ಜಿ.ಪಂ., ತಾ.ಪಂ. ಚುನಾವಣೆ: ಎಸ್ಸಿ, ಎಸ್ಟಿಗೆ ಮಾತ್ರ ಮೀಸಲಾತಿ: ಸಚಿವ ಈಶ್ವರಪ್ಪ
ಬೆಂಗಳೂರು: ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ ವಿಚಾರಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಆದೇಶ ತಂದಿದ್ದು, ಇದರ ಪ್ರಕಾರ ಎಸ್ಸಿ, ಎಸ್ಟಿಗೆ ಮಾತ್ರ ಮೀಸಲಾತಿ ಅನ್ವಯ ಎಂದಿದೆ. ಈ ನಿಟ್ಟಿನಲ್ಲಿ ಒಬಿಸಿಗಳಿಗೆ ಮೀಸಲಾತಿ ಕೊಡುವಂತಿಲ್ಲ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, , ಎಸ್ಸಿ, ಎಸ್ಟಿಗಳಿಗೆ ಮಾತ್ರ ಮೀಸಲಾತಿ ಅನ್ವಯ ಎಂದು ನ್ಯಾಯಾಲಯದ ಆದೇಶ ಆಗಿರುವುದರಿಂದ ಹಿಂದುಳಿದ ವರ್ಗಗಳ ಮೀಸಲಾತಿ ಗೊಂದಲದ ಹಿನ್ನೆಲೆಯಲ್ಲಿ ಚುನಾವಣೆ ನಮ್ಮ ಕಾಲಾವಧಿಯಲ್ಲಿ ನಡೆಯುವ ಸಾಧ್ಯತೆ ಇಲ್ಲ ಎಂದು ಅವರು ಪರೋಕ್ಷವಾಗಿ ಹೇಳಿದರು.
ಚುನಾವಣೆ ನಡೆಸೋಕೆ ನಾವು ಹಿಂದೇಟು ಹಾಕುತ್ತಿಲ್ಲ. ಚುನಾವಣಾ ಆಯೋಗ ಕ್ಷೇತ್ರ ಪುನರ್ವಿಂಗಡನೆ ಹಾಗೂ ಮೀಸಲಾತಿ ಬಗ್ಗೆ ಘೋಷಣೆಯನ್ನು ಮಾಡಿದೆ. ಆದರೆ ಮೀಸಲಾತಿ ಹಾಗೂ ಕ್ಷೇತ್ರ ಪುನರ್ ವಿಂಗಡಣೆ ಬಗ್ಗೆ 780 ಆಕ್ಷೇಪಗಳು ಬಂದವು. ಆ ಕಾರಣಕ್ಕಾಗಿ ಬಿಲ್ ತರಲಾಯಿತು. ಲಕ್ಷ್ಮೀನಾರಾಯಣ್ ನೇತೃತ್ವದಲ್ಲಿ ಕಮಿಟಿ ಮಾಡಿದ್ದೆವು. ಈಗ ಸುಪ್ರೀಂ ಕೋರ್ಟ್ ಆದೇಶ ಬಂದಿದೆ. ಇದರ ಪ್ರಕಾರ ಎಸ್ಸಿ, ಎಸ್ಟಿಗೆ ಮಾತ್ರ ಮೀಸಲಾತಿ ಅನ್ವಯ ಎಂದಿದೆ. ಈ ನಿಟ್ಟಿನಲ್ಲಿ ಒಬಿಸಿಗಳಿಗೆ ಮೀಸಲಾತಿ ಕೊಡುವಂತಿಲ್ಲ. ಒಬಿಸಿ ಕೂಡ ಸಾಮಾನ್ಯ ಕೆಟಗರಿಯಲ್ಲಿ ಬರಲಿದೆ ಎಂದರು.
ನಮಗೆ ಚುನಾವಣೆ ಮಾಡಲು ಆಸೆ. ಈಗಲೂ ಚುನಾವಣೆ ನಡೆದರೆ ನಮಗೆ ಹೆಚ್ಚು ಸ್ಥಾನ ಸಿಗಲಿದೆ. ಓಬಿಸಿ ಮೀಸಲಾತಿ ಬಿಟ್ಟು ಚುನಾವಣೆ ಮಾಡಲು ಸಾಧ್ಯನಾ ಎಂದು ಪ್ರಶ್ನಿಸಿದರಲ್ಲದೆ, ಈ ಬಗ್ಗೆ ಸಿಎಂ ಹಾಗೂ ತಜ್ಞರ ಜೊತೆಗೂ ಮಾತನಾಡುತ್ತೇನೆ. ಕಾನೂನು ಬದ್ಧವಾಗಿ ಚುನಾವಣೆ ನಡೆಯಬೇಕು ಎಂದು ನಾವು ಬಯಸುತ್ತೇವೆ. ತಜ್ಞರ ಸಮಿತಿ ಮತ್ತೆ ನೇಮಕ ಮಾಡಿದರೆ ನಮ್ಮ ಅವಧಿಯಲ್ಲಿ ಚುನಾವಣೆ ಆಗಲ್ಲ. ಸುಪ್ರೀಂ ಕೋರ್ಟ್ ಆದೇಶ ಮೀರಿ ಚುನಾವಣೆ ಮಾಡಲು ಹೋದರೆ ಒಬಿಸಿಗೆ ಅನ್ಯಾಯವಾಗಲಿದೆ. ಒಬಿಸಿಗೆ ಅನ್ಯಾಯ ಆಗಲು ನಾವು ಬಿಡುವುದಿಲ್ಲ. ಹಾಗೆ ಮಾಡಿದರೆ ಯಾರಾದರೂ ನ್ಯಾಯಾಲಯಕ್ಕೆ ಹೋದರೆ ಎಷ್ಟು ವರ್ಷ ಚುನಾವಣೆ ಮುಂದೂಡಲ್ಪಡುತ್ತೊ ಗೊತ್ತಿಲ್ಲ ಸಚಿವರು ಹೇಳಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಶಾಲಾ ಕಾಲೇಜುಗಳಲ್ಲಿ ಕೇಸರಿ ಶಾಲು ಧರಿಸಬೇಡಿ: ಆರೆಸ್ಸೆಸ್ ಸೂಚನೆ
ಅಪಾರ್ಟ್‍ಮೆಂಟ್ ಛಾವಣಿ ಕುಸಿದು ಇಬ್ಬರು ಸಾವು, 6 ಮಂದಿ ಗಾಯ
ತಲೆ ಮೇಲೆ ಮರದ ಕೊಂಬೆ ಬಿದ್ದು ಕೋಮಾದಲ್ಲಿದ್ದ ಬಾಲಕಿ ಸಾವು
ಸಾಲಭಾದೆ ತಾಳಲಾರದೇ ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಸಾವು
ಸಬ್ ಇನ್ಸ್ ಪೆಕ್ಟರ್ ನ ಕಾರಿನ ಗಾಜು ಒಡೆದು, ಹಣ ಲ್ಯಾಪ್ ಟಾಪ್ ದೋಚಿದ ಕಳ್ಳ!