ಜಮೀನಿನಲ್ಲಿ ಕುಳಿತಿದ್ದ ಮಕ್ಕಳಿಗೆ ಕಾರು ಡಿಕ್ಕಿ: ಇಬ್ಬರು ಮಕ್ಕಳು ಸೇರಿ ಮೂವರ ಸಾವು
ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕುಳಿತಿದ್ದ ಮಕ್ಕಳಿಗೆ ಡಿಕ್ಕಿ ಹೊಡೆದು ಇಬ್ಬರು ಮಕ್ಕಳು ಹಾಗೂ ಚಾಲಕ ಸೇರಿ ಮೂವರು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಸುತ್ತಕೋಟಿ ಗ್ರಾಮದ ಬಳಿ ನಡೆದಿದೆ.
ಚಾಲಕ ಪ್ರಕಾಶ (48), ಶಾಲಿನಿ (10) ಮತ್ತು ಯಶೋಧಾ (8) ಮೃತ ದುರ್ದೈವಿಗಳು. ಘಟನೆಯಲ್ಲಿ ಕಾರನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಯಶೋದಾ ಮತ್ತು ಶಾಲಿನಿ ಜಮೀನಿನಲ್ಲಿ ಕುಳಿತಿದ್ದ ವೇಳೆ ಚಾಲಕ ಪ್ರಕಾಶ್ ಅವರ ನಿಯಂತ್ರಣ ತಪ್ಪಿ ಮಕ್ಕಳಿಗೆ ಕಾರು ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ. ಮಕ್ಕಳಿಗೆ ಡಿಕ್ಕಿ ಹೊಡೆದು ನಂತರ ಮರಕ್ಕೆ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಗಂಭೀರವಾಗಿ ಗಾಯಗೊಂಡಿದ್ದ ಮಕ್ಕಳನ್ನು ಹಿರೇಕರೂರು ತಾಲೂಕು ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಹಂಸಭಾವಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಶಬರಿಮಲೆಗೆ ತೆರಳಿದ ಕರ್ನಾಟಕದ ಟಿಟಿ ವಾಹನ ಅಪಘಾತ: ಮೂವರ ಸಾವು, 11 ಮಂದಿಗೆ ಗಾಯ
ಹುಟ್ಟುಹಬ್ಬದಂದೇ ಬಿಸಿ ಸಾಂಬಾರ್ ಪಾತ್ರೆಗೆ ಬಿದ್ದು ಬಾಲಕಿ ಸಾವು