ಪತ್ನಿ ಮೃತಪಟ್ಟಿದ್ದಾಳೆಂದು ರಸ್ತೆಬದಿಯಲ್ಲೇ ಎಸೆದು ಹೋದ ಪತಿ - Mahanayaka
7:31 PM Wednesday 5 - February 2025

ಪತ್ನಿ ಮೃತಪಟ್ಟಿದ್ದಾಳೆಂದು ರಸ್ತೆಬದಿಯಲ್ಲೇ ಎಸೆದು ಹೋದ ಪತಿ

mandya1
24/02/2022

ಮಂಡ್ಯ: ಶೀಲ ಶಂಕಿಸಿ ಪತಿಯೇ ಪತ್ನಿಗೆ ಹಲ್ಲೆ ನಡೆಸಿ ಪ್ರಜ್ಞೆ ತಪ್ಪಿದ ಬಳಿಕ ಮೃತಪಟ್ಟಿದ್ದಾಳೆಂದು ರಸ್ತೆಬದಿ ಬಿಸಾಡಿ ಹೋಗಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ಪಟ್ಟಣದಲ್ಲಿ ನಡೆದಿದೆ.

ಚಂಪಕಾ ಹಲ್ಲೆಗೊಳಗಾದ ಮಹಿಳೆ. ಬಾಲಕೃಷ್ಣ ಪತ್ನಿಯ ಹತ್ಯೆಗೆ ಯತ್ನಿಸಿದ ವ್ಯಕ್ತಿ. ದೇವಾಲಯಕ್ಕೆಂದು‌ ಪತ್ನಿಯನ್ನು ಕಾರಿನಲ್ಲಿ ಕರೆದುಕೊಂಡು ಹೋದ ಬಾಲಕೃಷ್ಣ, ತಂಪು ಪಾನೀಯದಲ್ಲಿ ಮದ್ಯ ಬೆರೆಸಿ ಕುಡಿಸಿ ಹಲ್ಲೆ ನಡೆಸಿದ್ದಾನೆ. ಪತಿಯ ಹಲ್ಲೆಯಿಂದಾಗಿ ಚಂಪಕ ಪ್ರಜ್ಞೆ ಕಳೆದುಕೊಂಡಿದ್ದಾರೆ. ಪ್ರಜ್ಞೆ ತಪ್ಪಿದ ಪತ್ನಿಯನ್ನು ನೋಡಿದ ಪತಿ, ಮೃತಪಟ್ಟಿದ್ದಾಳೆಂದು ಭಾವಿಸಿ ರಸ್ತೆಬದಿ ಬಿಸಾಡಿ ಹೋಗಿದ್ದಾನೆ.

ಘಟನೆಯಿಂದ ತೀವ್ರವಾಗಿ ಗಾಯಗೊಂಡಿದ್ದ ಮಹಿಳೆಗೆ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

‘ಓ ಅಂಟಾವಾ’ ಹಾಡನ್ನು ಹಾಡಿ ನೆಟ್ಟಿಗರ ಮನ ಗೆದ್ದ ಡಚ್​ ಮಹಿಳೆ

ಹರ್ಷ ಕೊಲೆ ಪ್ರಕರಣ: 6 ಮಂದಿ ಆರೋಪಿಗಳಿಗೆ ಮಾ. 7ರ ವರೆಗೆ ನ್ಯಾಯಾಂಗ ಬಂಧನ

ಉಕ್ರೇನ್ ವಿರುದ್ಧ ಯುದ್ಧ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್ ಘೋಷಣೆ

ಸಾಲಬಾಧೆ: ಮಗಳನ್ನು ಕೊಂದು ತಂದೆ ಆತ್ಮಹತ್ಯೆ

ಈಶ್ವರಪ್ಪ, ಮಲ್ಲಿಕಾರ್ಜುನ ಗೌಡ, ಸೋ ಕಾಲ್ಡ್ ದೇಶಭಕ್ತರ ಮೇಲೆ ಯಾಕೆ ಸುಮೊಟೊ ದಾಖಲಾಗುತ್ತಿಲ್ಲ?

 

ಇತ್ತೀಚಿನ ಸುದ್ದಿ