ಮದುವೆಯಾಗುವುದಾಗಿ ನಂಬಿಸಿ ಮಹಿಳೆಗೆ ವಂಚನೆ: ಮುಖ್ಯಪೇದೆ ವಿರುದ್ಧ ಎಫ್ಐಆರ್ ದಾಖಲು
ಮೈಸೂರು : ಮದುವೆಯಾಗುವುದಾಗಿ ನಂಬಿಸಿ ಮಹಿಳೆಗೆ ವಂಚಿಸಿದ ಮುಖ್ಯಪೇದೆ ಹಾಗೂ ಆತನ ಮಗನ ವಿರುದ್ಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ನಂಜನಗೂಡು ತಾಲೂಕು ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಮುಖ್ಯಪೇದೆ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಸಿ.ಕೃಷ್ಣ ಹಾಗೂ ಈತನ ಮಗ ಕಿರಣ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ತಲಕಾಡು ಮೂಲದ ಗೌರಮ್ಮ ವಂಚನೆಗೊಳಗಾದ ಮಹಿಳೆಯಾಗಿದ್ದಾರೆ. ಇವರು ತನ್ನ ಕೌಟುಂಬಿಕ ಸಮಸ್ಯೆ ಹಿನ್ನೆಲೆ ಬನ್ನೂರು ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಾಗ ಅಲ್ಲೇ ಕರ್ತವ್ಯ ನಿರ್ವಹಿಸುತ್ತಿದ್ದ ಸಿ.ಕೃಷ್ಣ ಎಂಬಾತ ಸಹಾಯ ಮಾಡುವ ನೆಪದಲ್ಲಿ ಮಹಿಳೆಯನ್ನು ಪರಿಚಯ ಮಾಡಿಕೊಂಡಿದ್ದಾನೆ. ನಂತರ ನಿನ್ನ ಪತಿಗೆ ವಿಚ್ಛೇದನ ಕೊಡು ನಾನು ನಿನ್ನನ್ನು ಮದುವೆಯಾಗುತ್ತೇನೆ ಎಂದು ನಂಬಿಸಿದ್ದಾನೆ.
ಕೃಷ್ಣನ ಮಾತನ್ನು ನಂಬಿದ ಮಹಿಳೆ, ತನ್ನ ಪತಿ ನಂಜಯ್ಯನಿಂದ ವಿಚ್ಛೇದನ ಪಡೆದಿದ್ದಾಳೆ. ನಂತರ ಕೃಷ್ಣ ಮೈಸೂರಿನ ಗೋಕುಲಂನಲ್ಲಿ ಮನೆ ಬಾಡಿಗೆ ಪಡೆದು ಕೆಲವು ದಿನಗಳ ಕಾಲ ಆಕೆಯೊಂದಿಗೆ ಸಂಸಾರ ನಡೆಸಿದ್ದಾನೆ. ಅಷ್ಟೇ ಅಲ್ಲದೆ, ಮದುವೆಯಾಗುವುದಾಗಿ ನಂಬಿಸಿ ಮಹಿಳೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಈ ಮಧ್ಯೆ ಸೊಸೈಟಿಯಲ್ಲಿ ಮಹಿಳೆಯ ಹೆಸರಿನಲ್ಲಿ 5 ಲಕ್ಷ ರೂ. ಸಾಲ ಪಡೆದಿದ್ದು, ಪ್ರತ್ಯೇಕವಾಗಿ 3 ಲಕ್ಷ ರೂ. ಸಾಲ ಪಡೆದಿದ್ದಾನೆ. ಮಹಿಳೆ, ಕೃಷ್ಣಗೆ ಮದುವೆಯಾಗು ಎಂದು ಒತ್ತಾಯಿಸಿದ್ದಕ್ಕೆ ದೈಹಿಕವಾಗಿ ಕಿರುಕುಳ ನೀಡಲು ಆರಂಭಿಸಿದ್ದಾನೆ ಎನ್ನಲಾಗಿದೆ.
ಅಲ್ಲದೆ, ನ್ಯಾಯ ಕೇಳಲು ಬಂದ ಮಹಿಳೆಯನ್ನು ಕಾನ್ಸ್ಟೇಬಲ್ ಹಾಗೂ ಆತನ ಮಗ ಹಿಗ್ಗಾಮುಗ್ಗ ಥಳಿಸಿ ಪರಾರಿಯಾಗಿದ್ದಾರೆ. ಅಪ್ಪ-ಮಗನ ದೌರ್ಜನ್ಯಕ್ಕೆ ಸಿಲುಕಿ ಅನಾಥಳಂತೆ ಜಮೀನಿನಲ್ಲಿ ಬಿದ್ದಿದ್ದ ಮಹಿಳೆಯನ್ನು ಗ್ರಾಮಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಘಟನೆ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಚೆರ್ನೋಬಿಲ್ ನ ಪರಮಾಣು ವಿದ್ಯುತ್ ಸ್ಥಾವರ ವಶಕ್ಕೆ ಪಡೆದ ರಷ್ಯಾ ಪಡೆಗಳು
ಹಸುಗಳ ಮೇಲೆ ಲೈಂಗಿಕ ದೌರ್ಜನ್ಯ: ವ್ಯಕ್ತಿಯ ಬಂಧನ
ಲಂಚಕ್ಕೆ ಬೇಡಿಕೆ: ಆಯುಷ್ ಅಧಿಕಾರಿ ಎಸಿಬಿ ಬಲೆಗೆ