ಇಂದು ರಾತ್ರಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಜೊತೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ - Mahanayaka
3:57 PM Thursday 12 - December 2024

ಇಂದು ರಾತ್ರಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಜೊತೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ

pm modhi
25/02/2022

ದೆಹಲಿ: ಉಕ್ರೇನ್ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗೆ ಇಂದು ರಾತ್ರಿ ಮಾತುಕತೆ ನಡೆಸಲಿದ್ದಾರೆ. ಈ ಕುರಿತು ಎಎನ್​ಐ ಸುದ್ದಿಸಂಸ್ಥೆ ಟ್ವೀಟ್‌ನಲ್ಲಿ ತಿಳಿಸಿದೆ.ಅಮೆರಿಕ ಮತ್ತು ಯುರೋಪ್ ​ನ ಹಲವು ದೇಶಗಳ ಪ್ರಬಲ ವಿರೋಧವನ್ನೂ ಲೆಕ್ಕಿಸದೆ ಉಕ್ರೇನ್ ಮೇಲೆ ರಷ್ಯಾ ದಾಳಿ ಮಾಡಿದೆ.

ಈ ಬಿಕ್ಕಟ್ಟಿನಲ್ಲಿ ಮಧ್ಯಪ್ರವೇಶಿಸಬೇಕೆಂದು ಉಕ್ರೇನ್​ನ ಭಾರತ ರಾಯಭಾರಿ ಈಗೊರ್ ಪೊಲಿಖಾ ವಿನಂತಿಸಿದ್ದರು. ಭಾರತವು ವಿಶ್ವದ ಪ್ರಭಾವಿ ದೇಶ. ನಾವು ಈ ಬಾರಿ ಭಾರತವು ಗಟ್ಟಿಧ್ವನಿಯಲ್ಲಿ ಮಾತನಾಡಬೇಕೆಂದು ಬಯಸುತ್ತಿದ್ದೇವೆ ಎಂದು ಹೇಳಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜಾಗತಿಕ ಮಟ್ಟದಲ್ಲಿ ಗೌರವವಿದೆ. ಉತ್ತಮ ಪ್ರಭಾವ ಹೊಂದಿರುವ ನರೇಂದ್ರ ಮೋದಿ ಅವರು ಗಟ್ಟಿಯಾಗಿ ಮಾತನಾಡಿದರೆ ಪುಟಿನ್ ಮುಂದಿನ ನಡೆಯ ಬಗ್ಗೆ ಯೋಚಿಸುತ್ತಾರೆ ಎಂದರು.

ಉಕ್ರೇನ್ ​ನಲ್ಲಿ ಶಾಂತಿ ನೆಲೆಸಬೇಕೆಂದು ಭಾರತವು ಈಗಾಗಲೇ ಕರೆ ನೀಡಿದೆ. ಮುಂದಿನ ದಿನಗಳಲ್ಲಿ ಇದು ದೊಡ್ಡ ಬಿಕ್ಕಟ್ಟಿನ ಸ್ವರೂಪ ಪಡೆದುಕೊಂಡರೆ ಇಡೀ ಪ್ರದೇಶದಲ್ಲಿ ಶಾಂತಿ ಕಣ್ಮರೆಯಾಗಲಿದ್ದು, ಅಸ್ಥಿರ ವಾತಾವರಣ ನೆಲೆಗೊಳ್ಳಲಿದೆ ಎಂದು ಭಾರತವು ಹೇಳಿತ್ತು.

ಉಕ್ರೇನ್ ​ನಲ್ಲಿ ನಡೆಯುತ್ತಿರುವ ಬೆಳವಣಿಗೆಯನ್ನು ಸರಿಯಾಗಿ ನಿರ್ವಹಿಸದಿದ್ದರೆ ಇಡೀ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆ ಕದಡುತ್ತದೆ ಎಂದು ವಿಶ್ವಸಂಸ್ಥೆಯಲ್ಲಿ ಭಾರತದ ಶಾಶ್ವತ ಪ್ರತಿನಿಧಿಯಾಗಿರುವ ಟಿ.ಎಸ್.ತಿರುಮೂರ್ತಿ ಹೇಳಿದ್ದರು.

ಉಕ್ರೇನ್​ ಬಿಕ್ಕಟ್ಟಿನಿಂದ ಭಾರತದ ಮೇಲೆ ಆಗುವ ಪರಿಣಾಮದ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ತಮ್ಮ ನಿವಾಸದಲ್ಲಿ ಸಭೆ ನಡೆಸಿ ಚರ್ಚಿಸಿದರು. ಭಾರತದಲ್ಲಿ ಈಗಾಗಲೇ ಕಚ್ಚಾ ತೈಲದ ಬೆಲೆ ಸತತ ಏರಿಕೆ ಕಾಣುತ್ತಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ವಿತ್ತ ಸಚಿವೆ ನಿರ್ಮಲಾ ಸೀತಾರಾಮಾನ್ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಭೆಯಲ್ಲಿ ಪಾಲ್ಗೊಂಡಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮೃತ ಹರ್ಷನ ಮೊಬೈಲ್ ಫೋನ್ ಪತ್ತೆಯಾಗಿಲ್ಲ; ಶಿವಮೊಗದಲ್ಲಿ ಎಸ್ ​ಪಿ ಮಾಹಿತಿ

ಉಕ್ರೇನ್‍ ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ರಕ್ಷಣೆಗೆ ರಾಜ್ಯ ಸರ್ಕಾರದಿಂದ ವೆಬ್ ಪೋರ್ಟಲ್ ಪ್ರಾರಂಭ

ಕಾಲೇಜು ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ: ಐವರು ಆರೋಪಿಗಳ ಸೆರೆ

ಪೊಲೀಸ್ ಎಂದು ಹೇಳಿಕೊಂಡು ವರ್ತಕರಿಂದ ಹಣ ವಸೂಲಿ: ಟೀ ಮಾರಾಟಗಾರ ಸೆರೆ

ಹಸುಗಳ ಮೇಲೆ ಲೈಂಗಿಕ ದೌರ್ಜನ್ಯ: ವ್ಯಕ್ತಿಯ ಬಂಧನ

 

ಇತ್ತೀಚಿನ ಸುದ್ದಿ