ತರಕಾರಿ ಸಾಗಿಸುವ ನೆಪದಲ್ಲಿ 65 ಕ್ವಿಂಟಾಲ್ ಅಕ್ರಮ ಅನ್ನಭಾಗ್ಯ ಅಕ್ಕಿ ಸಾಗಾಟ
ಚಾಮರಾಜನಗರ: ತರಕಾರಿ ಸಾಗಿಸುವ ನೆಪದಲ್ಲಿ ವಾಹನವೊಂದರಲ್ಲಿ ಅಕ್ರಮ ಅಕ್ಕಿ ಸಾಗಾಟ ಮಾಡುತ್ತಿದ್ದವರನ್ನು ಆಹಾರ ಇಲಾಖೆ ಅಧಿಕಾರಿಗಳು ಪತ್ತೆಹಚ್ಚಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಪೊಲೀಸ್ ಠಾಣೆ ಸಮೀಪ ನಡೆದಿದೆ.
ಮಂಡ್ಯದ ಫೈರೋಜ್ ಖಾನ್ ಹಾಗೂ ಗುಂಡ್ಲುಪೇಟೆಯ ಪ್ರೇಮ್ ಕುಮಾರ್ ಆರೋಪಿಗಳಾಗಿದ್ದಾರೆ. ವಾಹನವೊಂದರಲ್ಲಿ ತರಕಾರಿ ಖಾಲಿ ಕ್ರೇಟ್‍ನ್ನು ಮೇಲ್ಭಾಗದಲ್ಲಿಟ್ಟುಕೊಂಡು, ಒಳಭಾಗದಲ್ಲಿ ಅಕ್ರಮ ಅಕ್ಕಿ ಸಾಗಾಟ ನಡೆಸುತ್ತಿದ್ದರು. ಗುಂಡ್ಲುಪೇಟೆಯ ದಾಸ್ತಾನಿಟ್ಟಿದ್ದ ಅಕ್ಕಿಯನ್ನು ಪ್ರೇಮ್ ಕುಮಾರ್ ಅವರು ಫೈರೋಜ್ ಖಾನ್ ಅವರಿಗೆ ನೀಡಿ ಮಂಡ್ಯ ಕಡೆಗೆ ಸಾಗಾಟ ನಡೆಸುತ್ತಿದ್ದರು ಎನ್ನಲಾಗಿದೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಆಹಾರ ಇಲಾಖೆ ಅಧಿಕಾರಿಗಳು, ವಾಹನದಲ್ಲಿ ಹೊರಗಡೆ ತರಕಾರಿ ಕ್ರೇಟ್ ತುಂಬಿಕೊಂಡು ಒಳಗೆ ಅನ್ನಭಾಗ್ಯ ಅಕ್ಕಿ ಸಾಗಾಟ ಮಾಡುತ್ತಿದ್ದನ್ನು ಪತ್ತೆ ಹಚ್ಚಿದ್ದಾರೆ.
ಕಾರ್ಯಾಚರಣೆ ವೇಳೆ 6,250 ಕೆ.ಜಿ. ಅಕ್ಕಿಯನ್ನು ವಶಪಡಿಸಿಕೊಂಡಿದ್ದು, 10 ಕೆ.ಜಿ,ಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಈ ಸಂಬಂಧ ಇಬ್ಬರ ವಿರುದ್ಧ ತೆರಕಣಾಂಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ: 59 ಕ್ಷೇತ್ರಗಳಿಗೆ 4ನೇ ಹಂತದ ಮತದಾನ ಆರಂಭ
ನೀನು ಸುಂದರವಾಗಿಲ್ಲ ಎಂದು ಗಂಡನಿಂದ ನಿಂದನೆ: ಮನನೊಂದ ಮಹಿಳೆ ಆತ್ಮಹತ್ಯೆ
ನಟ ಚೇತನ್ ವಿರುದ್ಧ ದಾಖಲಾಗಿರುವ ದೂರಿನಲ್ಲೇನಿದೆ?
ಹಿಂದೂಗಳಿಗೆ ರಕ್ಷಣೆ ಒದಗಿಸಲಾಗದ ಸರ್ಕಾರ: ಬಿಜೆಪಿ ಸರ್ಕಾರದ ವಿರುದ್ಧ ಚಕ್ರವರ್ತಿ ಸೂಲಿಬೆಲೆ ಕಿಡಿ
ನಟ ಚೇತನ್ ಅಹಿಂಸಾ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ