ಪಂಜಾಬ್ ಸಿಎಂ ಅಭ್ಯರ್ಥಿಯನ್ನು ಘೋಷಿಸಿದ ಕಾಂಗ್ರೆಸ್
ನವದೆಹಲಿ: ಪಂಜಾಬ್ ಸಿಎಂ ಅಭ್ಯರ್ಥಿಯ ಹೆಸರನ್ನು ಕಾಂಗ್ರೆಸ್ ಘೋಷಿಸಿದ್ದು, ಈ ಮೂಲಕ ಸಿಎಂ ಸ್ಥಾನಾಕಾಂಕ್ಷಿಯಾಗಿದ್ದ ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧುಗೆ ಶಾಕ್ ನೀಡಿದೆ.
ಲೂಧಿಯಾನಾದಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಚರಣ್ ಜಿತ್ ಸಿಂಗ್ ಚನ್ನಿ ಮುಂದಿನ ಸಿಎಂ ಅಭ್ಯರ್ಥಿ ಎಂದು ಘೋಷಿಸಿದರು.
ಪಂಜಾಬ್ ನ ಹಾಲಿ ಸಿಎಂ ಆಗಿರುವ ಚನ್ನಿ ವಿಧಾನಸಭಾ ಚುನಾವಣೆಗೆ 2 ಕ್ಷೇತ್ರಗಳಿಂದ ಸ್ಪರ್ಧಿಸುತ್ತಿದ್ದಾರೆ. ದಲಿತ ಮತಗಳನ್ನು ಸೆಳೆಯುವ ನಿಟ್ಟಿನಲ್ಲಿ ಕಾಂಗ್ರೆಸ್ ತೀವ್ರ ಪ್ರಯತ್ನದಲ್ಲಿದ್ದು, ಈ ಹಿನ್ನೆಲೆಯಲ್ಲಿ ಚುನಾವಣೆಗೂ ಮೊದಲೇ ಚರಣ್ ಜಿತ್ ಸಿಂಗ್ ಚನ್ನಿ ಮುಂದಿನ ಸಿಎಂ ಎಂದು ಘೋಷಿಸಿದೆ ಎನ್ನುವ ವಿಶ್ಲೇಷಣೆಗಳು ಕೇಳಿ ಬಂದಿವೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ನನ್ನ ಬಟ್ಟೆ ನನ್ನ ಆಯ್ಕೆ, ನೀವ್ಯಾಕೆ ಕೇಳ್ತೀರಿ? | ನಿವೇದಿತಾ ಗೌಡ
ಹಿಜಾಬ್ ವಿವಾದ: ಜನರಿಗೆ ತಮ್ಮಿಷ್ಟದ ಉಡುಗೆ ತೊಡುವ ಸ್ವಾತಂತ್ರ್ಯ ಡಾ.ಅಂಬೇಡ್ಕರ್ ನೀಡಿದ್ದಾರೆ | ಶಾಸಕಿ ಕನೀಝ್ ಫಾತಿಮಾ
ಒಂದೇ ಕುಟುಂಬದ ಐವರ ಬರ್ಬರ ಹತ್ಯೆ: ಮಕ್ಕಳು ಎಂದೂ ನೋಡದ ಕೊಚ್ಚಿ ಹಾಕಿದರು!
ಪತ್ನಿಯ ಅಧಿಕಾರ ಚಲಾಯಿಸುತ್ತಿರುವ ಗಂಡ: ಗ್ರಾ.ಪಂ. ಅಧ್ಯಕ್ಷೆ ವಿರುದ್ಧ ಆಕ್ರೋಶ