ನಟ ಚೇತನ್ ವಿರುದ್ಧ ದಾಖಲಾಗಿರುವ ದೂರಿನಲ್ಲೇನಿದೆ? - Mahanayaka
7:08 AM Friday 20 - September 2024

ನಟ ಚೇತನ್ ವಿರುದ್ಧ ದಾಖಲಾಗಿರುವ ದೂರಿನಲ್ಲೇನಿದೆ?

chethan ahimsa
23/02/2022

ಬೆಂಗಳೂರು: ನಟ ಚೇತನ್ ಅಹಿಂಸಾ ಅವರನ್ನು ನಿನ್ನೆ ಮಧ್ಯಾಹ್ನ ಪೊಲೀಸರು ಬಂಧಿಸಿದ್ದರು. ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಮಾಡಿರುವ ಟ್ವೀಟ್ ಗೆ ಸಂಬಂಧ ದಾಖಲಾಗಿರುವ ದೂರಿನನ್ವಯ ಅವರನ್ನು ಬಂಧಿಸಲಾಗಿದೆ.

ನಟ ಚೇತನ್ ಅವರ ವಿರುದ್ಧ ದಾಖಲಾಗಿರುವ ದೂರಿನ ಪ್ರತಿಯನ್ನು ಬಿಎಸ್ ಪಿ ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ ಮಂಡ್ಯ ಅವರು ಹಂಚಿಕೊಂಡಿದ್ದು, ಇದರಲ್ಲಿ, ಚೇತನ್ ಅವರು ಸಾಮಾನ್ಯ ಜನರಲ್ಲಿ ಮುಸ್ಲಿಮ್ ಜನಾಂಗದವರಿಗೆ ಕಾನೂನು ಮತ್ತು ಸುವ್ಯವಸ್ಥೆ, ಸರ್ಕಾರ ಮತ್ತು ನಮ್ಮ ದೇಶದ ಸಾಂವಿಧಾನಿಕ ವ್ಯವಸ್ಥೆಗಳ ಮೇಲೆ ಅಪನಂಬಿಕೆ ಮೂಡಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಸಾಂವಿಧಾನಿಕ ವ್ಯವಸ್ಥೆಗಳ ಮೇಲೆ ಅಪನಂಬಿಕೆ ಬರುವಂತೆ ಟ್ವೀಟ್ ಮಾಡಿ ಮುಸ್ಲಿಮ್ ಕೋಮಿನವರು ಮತ್ತು ಇತರ ಜನರು ಪ್ರತಿಭಟನೆ, ಗಲಭೆ ಹಾಗೂ ಇತ್ಯಾದಿಗಳು ಮಾಡುವಂತೆ ಪ್ರಚೋದಿಸಿದ್ದಾರೆ. ರಾಜ್ಯ, ದೇಶದ ಸಮಗ್ರತೆ ನಾಶವಾಗಲೆಂದು ಪ್ರಚೋದಿಸಿದ್ದಾರೆ. ಅನೇಕ ವರ್ಗ ಹಾಗೂ ಕೋಮುಗಳ ನಡುವೆ ವೈರತ್ವ, ದ್ವೇಷ ಮತ್ತು ವೈಮನಸ್ಸು ಉಂಟು ಮಾಡಿದ್ದಾರೆ. ಟ್ವೀಟ್ ನಿಂದಾಗಿ ಗೌರವಾನ್ವಿತ ನ್ಯಾಯಾಮೂರ್ತಿಗಳಿಗೆ ಅವಮಾನ ಮಾಡುವ ಮತ್ತು  ನ್ಯಾಯಾಲಯದಲ್ಲಿ ಹಿಜಾಬ್ ಪ್ರಕರಣದ ವಿಚಾರಣೆ ಕೈ ಬಿಡುವಂತೆ ಅಥವಾ ನಿಷ್ಪಕ್ಷಪಾತ ವಿಚಾರಣೆ ಮತ್ತು ನ್ಯಾಯ ನಿರ್ಣಯ ಮಾಡುವುದರಿಂದ ಹಿಂದೆ ಸರಿಯುವಂತೆ ಮಾಡುವುದು ಇವರ ಉದ್ದೇಶವಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.


Provided by

ಇನ್ನೂ ಘಟನೆಗೆ ಸಂಬಂಧಿಸಿದಂತೆ “ವಿಷಯ ಮೇಲ್ಮಟ್ಟದ್ದು. ನಾನೇನೂ ಹೇಳಲು ಸಾಧ್ಯವಿಲ್ಲ” ಎಂದು ಬೆಂಗಳೂರು ಕಮಿಷನರ್ ಕಮಲ್ ಪಂತ್ ಹೇಳಿದ್ದಾರೆ ಎಂದು ಬಿಎಸ್ ಪಿ ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ ತಮ್ಮ ಫೇಸ್ ಬುಕ್ ಗೋಡೆಯಲ್ಲಿ ಬರೆದುಕೊಂಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಹಿಂದೂಗಳಿಗೆ ರಕ್ಷಣೆ ಒದಗಿಸಲಾಗದ ಸರ್ಕಾರ: ಬಿಜೆಪಿ ಸರ್ಕಾರದ ವಿರುದ್ಧ ಚಕ್ರವರ್ತಿ ಸೂಲಿಬೆಲೆ ಕಿಡಿ

ಕ್ರಿಕೆಟ್ ಆಡುತ್ತಿರುವಾಗ ಮೈದಾನದಲ್ಲೇ ಕುಸಿದು ಬಿದ್ದು ವ್ಯಕ್ತಿ ಸಾವು

ನಟ ಚೇತನ್ ಅಹಿಂಸಾ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಶಾರ್ಟ್ ಸರ್ಕ್ಯೂಟ್: ಖಾಸಗಿ ಬಸ್ ಬೆಂಕಿಗೆ ಆಹುತಿ

ಖ್ಯಾತ ಹಿರಿಯ ನಟಿ ಲಿಲಿತಾ ಇನ್ನಿಲ್ಲ: ಕಂಬನಿ ಮಿಡಿದ ಚಿತ್ರರಂಗ

ಇತ್ತೀಚಿನ ಸುದ್ದಿ