ಮೇಲಾಧಿಕಾರಿಗಳ ಕಿರುಕುಳ: ಡೆತ್ ನೋಟ್ ಬರೆದಿಟ್ಟು ಸಿಬ್ಬಂದಿ ಆತ್ಮಹತ್ಯೆಗೆ ಯತ್ನ
ಕಲಬುರಗಿ: ತನ್ನ ಮೇಲಾಧಿಕಾರಿಗಳ ವರ್ತನೆಯಿಂದ ಮನನೊಂದು ಸಿಬ್ಬಂದಿಯೊಬ್ಬರು ಡೆತ್ ನೋಟ್ ಬರೆದಿಟ್ಟು, ಲೈವ್ ವೀಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಕಿನಾರಾ ಕ್ಯಾಪಿಟಲ್‍ನ ಕಲಬುರಗಿ ಶಾಖೆಯಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಕೃಷ್ಣಕಾಂತ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದವರು. ಇವರ ಸ್ಥಿತಿ ಗಂಭೀರವಾಗಿದ್ದು, ನಗರದ ಕೆಬಿಎನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೃಷ್ಣ ಕಾಂತ್ ಆತ್ಮಹತ್ಯೆ ಯತ್ನಕ್ಕೂ ಮುನ್ನ ಕಚೇರಿಯಲ್ಲಿಯೇ ಡೆತ್ ನೋಟ್ ಬರೆದಿಟ್ಟು ಬಳಿಕ ಲೈವ್ ವೀಡಿಯೋ ಮಾಡಿದ್ದಾರೆ. ಈ ವೇಳೆ ತಮ್ಮ ಮೇಲೆ ನಡೆದಿರುವ ದೌರ್ಜನ್ಯದ ಬಗ್ಗೆ ಹೇಳಿಕೊಂಡಿದ್ದಾರೆ. ವೀಡಿಯೋದಲ್ಲಿ, ನಾನು ಅಸಿಸ್ಟೆಂಟ್ ಮ್ಯಾನೇಜರ್ ಆಗಿ ಸಮರ್ಥವಾಗಿ ಕೆಲಸ ಮಾಡಿದರೂ, ಅನಗತ್ಯವಾಗಿ ಕಲಬುರಗಿಯಿಂದ ವಿಜಯಪುರಕ್ಕೆ ವರ್ಗಾವಣೆ ಮಾಡಿದ್ದಾರೆ. ಈ ಬಗ್ಗೆ ಪ್ರಶ್ನಿಸಿದರೆ ಅಪಹಾಸ್ಯ ಮಾಡಿ ಅವ್ಯಾಚ ಶಬ್ದಗಳಿಂದ ನಿಂದಿಸಿ ಮಾನಸಿಕವಾಗಿ ತೊಂದರೆ ಕೊಟ್ಟಿದ್ದಾರೆ ಎಂದು ಹೇಳಿಕೊಂಡಿದ್ದಾರೆ.
ಈ ವಿಷಯವಾಗಿ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದರೂ ಕ್ರಮಕೈಗೊಳ್ಳುವ ಬದಲಾಗಿ ಯಾವುದೇ ನೊಟೀಸ್ ನೀಡದೆ ನನ್ನನ್ನು ಕೆಲಸದಿಂದ ತೆಗೆದುಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಈ ವೇಳೆ ತನ್ನ ಆತ್ಮಹತ್ಯೆಗೆ ಕಿನಾರಾ ಕ್ಯಾಪಿಟಲ್‍ನ ಐದು ಜನ ಅಧಿಕಾರಿಗಳ ಹೆಸರು ಪ್ರಸ್ತಾಪಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಈ ಪ್ರಕರಣ ಸಂಬಂಧ ಎಂಬಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ತರಕಾರಿ ಸಾಗಿಸುವ ನೆಪದಲ್ಲಿ 65 ಕ್ವಿಂಟಾಲ್ ಅಕ್ರಮ ಅನ್ನಭಾಗ್ಯ ಅಕ್ಕಿ ಸಾಗಾಟ
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ: 59 ಕ್ಷೇತ್ರಗಳಿಗೆ 4ನೇ ಹಂತದ ಮತದಾನ ಆರಂಭ
ನೀನು ಸುಂದರವಾಗಿಲ್ಲ ಎಂದು ಗಂಡನಿಂದ ನಿಂದನೆ: ಮನನೊಂದ ಮಹಿಳೆ ಆತ್ಮಹತ್ಯೆ
ನಟ ಚೇತನ್ ವಿರುದ್ಧ ದಾಖಲಾಗಿರುವ ದೂರಿನಲ್ಲೇನಿದೆ?
ಹಿಂದೂಗಳಿಗೆ ರಕ್ಷಣೆ ಒದಗಿಸಲಾಗದ ಸರ್ಕಾರ: ಬಿಜೆಪಿ ಸರ್ಕಾರದ ವಿರುದ್ಧ ಚಕ್ರವರ್ತಿ ಸೂಲಿಬೆಲೆ ಕಿಡಿ