ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ
ಕುಂದಾಪುರ: ಹಿಜಾಬ್ ವಿವಾದ ಸೋಮವಾರವೂ ಮುಂದುವರಿದಿದ್ದು, ಕುಂದಾಪುರ ಸರ್ಕಾರಿ ಪಿಯು ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಲಾಗಿರುವ ಘಟನೆ ನಡೆದಿದೆ.
ರಾಜ್ಯ ಸರ್ಕಾರ ಕಾಲೇಜು ಆವರಣದೊಳಕ್ಕೆ ಸಮವಸ್ತ್ರ ಧರಿಸಿದ ವಿದ್ಯಾರ್ಥಿಗಳ ಹೊರತಾಗಿ ಇತರರಿಗೆ ಪ್ರವೇಶವಿಲ್ಲ ಎಂಬ ಆದೇಶ ಹೊರಡಿಸಿದೆ.ಈ ಬಗ್ಗೆ ಪ್ರಾಂಶುಪಾಲರು ಮನವೊಲಿಸುವ ಪ್ರಯತ್ನ ಮಾಡಿದರಾದರೂ ಹಿಜಾಬ್ ಧರಿಸಿದ್ದ ವಿದ್ಯಾರ್ಥಿನಿಯರು ಒಪ್ಪದ ಕಾರಣ ಅವರನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಲಾಯಿತು.
ಕುಂದಾಪುರ ಕಾಗೇರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದರಿಂದ, ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿದರು. ಕಾಲೇಜು ಆವರಣದೊಳಕ್ಕೆ ಇಬ್ಬರಿಗೂ ಪ್ರವೇಶ ನಿರಾಕರಿಸಿದ್ದರಿಂದ ಹಿಜಾಬ್ ಧರಿಸಿದ್ದ ಮೂವರು ವಿದ್ಯಾರ್ಥಿನಿಯರು ಮನೆಗೆ ಹಿಂದಿರುಗಿದರು. ಇತರ ವಿದ್ಯಾರ್ಥಿಗಳು ಕೇಸರಿ ಶಾಲು ತೆಗೆದಿಟ್ಟು ತರಗತಿ ಪ್ರವೇಶಿಸಿದರು.
ಕುಂದಾಪುರದ ವೆಂಕಟರಮಣ ಪಿಯು ಕಾಲೇಜಿನ ಕೆಲವು ವಿದ್ಯಾರ್ಥಿಗಳು, ಹಿಜಾಬ್ ಧರಿಸುವುದಕ್ಕೆ ಪ್ರತಿರೋಧಿಸಿ ಕೇಸರಿ ಶಾಲು ಧರಿಸಿ ಬಂದ ಘಟನೆಯೂ ನಡೆಯಿತು. ಕಾಲೇಜು ಆವರಣದೊಳಕ್ಕೆ ಹಿಜಾಬ್ ಹಾಗೂ ಕೇಸರಿ ಶಾಲು ಧರಿಸಿದವರಿಗೆ ಪ್ರವೇಶ ನಿರಾಕರಿಸಲಾಯಿತು. ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಮಾರ್ಗದರ್ಶನದಲ್ಲಿ ಕಾಲೇಜುಗಳ ಬಳಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
6 ವರ್ಷದಿಂದ ಪತಿಯ ಊಟದಲ್ಲಿ ಡ್ರಗ್ಸ್ ಬೆರೆಸುತ್ತಿದ್ದ ಪತ್ನಿಯ ಬಂಧನ
ಅಣ್ಣ ಹೇಳಿದಂತೆ ಅತ್ತಿಗೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಮೈದುನ
ಕೇಸರಿ ಶಾಲು ಧರಿಸಿ ವಿದ್ಯಾರ್ಥಿಗಳಿಂದ ಮೆರವಣಿಗೆ!: ಬೀದಿ ರಾಜಕೀಯ ಕ್ಯಾಂಪಸ್ ನೊಳಗೆ ನುಸುಳಿದ್ದು ಹೇಗೆ?
ಪಂಜಾಬ್ ಸಿಎಂ ಅಭ್ಯರ್ಥಿಯನ್ನು ಘೋಷಿಸಿದ ಕಾಂಗ್ರೆಸ್
ಹಿಜಾಬ್ ವಿವಾದ: ಜನರಿಗೆ ತಮ್ಮಿಷ್ಟದ ಉಡುಗೆ ತೊಡುವ ಸ್ವಾತಂತ್ರ್ಯ ಡಾ.ಅಂಬೇಡ್ಕರ್ ನೀಡಿದ್ದಾರೆ | ಶಾಸಕಿ ಕನೀಝ್ ಫಾತಿಮಾ