ಎಟಿಎಂಗೆ ಹಾನಿ ಮಾಡಿ ಹಣ ಕಳವಿಗೆ ಯತ್ನ: ಆರೋಪಿಯ ಬಂಧನ - Mahanayaka
1:00 AM Wednesday 11 - December 2024

ಎಟಿಎಂಗೆ ಹಾನಿ ಮಾಡಿ ಹಣ ಕಳವಿಗೆ ಯತ್ನ: ಆರೋಪಿಯ ಬಂಧನ

atm
09/02/2022

ಮಂಗಳೂರು: ಎಟಿಎಂಗೆ ಹಾನಿ ಮಾಡಿ ಅದರಲ್ಲಿದ್ದ ಹಣವನ್ನು ಕಳವು ಮಾಡಲು ಯತ್ನಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಗರದ ಹೊರವಲಯದ ತೊಕ್ಕೊಟ್ಟು ಬಳಿ ನಡೆದಿದೆ.

ಕೊಪ್ಪಳ ಜಿಲ್ಲೆಯ ಬೀರಪ್ಪ ಬಂಧಿತ ಆರೋಪಿಯಾಗಿದ್ದಾನೆ. ಈತ ನಸುಕಿನ ಜಾವ 2 ಗಂಟೆ ಸುಮಾರಿಗೆ ತೊಕ್ಕೊಟ್ಟು ಬಳಿ ಇರುವ ಬ್ಯಾಂಕ್‌ ಆಫ್‌ ಬರೋಡದ ಎಟಿಎಂಗೆ ನುಗ್ಗಿ ಯಂತ್ರವನ್ನು ಜಖಂಗೊಳಿಸಿ ಹಣ ದೋಚಲು ಯತ್ನಿಸಿದ್ದಾನೆ. ಈ ಕೃತ್ಯ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಬ್ಯಾಂಕ್‌ ಕಣ್ಗಾವಲು ಅಧಿಕಾರಿಗಳು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

 ಪ್ರಿಯಾಂಕ್​ ಖರ್ಗೆ ಪತ್ನಿಯ ಮೊಬೈಲ್​ ಕಳವು: ದೂರು ದಾಖಲು

ಮೃತ ಗಂಡನ ನಕಲಿ ದಾಖಲೆ ಸಲ್ಲಿಸಿ ಮೂರು ಕೋಟಿ ರೂ. ವಂಚಿಸಿದ ಪತ್ನಿ

ಇಂಟರ್ವ್ಯೂ ಮುಗಿಸಿ ಬರುತ್ತಿದ್ದವನ ಮೇಲೆ ಟ್ರಾಫಿಕ್ ಪೊಲೀಸ್ ಹಲ್ಲೆ: ಯುವಕನ ಕುತ್ತಿಗೆಗೆ ಗಾಯ

ಮನೆಗೋಡೆ ಕುಸಿದು ಕಾರ್ಮಿಕ ಸ್ಥಳದಲ್ಲೇ ಸಾವು

ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ಬೈಕ್ ಡಿಕ್ಕಿಯಾಗಿ ಪರಾರಿಯಾದ ಬೈಕ್: ಮಹಿಳೆ ಸಾವು

 

ಇತ್ತೀಚಿನ ಸುದ್ದಿ