ಫ್ಲ್ಯಾಟ್ ನೊಳಗೆ ಅರೆನಗ್ನ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ: ದೂರು ದಾಖಲು
ನವದೆಹಲಿ: ದೆಹಲಿಯ ಬುರಾರಿ ಪ್ರದೇಶದಲ್ಲಿ ಅರೆನಗ್ನ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆಯಾಗಿರುವ ಘಟನೆ ಶುಕ್ರವಾರ ಪತ್ತೆಯಾಗಿರುವುದಾಗಿ ದೆಹಲಿ ಪೊಲೀಸರು ತಿಳಿಸಿದ್ದಾರೆ.
ಬುರಾರಿಯ ಕೌಶಿಕ್ ಎನ್ ಕ್ಲೇವ್ ಪ್ರದೇಶದಲ್ಲಿ ನಡೆದ ಈ ಘಟನೆಯ ಆರೋಪಿಯನ್ನು ಅಮಾನ್ ಎಂದು ಗುರುತಿಸಲಾಗಿದ್ದು, ಈತ ನಾಪತ್ತೆಯಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪ್ರಕರಣದ ಬಗ್ಗೆ ತನಿಖೆ ಆರಂಭಿಸಿರುವ ಪೊಲೀಸರು, ಎಫ್ ಐಆರ್ ದಾಖಲಿಸಿಕೊಂಡಿರುವುದಾಗಿ ತಿಳಿಸಿದ್ದು, ಪ್ರಾಥಮಿಕ ತನಿಖೆ ಪ್ರಕಾರ,
ಕೌಶಿಕ್ ಎನ್‌ಕ್ಲೇವ್‌ನ ಫ್ಲ್ಯಾಟ್ ನಲ್ಲಿ ಅಮಾನ್ ಮತ್ತು ಪತ್ನಿ ಪ್ರಿಯಾಂಕಾ ರಾವತ್ ವಾಸವಾಗಿದ್ದರು ಎಂದು ತಿಳಿದು ಬಂದಿದೆ.
ಅಮಾನ್ ಪತ್ನಿ ರಾತ್ರಿ 8ಗಂಟೆಗೆ ಫ್ಲ್ಯಾಟ್ ಗೆ ಬಂದಾಗ ಅರೆನಗ್ನ ಸ್ಥಿತಿಯಲ್ಲಿದ್ದ ಯುವತಿಯ ಶವ ಪತ್ತೆಯಾಗಿತ್ತು. ಕೂಡಲೇ ಪ್ರಿಯಾಂಕಾ ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ದೇವಸ್ಥಾನದಲ್ಲಿ ಎಸ್ ಸಿ ಮಹಿಳೆಗೆ ಪ್ರಾರ್ಥನೆ ಮಾಡಲು ಅವಕಾಶ ನೀಡದ 20 ಅರ್ಚಕರು: ಪ್ರಕರಣ ದಾಖಲು
ಆಸ್ತಿ ವಿಚಾರ: ಹೆತ್ತ ತಾಯಿಗೆ ಕ್ರೂರವಾಗಿ ಥಳಿಸಿದ ಮಗ
ಬಹು ನಿರೀಕ್ಷಿತ ‘ಜೇಮ್ಸ್’ ಚಿತ್ರ ಬಿಡುಗಡೆ ದಿನಾಂಕ ಫಿಕ್ಸ್
ಮಹಿಳೆ ಶವ ಪತ್ತೆ: ಅತ್ಯಾಚಾರ, ಕೊಲೆ ಶಂಕೆ