ಹಿಜಾಬ್ -ಕೇಸರಿ ಶಾಲು ವಿವಾದ: ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಣೆ - Mahanayaka
2:05 AM Wednesday 11 - December 2024

ಹಿಜಾಬ್ -ಕೇಸರಿ ಶಾಲು ವಿವಾದ: ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಣೆ

suprim court
10/02/2022

ನವದೆಹಲಿ: ಕರ್ನಾಟಕದಲ್ಲಿ ಭುಗಿಲೆದ್ದಿರುವ ಹಿಜಾಬ್ ಮತ್ತು ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಮಧ್ಯಪ್ರವೇಶಿಸಿ ತುರ್ತು ವಿಚಾರಣೆ ನಡೆಸಬೇಕು ಎಂಬ ಮನವಿಯನ್ನು ಸುಪ್ರೀಂಕೋರ್ಟ್‌ ನಿರಾಕರಿಸಿದೆ.

ರಾಜ್ಯದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ಹಿರಿಯ ನಾಯಕ ಕಪಿಲ್ ಸಿಬಲ್, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಸುಪ್ರೀಂಕೋರ್ಟ್ ಮಧ್ಯಪ್ರವೇಶಿಸಿ ತುರ್ತು ವಿಚಾರಣೆ ನಡೆಸುವಂತೆ ಮನವಿ ಮಾಡಿಕೊಂಡಿದ್ದರು.

ಆದರೆ ಕೋರ್ಟ್​ ಈ ವಿಚಾರದಲ್ಲಿ ಮಧ್ಯಪ್ರವೇಶಿಸಲು ಒಪ್ಪಲಿಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ವಿಚಾರಣೆ ನಡೆಸಲಿದೆ ಎಂದು ಹೇಳಿದ ಸುಪ್ರೀಂಕೋರ್ಟ್, ಈ ಹಂತದಲ್ಲಿ ಏಕೆ ಮಧ್ಯಪ್ರವೇಶಿಸಬೇಕೆಂದು ಪ್ರಶ್ನಿಸಿ ಮನವಿಯನ್ನು ನಿರಾಕರಿಸಿದೆ.

ಹಿಜಾಬ್‌ ನಿರ್ಬಂಧಿಸಿರುವ ಶಿಕ್ಷಣ ಸಂಸ್ಥೆಗಳ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಗೆ ಹೈಕೋರ್ಟ್ ಬುಧವಾರ ವಿಶೇಷ ಪೀಠ ರಚನೆ ಮಾಡಿದೆ. ಈ ಪೀಠದಲ್ಲಿ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ.ಕೃಷ್ಣ ಎಸ್.ದೀಕ್ಷಿತ್ ಹಾಗೂ ನ್ಯಾ.ಖಾಜಿ ಜೈಬುನ್ನೀಸಾ ಇದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಅಭಿವೃದ್ಧಿಯ ಹರಿಕಾರ ಪ್ರೀತಂ ಗೌಡ ಅವರಿಗೆ ಸಚಿವ ಸ್ಥಾನ ನೀಡಿ: ಯುವ ಬಿಜೆಪಿ ಮುಖಂಡ ಲಿಖಿತ್ ಗೌಡ ಒತ್ತಾಯ

ಹಿಜಬ್-ಕೇಸರಿ ವಿವಾದ: ಶಾಲೆಗಳು ಧರ್ಮ ಪ್ರದರ್ಶನದ ಸ್ಥಳವಲ್ಲ; ನಟಿ ಖುಷ್ಬೂ

ಮುಸ್ಲಿಂ ಶಿಕ್ಷಣ ಸಂಸ್ಥೆಯಲ್ಲಿ ಹಿಂದೂ ವಿದ್ಯಾರ್ಥಿನಿಯವರು ಬುರ್ಖಾ ಧರಿಸಬೇಕಾ?: ಮಾಜಿ ಸಚಿವ ಬಸವರಾಜ್ ರಾಯರೆಡ್ಡಿ

ಅಕ್ರಮ ಸಂಬಂಧ ಗಂಡನಿಗೆ ಗೊತ್ತಾದ ಹಿನ್ನಲೆ: ಪತಿಯನ್ನೇ ಕೊಲೆ ಮಾಡಿಸಿದ ಪತ್ನಿ

ಇತ್ತೀಚಿನ ಸುದ್ದಿ