ಶಾಲೆ ಸರಸ್ವತಿ ಮಂದಿರ, ತಾಲಿಬಾನ್ ಮಾಡಲು ಬಿಡುವುದಿಲ್ಲ: ನಳಿನ್ ಕುಮಾರ್ ಕಟೀಲ್
ಮಂಗಳೂರು: ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವಿದೆ. ಹಿಜಾಬ್ ನಂತಹ ಯಾವುದೇ ಘಟನೆಗಳಿಗೆ ಆಸ್ಪದವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಶಾಲೆ ಸರಸ್ವತಿ ಮಂದಿರ, ಶಾಲೆಯ ನಿಯಮದ ಪ್ರಕಾರ ಶಿಕ್ಷಣ ಪಡೆಯುವುದು ಧರ್ಮ. ಅದರೊಳಗೆ ಬೇರೆ ಧರ್ಮ ತರುವುದು ಸರಿಯಲ್ಲ ಎಂದರು.
ಮಕ್ಕಳಿಗೆ ಶಿಕ್ಷಣದ ಅವಶ್ಯಕ. ಯಾರಿಗೆ ಶಿಕ್ಷಣ ಪಡೆಯಲು ಮನಸ್ಸಿಲ್ಲವೋ ಅವರು ಬೇರೆ ದಾರಿ ಹುಡುಕಬಹುದು. ನಮ್ಮ ಸರ್ಕಾರ ಕಟ್ಟು ನಿಟ್ಟಿನ ಕ್ರಮಕೈಗೊಳ್ಳುತ್ತದೆ. ಇಂತಹದ್ದಕ್ಕೆ ಎಲ್ಲೂ ಅವಕಾಶ ಇಲ್ಲ. ಇಲ್ಲಿ ತಾಲಿಬಾನ್ ಮಾಡಲು ಬಿಡುವುದಿಲ್ಲ ಎಂದರು.
ಸಿದ್ದರಾಮಯ್ಯ ಎಚ್ಚರಿಕೆಯಿಂದ ಮಾತನಾಡಬೇಕು. ಹಿಜಾಬ್ ವಿಚಾರ ಈಗ ನ್ಯಾಯಾಲಯದಲ್ಲಿದೆ. ಅಲ್ಲಿಂದ ಏನು ನಿರ್ದೇಶನ ಬರುತ್ತದೆ ಎಂದು ಕಾದು ನೋಡುತ್ತಿದ್ದೇವೆ ಎಂದು ಅವರು ಹೇಳಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಬಂಟ್ವಾಳ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ | ತಾಲೂಕು ಅಭ್ಯಾಸ ವರ್ಗ-2022
ಜೈಲಿನಂತೆ ಕಾಲೇಜಿನಲ್ಲಿ ಹಿಂದೂ-ಮುಸ್ಲಿಮರ ನಡುವೆ ಗೋಡೆ ನಿರ್ಮಾಣದ ಯತ್ನ: ಮುನೀರ್ ಕಾಟಿಪಳ್ಳ