ಹಿಜಬ್ ಹಾಕಿಕೊಂಡು ಅಧಿವೇಶನಕ್ಕಲ್ಲ ಮೊದಲು ಮಸೀದಿಗೆ ಹೋಗಿ: ಸಚಿವ ಈಶ್ವರಪ್ಪ - Mahanayaka
3:05 AM Wednesday 11 - December 2024

ಹಿಜಬ್ ಹಾಕಿಕೊಂಡು ಅಧಿವೇಶನಕ್ಕಲ್ಲ ಮೊದಲು ಮಸೀದಿಗೆ ಹೋಗಿ: ಸಚಿವ ಈಶ್ವರಪ್ಪ

ewharappa
08/02/2022

ಮೈಸೂರು: ಹಿಜಬ್ ಹಾಕಿಕೊಂಡು ಅಧಿವೇಶನಕ್ಕೆ ಬರುವುದಲ್ಲ. ಮೊದಲು ಮಸೀದಿಗೆ ಹೋಗಿ. ಎಷ್ಟು ಜನ ಮಹಿಳೆಯರು ಮಸೀದಿಗೆ ಹೋಗಲು ಅವಕಾಶ ಇದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಪ್ರಶ್ನಿಸಿದ್ದಾರೆ.-

ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಹಿಜಬ್ ಧರಿಸಿ ಅಧಿವೇಶನಕ್ಕೆ ಬರುವೆ ಎಂದು ಶಾಸಕಿ ಖನೀಜಾ ಫಾತಿಮಾಗೆ ಹೇಳಿಕೆ ಪ್ರತಿಕ್ರಿಯಿಸಿರುವ ಸಚಿವರು, ಧಮ್ ಇದ್ದರೆ ಮಸೀದಿಗೆ ಮುಸ್ಲಿಂ ಮಹಿಳೆಗೆ ಪ್ರವೇಶ ಕೊಡಿಸಿ ಎಂದು ಸವಾಲಾಕಿದ್ದಾರೆ.ನಾವು ಶಾಲೆಗೆ ಮಾತ್ರ ಹಿಜಬ್ ನಿಷೇಧಿಸಿದ್ದೇವೆ. ಹೊರಗಡೆಗೆ ನಿಷೇಧ ಮಾಡಿಲ್ಲ ಎಲ್ಲಾ ಕಡೆ ಹಾಕಿಕೊಂಡು ಹೋಗಬಹುದು ಎಂದು ಹೇಳಿದರು.

ಹಿಜಬ್ ವಿಚಾರದಲ್ಲಿ ಎಂಎಲ್ಸಿ ಸಿಎಂ ಇಬ್ರಾಹಿಂ ಹೇಳಿಕೆಗೆ ಪ್ರತಿಕ್ರಿಯಿಸಿ, ಇದು ವಿಕೃತಿಯಿಂದ ಕೂಡಿದ ಹೇಳಿಕೆ. ಇದು ಮುಸ್ಲಿಂ ಮಹಿಳೆಯರಿಗೆ ಮಾಡಿದ ಅವಮಾನ. ಅವರ ಮುಖ ನೋಡಲು ಹಿಜಬ್ ತೆಗೆಯಬೇಕಾ? ಇಬ್ರಾಹಿಂ ಅವರ ಈ ಹೇಳಿಕೆ ಯಾರೂ ಒಪ್ಪುವಂತದಲ್ಲ. ಸಮವಸ್ತ್ರದ ಹಿನ್ನೆಲೆಯಿಂದ ಈ ಆದೇಶ ಮಾಡಲಾಗಿದೆ ಎಂದರು.

ಉಡುಪಿಯಿಂದಲೇ ಕಾಂಗ್ರೆಸ್ ಸರ್ವನಾಶದ ಆರಂಭವಾಗಿದೆ. ಈ ಹಿಂದೆ ಗೋ ಹತ್ಯೆ ನಿಷೇಧವನ್ನು ಉಡುಪಿಯಲ್ಲೇ ಮಾಡಿದ್ದರು. ಆಗ ಸಿದ್ದರಾಮಯ್ಯ ಸಿಎಂ ಅಧಿಕಾರ ಕಳೆದುಕೊಂಡರು. ಚಾಮುಂಡೇಶ್ವರಿಯಲ್ಲೂ ಸೋತರು ಈಗ ಅಲ್ಲಿಂದಲೇ ಹಿಜಬ್ ವಿವಾದ ಸೃಷ್ಟಿಯಾಗಿದೆ. ಹಿಜಬ್ ವಿವಾದದ ಹಿಂದೆ ಸಂಪೂರ್ಣವಾಗಿ ಕಾಂಗ್ರೆಸ್ ಪಕ್ಷ ಇದೆ. ವೋಟ್ ಬ್ಯಾಂಕ್‍ಗಾಗಿ ಕಾಂಗ್ರೆಸ್ ಮುಖಂಡರಿಂದ ಈ ಕೆಲಸವಾಗುತ್ತಿದೆ. ಹಿಜಬ್ ವಿಚಾರದಿಂದಲೇ ಕಾಂಗ್ರೆಸ್ ಸರ್ವನಾಶವಾಗುವುದು ಖಚಿತ ಎಂದು ತಿಳಿಸಿದರು.

ಕಾಂಗ್ರೆಸ್ ಮುಖಂಡರು ಮನಸು ಮಾಡಿದ್ದರೆ ಆರು ಮಂದಿ ವಿದ್ಯಾರ್ಥಿನಿಯರಿಗೆ ತಿಳುವಳಿಕೆ ನೀಡಿ ಸಮಸ್ಯೆ ಬಗರಹರಿಸಬಹುದಿತ್ತು. ಆ ಆದರೆ ಕಾಂಗ್ರೆಸ್‍ಗೆ ಮುಸ್ಲಿಂ ಮತಗಳೇ ಮುಖ್ಯವಾದವು. ಕಾಂಗ್ರೆಸ್ ಒಡೆದು ಆಳುವ ನೀತಿ ಅನುಸರಿಸುತ್ತಿದೆ. ಹಿಂದೆ ವೀರಶೈವ ಲಿಂಗಾಯತ ಧರ್ಮ, ನಂತರ ಮತಾಂತರದ ವಿಷಯ ಗೋಹತ್ಯೆ, ಈಗ ಹಿಜವ್ ಅವರ ರಾಜಕೀಯ ವಿಚಾರವಾಗಿದೆ. ಹಿಂದೂ ಮುಸ್ಲಿಂ ಒಡೆದಿದ್ದು ಕಾಂಗ್ರೆಸ್ ಅಪವಾದ ಮಾತ್ರ ಬಿಜೆಪಿ ಮೇಲೆ ಎಂದು ಸಚಿವ ಈಶ್ವರಪ್ಪ ಕಿಡಿಕಾರಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ನದಿಯಗೆ ಕೈ ತೊಳೆಯಲು ತೆರಳಿದ ಯುವಕ ಮೊಸಳೆ ದಾಳಿಗೆ ಬಲಿ

ಕಾಲೇಜಿನ ಧ್ವಜಸ್ತಂಭದಲ್ಲಿ ಕೇಸರಿ ಬಾವುಟ ಹಾರಿಸಿದ ವಿದ್ಯಾರ್ಥಿಗಳು!

ತಮಿಳುನಾಡಿನ 16 ಮೀನುಗಾರರ ಬಂಧನ

ಬಿಎಸ್ ​ಪಿ ವರಿಷ್ಠೆ ಮಾಯಾವತಿಯಿಂದ ಪಂಜಾಬ್ ​ನಲ್ಲಿ ಚುನಾವಣಾ ರ‍್ಯಾಲಿ

ಪೈಪ್ ಲೈನ್ ಕಾಮಗಾರಿಗೆಂದು ಅಗೆದಿದ್ದ ಗುಂಡಿಯೊಳಗೆ ಬಿದ್ದು ಬಾಲಕಿ ಸಾವು

 

ಇತ್ತೀಚಿನ ಸುದ್ದಿ