ಕುಡಿಯಲು ಹಣ ನೀಡದ್ದಕ್ಕೆ ಹೆತ್ತ ತಾಯಿಯನ್ನೇ ಹತ್ಯೆಗೈದ ಮಗ
ಬೆಂಗಳೂರು: ನಗರದ ಮಾರತ್ ಹಳ್ಳಿಯ ದೇವರ ಬಿಸನಹಳ್ಳಿಯಲ್ಲಿ ಕುಡಿಯಲು ಹಣ ನೀಡದ್ದಕ್ಕೆ ಹೆತ್ತ ತಾಯಿಯನ್ನೇ ಮಗ ಹತ್ಯೆಗೈದಿರುವ ಘಟನೆ ನಡೆದಿದೆ.
ಯಮುನಮ್ಮ (70) ಮೃತದುರ್ದೈವಿಯಾಗಿದ್ದಾರೆ. ಮಗ ಅಂಬರೀಶ್ ಆರೋಪಿಯಾಗಿದ್ದಾನೆ. ಈತ ಮದ್ಯವ್ಯಸನಾಗಿದ್ದು, ಕುಡಿಯಲು ಹಣ ನೀಡುವಂತೆ ಯಮುನಮ್ಮ ಅವರನ್ನು ಪೀಡಿಸಿದ್ದಾನೆ. ಆದರೆ ಹಣ ನೀಡಲು ನಿರಾಕರಿಸಿದ ಯಮುನಮ್ಮ ಹಾಗೂ ಅಂಬರೀಶ್ ಮಧ್ಯೆ ವಾಗ್ವಾದ ನಡೆದಿದೆ. ಈ ವೇಳೆ ಕೋಪಗೊಂಡ ಅಂಬರೀಶ್ ಯಮುನಮ್ಮ ಅವರ ಕೆನ್ನೆಗೆ ಜೋರಾಗಿ ಹೊಡೆದಿದ್ದಾನೆ ಎನ್ನಲಾಗಿದೆ.
ತೀವ್ರ ಸ್ವರೂಪದ ಏಟು ಬಿದ್ದ ಕಾರಣ ಸ್ಥಳದಲ್ಲೇ ತಾಯಿ ಯಮುನಮ್ಮ ಕುಸಿದು ಬಿದ್ದು, ಸಾವನ್ನಪ್ಪಿದ್ದಾರೆ. ಇದೀಗ ಈ ಘಟನೆ ಸಂಬಂಧ ಮಾರತ್ತಹಳ್ಳಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
10ನೇ ಮಹಡಿಯ ಕಟ್ಟಡದಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ
ತರಬೇತಿ ವಿಮಾನ ಪತನ: ಮಹಿಳಾ ಪೈಲಟ್, ತರಬೇತಿ ನಿರತ ಪೈಲಟ್ ಸಾವು
ಬಿಜೆಪಿ ಜತೆ ಮೈತ್ರಿ ಇಲ್ಲ: ಬಿಎಸ್ ಪಿ ವರಿಷ್ಠೆ ಮಾಯಾವತಿ ಸ್ಪಷ್ಟನೆ
ಇಂಡೋನೇಷ್ಯಾ ದಲ್ಲಿ ಪ್ರಬಲ ಭೂಕಂಪ: 7 ಮಂದಿ ಸಾವು, 85 ಮಂದಿಗೆ ಗಾಯ
ಮಾರಾಕಾಸ್ತ್ರ ತೋರಿಸಿ ದರೋಡೆಗೆ ಯತ್ನ: ಇಬ್ಬರು ಆರೋಪಿಗಳ ಸೆರೆ