ಕುಶ್ವಾಹಾ ನೇಮಕ