ಕ್ರಿಕೆಟ್ ಆಡುತ್ತಿರುವಾಗ ಮೈದಾನದಲ್ಲೇ ಕುಸಿದು ಬಿದ್ದು ವ್ಯಕ್ತಿ ಸಾವು
ಬಂಟ್ವಾಳ: ಕ್ರಿಕೆಟ್ ಆಡುತ್ತಿರುವಾಗ ಮೈದಾನದಲ್ಲಿ ಕುಸಿದು ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟಿರುವ ಘಟನೆ ಅನ್ನಡ್ಕ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಮನೋಹರ ಪ್ರಭು (45) ಎಂದು ಗುರುತಿಸಲಾಗಿದೆ. ಪ್ರಭು ಒಬ್ಬ ಪ್ರಗತಿಪರ ರೈತ ಮತ್ತು ಒಬ್ಬ ನಿಪುಣ ಕ್ರಿಕೆಟಿಗ. ಪ್ರಭು ಅವರು ಹಲವಾರು ಕ್ರಿಕೆಟ್ ತಂಡಗಳನ್ನು ಪ್ರತಿನಿಧಿಸಿದ್ದು, ಆಲ್ರೌಂಡ್ ಆಟಗಾರರಾಗಿದ್ದರು. ಭಾನುವಾರ ಸ್ಥಳೀಯ ಕ್ರಿಕೆಟ್ ತಂಡದಲ್ಲಿ ಬೌಲಿಂಗ್ ಮತ್ತು ಬ್ಯಾಟಿಂಗ್ ಮಾಡಿದ್ದು, ಅವರ ತಂಡವು ಎರಡೂ ಪಂದ್ಯಗಳನ್ನು ಗೆದ್ದಿತು.
ಇನ್ನು ತೀವ್ರ ಎದೆನೋವಿನಿಂದ ಬಳಲುತ್ತಿದ್ದ ಅವರು ದಿನದ ಮೂರನೇ ಪಂದ್ಯಕ್ಕೆ ಸಿದ್ದರಾಗುತ್ತಿದ್ದಂತೆ ನೆಲಕ್ಕೆ ಕುಸಿದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ನಟ ಚೇತನ್ ಅಹಿಂಸಾ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ
ಶಾರ್ಟ್ ಸರ್ಕ್ಯೂಟ್: ಖಾಸಗಿ ಬಸ್ ಬೆಂಕಿಗೆ ಆಹುತಿ
ಖ್ಯಾತ ಹಿರಿಯ ನಟಿ ಲಿಲಿತಾ ಇನ್ನಿಲ್ಲ: ಕಂಬನಿ ಮಿಡಿದ ಚಿತ್ರರಂಗ
ನಟ ಚೇತನ್ ಪೊಲೀಸ್ ವಶಕ್ಕೆ: ಚೇತನ್ ಎಲ್ಲಿದ್ದಾರೆ ಅನ್ನೋದು ಗೊತ್ತಿಲ್ಲ | ಪತ್ನಿ ಮೇಘಾ ಆತಂಕ
ಬುರ್ಖಾ ಧರಿಸಿದವರಿಗೆ ಥಳಿತ: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋದ ಅಸಲಿಯತ್ತು ಬಯಲು