ಹಿರಿಯ ಕವಿ, ನಾಡೋಜ ಚನ್ನವೀರ ಕಣವಿ ವಿಧಿವಶ - Mahanayaka

ಹಿರಿಯ ಕವಿ, ನಾಡೋಜ ಚನ್ನವೀರ ಕಣವಿ ವಿಧಿವಶ

Chennaveera-Kanavi1
16/02/2022

ಧಾರವಾಡ: ಕೋವಿಡ್‌ ಸೋಂಕಿನಿಂದಾಗಿ ಕಳೆದ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕನ್ನಡದ ಜನಪ್ರಿಯ ಹಿರಿಯ ಕವಿ ನಾಡೋಜ ಡಾ. ಚನ್ನವೀರ ಕಣವಿ ನಿಧನರಾಗಿದ್ದಾರೆ.

ಕೋವಿಡ್‌ ಸೋಂಕಿಗೆ ತುತ್ತಾಗಿದ್ದ ಕವಿ ನಾಡೋಜ ಡಾ. ಚನ್ನವೀರ ಕಣವಿ(93) ಅವರನ್ನು ಜ.14 ರಂದು ಧಾರವಾಡದ ಎಸ್‌ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಜೂ. 28,1928ರಂದು ಧಾರವಾಡ ಜಿಲ್ಲೆಯ ಹೊಂಬಳದಲ್ಲಿ ಜನಿಸಿದ್ದ ಚನ್ನವೀರ ಕಣವಿಯವರು ಕರ್ನಾಟಕ ವಿಶ್ವವಿದ್ಯಾಲಯದಿಂದ ಬಿಎ ಮತ್ತು ಎಂಎ ಪದವಿ ಪಡೆದರು. ಕರ್ನಾಟಕ ವಿಶ್ವವಿದ್ಯಾಲಯದ ವ್ಯಾಸಂಗ ಪ್ರಸರಣ ಮತ್ತು ಪ್ರಕಟಣಾ ವಿಭಾಗದ ಕಾರ್ಯದರ್ಶಿಯಾಗಿ, ಪ್ರಸಾರಾಂಗದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.

ಡಾ. ಚನ್ನವೀರ ಕಣವಿ ಮೊದಲ ಕವಲ ಸಂಕಲನ ಕಾವ್ಯಾಕ್ಷಿ 1949ರಲ್ಲಿ ಬಿಡುಗಡೆಯಾಗಿತ್ತು. ಭಾವಜೀವಿ, ಆಕಾಶಬುಟ್ಟಿ, ಮಣ್ಣಿನ ಮೆರವಣಿಗೆ, ನೆಲಮುಗಿಲು, ಜೀವಧ್ವನಿ ಮುಂತಾದ ಕವನ ಸಂಕಲನಗಳನ್ನು ಅವರು ರಚಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕೆಂಪುಕೋಟೆ ಗಲಭೆಯ ಪ್ರಮುಖ ಆರೋಪಿ ಸಿಧು ಅಪಘಾತದಲ್ಲಿ ಸಾವು!

ಅಮ್ಮನ ಸಾವಿಗೆ ಕಾರಣವಾದ ಮಗಳ ವಾಟ್ಸಾಪ್ ಸ್ಟೇಟಸ್‌

ಬಹುಕೋಟಿ ಮೇವು ಹಗರಣ: ಲಾಲೂ ಪ್ರಸಾದ್ ಯಾದವ್‌ ದೋಷಿ; ಸಿಬಿಐ ಕೋರ್ಟ್‌

ಜಮೀನಿನಲ್ಲಿ ಕುಳಿತಿದ್ದ ಮಕ್ಕಳಿಗೆ ಕಾರು ಡಿಕ್ಕಿ: ಇಬ್ಬರು ಮಕ್ಕಳು ಸೇರಿ ಮೂವರ ಸಾವು

ಇತ್ತೀಚಿನ ಸುದ್ದಿ