ಕೌಟುಂಬಿಕ ಕಲಹ: ಇಬ್ಬರು ಯುವಕರ ಬರ್ಬರ ಹತ್ಯೆ
ಶಿವಮೊಗ್ಗ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡು ಇಬ್ಬರು ಯುವಕರು ಬರ್ಬರವಾಗಿ ಹತ್ಯೆಯಾಗಿರುವ ಘಟನೆ ಶಿವಮೊಗ್ಗ ಹೊರವಲಯದ ಸೂಳೆಬೈಲು ಶಾಂತಿನಗರ 7 ನೇ ಕ್ರಾಸ್ ನಲ್ಲಿ ಶನಿವಾರ ತಡರಾತ್ರಿ ನಡೆದಿದೆ.
ಸಲೀಮ್ ಅಹಮದ್(22) ಹಾಗೂ ಅಬ್ದುಲ್ ದಸ್ತಗಿರಿ(23) ಕೊಲೆಯಾದವರು. ಕೌಟುಂಬಿಕ ವೈಷಮ್ಯಕ್ಕೆ ಸಂಬಂಧಿಸಿದಂತೆ ನಿನ್ನೆ ತಡರಾತ್ರಿ ಇಬ್ಬರ ನಡುವೆ ಗಲಾಟೆ ಆರಂಭವಾಗಿದೆ. ಈ ವೇಳೆ ಮಾತಿಗೆ ಮಾತು ಬೆಳೆದು ಮಾರಕಾಸ್ತ್ರಗಳಿಂದ ಒಬ್ಬರಿಗೊಬ್ಬರು ಹೊಡೆದಾಡಿಕೊಂಡಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಅವರು ಸಾವನ್ನಪ್ಪಿದ್ದಾರೆ.
ಈ ಘಟನೆ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮೊಬೈಲ್ ಕೊಡಿಸಲ್ಲ ಎಂದಿದ್ದಕ್ಕೆ ಪೆಟ್ರೋಲ್ ಸುರಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ
ಭಾರತ ಮಾತೆಯ ರಕ್ಷಣೆಗೋಸ್ಕರ ಮನೆಯಲ್ಲಿ ತಲವಾರ್ ಇಟ್ಟುಕೊಳ್ಳಿ: ಪ್ರಮೋದ್ ಮುತಾಲಿಕ್ ಕರೆ
ದಲಿತರು ಮಾಧ್ಯಮಗಳ ಆರಂಭಿಸುವ ಮುನ್ನ ಇದನ್ನೊಮ್ಮೆ ಓದಿ….
ಸಂವಿಧಾನ ಪರ ಸಂಘಟನೆಗಳಿಂದ ಹೊಸ ಮಾಧ್ಯಮ ತರಲು ಗಂಭೀರ ಚಿಂತನೆ!