ಆರ್.ಜೆ.ರಚನಾ ಹೃದಯಾಘಾತದಿಂದ ನಿಧನ - Mahanayaka
3:19 PM Wednesday 5 - February 2025

ಆರ್.ಜೆ.ರಚನಾ ಹೃದಯಾಘಾತದಿಂದ ನಿಧನ

rj rachana
22/02/2022

ಬೆಂಗಳೂರು: ರೇಡಿಯೋ ಜಾಕಿ ರಚನಾ ಅವರು ಅಕಾಲಿಕವಾಗಿ ನಿಧನರಾಗಿದ್ದು, ಜೆ.ಪಿ. ನಗರದ ಪ್ಲಾಟ್ ನಲ್ಲಿ ರಚನಾಗೆ ಎದೆ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಅವರು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

‘ಸಿಂಪಲ್ಲಾಗ್ ಒಂದು ಲವ್ ಸ್ಟೋರಿ’ ಖ್ಯಾತಿಯ ರೇಡಿಯೋ ಜಾಕಿ ರಚನಾ, ತಮ್ಮ ಮಾತು, ಧ್ವನಿಯಿಂದ ಅಪಾರ ಕೇಳುಗ ಅಭಿಮಾನಿಗಳನ್ನು ಸಂಪಾದಿಸಿದ್ದರು. ಮೂರು ವರ್ಷಗಳ ಹಿಂದೆ ರೇಡಿಯೋ ಜಾಕಿ ಕೆಲಸ ಬಿಟ್ಟಿದ್ದರು ಎನ್ನಲಾಗಿದೆ.

ರಚನಾ ತಂದೆ-ತಾಯಿ ಚಾಮರಾಜಪೇಟೆಯಲ್ಲಿ ವಾಸವಿದ್ದು, ರಚನಾ ಪಾರ್ಥೀವ ಶರೀರವನ್ನು ಚಾಮರಾಜ ಪೇಟೆ ನಿವಾಸಕ್ಕೆ ರವಾನಿಸಲಾಗುವದು ಎಂದು ರಚನಾ ಸ್ನೇಹಿತರು ತಿಳಿಸಿದ್ದಾರೆ.

ಅಂಗಾಂಗ ದಾನ

ರಚನಾ ಅವರಿಗೆ ಮುಂಜಾನೆ ಹೃದಯಾಘಾತವಾಗಿದ್ದು, ಅಪೋಲೋ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಸುಮಾರು 12 ಗಂಟೆಗಳ ಚಿಕಿತ್ಸೆ ನಡೆಸಿದರೂ, ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ. ರಚನಾ ಅವರ ನಿಧನದ ಹಿನ್ನೆಲೆಯಲ್ಲಿ ಕುಟುಂಬಸ್ಥರು, ರಚನಾ ಅವರ ಅಂಗಾಂಗ ದಾನ ಮಾಡಿದ್ದಾರೆ. ಈ ಮೂಲಕ ರಚನಾ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ:

https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಬುರ್ಖಾ ಧರಿಸಿದವರಿಗೆ ಥಳಿತ: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋದ ಅಸಲಿಯತ್ತು ಬಯಲು

ತನ್ನನ್ನು ಸಿಂಹಕ್ಕೆ ಹೋಲಿಸಿಕೊಂಡ ಸಚಿವ ಈಶ್ವರಪ್ಪ!

ಪೊಲೀಸ್ ಸಿಬ್ಬಂದಿಗೆ ಚೂರಿ ಇರಿತ: ಪ್ರಕರಣ ದಾಖಲು

ಹಿಜಾಬ್ ವಿವಾದ: ಹೈಕೋರ್ಟ್ ಮೆಟ್ಟಿಲೇರಿದ ವಿದ್ಯಾರ್ಥಿನಿಯ ತಂದೆಯ ರೆಸ್ಟೋರೆಂಟ್ ಮೇಲೆ ತಂಡದಿಂದ ದಾಳಿ

ಮದುವೆ ಮುಗಿಸಿ ಬರುತ್ತಿದ್ದ ವಾಹನ ಕಮರಿಗೆ ಉರುಳಿ ಬಿದ್ದು10 ಮಂದಿ ಸಾವು

 

ಇತ್ತೀಚಿನ ಸುದ್ದಿ