ಕೆಂಪುಕೋಟೆ ಮೇಲೆ ಕೇಸರಿ ಬಾವುಟ ಹಾರಿಸುತ್ತೇನೆ ಎಂಬ ಹೇಳಿಕೆ: ಸಚಿವ ಈಶ್ವರಪ್ಪ ರಾಜೀನಾಮೆ ಒತ್ತಾಯಿಸಿ ಪ್ರತಿಭಟನೆ
ಹುಬ್ಬಳ್ಳಿ: ಕೆಂಪುಕೋಟೆ ಮೇಲೆ ಕೇಸರಿ ಬಾವುಟ ಹಾರಿಸುತ್ತೇನೆ ಎಂದು ಹೇಳಿಕೆ ನೀಡಿದ್ದ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿ ಧಾರವಾಡ ಜಿಲ್ಲಾ ಯುತ್ ಕಾಂಗ್ರೆಸ್ ಘಟಕದ ಪದಾಧಿಕಾರಿಗಳು ಶನಿವಾರ ಪ್ರತಿಭಟನೆ ನಡೆಸಿದ್ದಾರೆ.
ನಗರದ ಬಿಜೆಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ಸಚಿವ ಈಶ್ವರಪ್ಪ ಮತ್ತು ಶಾಸಕ ಬಸನಗೌಡ ಯತ್ನಾಳ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಸಂವಿಧಾನ ಬಾಹಿರ ಹೇಳಿಕೆ ನೀಡಿರುವ ಈಶ್ವರಪ್ಪ ಅವರಿಂದ ತಕ್ಷಣ ರಾಜೀನಾಮೆ ಪಡೆಯಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಗ್ರಹಿಸಿದರು.
ಈ ವೇಳೆ ಮುಖಂಡ ರಜತ ಉಳ್ಳಾ ಗಡ್ಡಿಮಠ ಮಾತನಾಡಿ, ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸುತ್ತೇನೆ ಎಂದಿರುವ ಈಶ್ವರಪ್ಪ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಬೇಕು. ಸಚಿವರಾಗಿ ಹೀಗೆ ಮಾತನಾಡಿರುವುದು ಸರಿಯಲ್ಲ. ಅವರು ಉಗ್ರಗಾಮಿ, ದೇಶದ್ರೋಹಿಯಂತೆ ಹೇಳಿಕೆ ನೀಡುತ್ತಿದ್ದಾರೆ. ಕೂಡಲೇ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸಬೇಕು’ ಎಂದು ಒತ್ತಾಯಿಸಿದರು.
ಪ್ರತಿಭಟನೆ ಸಂದರ್ಭದಲ್ಲಿ ಕಾರ್ಯಕರ್ತರಾದ ಷಹಜಮಾನ್ ಮುಜಾಯಿದ್, ಶಿವ ಬೆಂಡಿಗೇರಿ, ಆರಿಫ್ ಭದ್ರಾಪುರ, ಸಂದಿಲ್ ಕುಮಾರ, ಇಕ್ಬಾಲ್ ನವಲೂರು, ಸುನಿಲ್ ಮರಾಠೆ, ಅರುಣ ಹಳ್ಳಿಕೇರಿ, ಸಾದಿಕ್ ಎಕ್ಕುಂಡಿ, ಆಕಾಶ ಕೋಣೇರಿ, ಸಂತೋಷ ನಾಯಕ ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮತಗಟ್ಟೆಯಲ್ಲಿ ನೂಕುನುಗ್ಗಲು: ಕ್ಷಮೆ ಕೇಳಿದ ತಮಿಳು ನಟ ವಿಜಯ್
ನೀಲಿ ಸಾಗರವಾದ ಬೆಂಗಳೂರು: ವಿಧಾನಸೌಧ-ಹೈಕೋರ್ಟ್ ಚಲೋ ಬೃಹತ್ ಪ್ರತಿಭಟನೆ
ಸಚಿವ ಈಶ್ವರಪ್ಪ ಭಾವಚಿತ್ರಕ್ಕೆ ಬಿಜೆಪಿ ಮುಖಂಡರಿಂದ ಹಾಲಿನ ಅಭಿಷೇಕ
ಜಮ್ಮು ಕಾಶ್ಮಿರದಲ್ಲಿ ಗುಂಡಿನ ಚಕಮಕಿ: ಉಗ್ರನ ಹತ್ಯೆ; ಇಬ್ಬರು ಯೋಧರು ಹುತಾತ್ಮ
ದಲಿತ ಕುಟುಂಬಕ್ಕೆ, ನ್ಯಾಯಾಲಯಕ್ಕೆ ವಂಚನೆ: ವಕೀಲನಿಗೆ ಜೀವಾವಧಿ ಶಿಕ್ಷೆ