ಮಾರಾಕಾಸ್ತ್ರ ತೋರಿಸಿ ದರೋಡೆಗೆ ಯತ್ನ: ಇಬ್ಬರು ಆರೋಪಿಗಳ ಸೆರೆ - Mahanayaka
5:47 PM Wednesday 11 - December 2024

ಮಾರಾಕಾಸ್ತ್ರ ತೋರಿಸಿ ದರೋಡೆಗೆ ಯತ್ನ: ಇಬ್ಬರು ಆರೋಪಿಗಳ ಸೆರೆ

darode
26/02/2022

ಬೆಂಗಳೂರು: ಮಾರಾಕಾಸ್ತ್ರ ತೋರಿಸಿ ದರೋಡೆಗೆ ಯತ್ನಿಸಿದ ಇಬ್ಬರು ಆರೋಪಿಗಳನ್ನು ಕೆ.ಜಿ. ಹಳ್ಳಿ ಠಾಣಾ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ಮಜರ್ ಮತ್ತು ಸೈಯದ್ ಮಾಜ್ ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳು ಫೆ. 20ರಂದು ಕೆ.ಜಿ. ಹಳ್ಳಿ ಠಾಣಾ ವ್ಯಾಪ್ತಿಯಲ್ಲಿನ ಅಂಗಡಿಗಳಿಗೆ ತಲವಾರ್ ಹಿಡಿದು ನುಗ್ಗಿ ಹಣ ವಸೂಲಿ ಮಾಡಲು ಯತ್ನಿಸಿದ್ದರು. ಆರೋಪಿಗಳು ಮಾರಾಕಾಸ್ತ್ರ ಹಿಡಿದು ವಸೂಲಿಗೆ ಯತ್ನಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ಅಲ್ಲದೇ ವಿಡಿಯೋವನ್ನು ಟ್ವಿಟರ್​ನಲ್ಲಿ ಶೇರ್ ಮಾಡಿ ಪೊಲೀಸರಿಗೆ ಟ್ಯಾಗ್ ಮಾಡಲಾಗಿತ್ತು.

ಹಿರಿಯ ಅಧಿಕಾರಿಗಳು ಕೂಡಲೇ ಆರೋಪಿಗಳನ್ನು ಪತ್ತೆ ಮಾಡುವಂತೆ ಸೂಚಿಸಿದ್ದರು. ಆರೋಪಿಗಳ ವಿರುದ್ಧ ಕೆ.ಜಿ. ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪತಿಯನ್ನು ಕೊಂದು ದೇಹದ ತುಂಡು ಟ್ಯಾಂಕ್‍ನಲ್ಲಿ ಬಚ್ಚಿಟ್ಟ ಪತ್ನಿ

ಡ್ರ್ಯಾಗನ್‍ ನಿಂದ ಚುಚ್ಚಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ

ಮಾರಕ ಕಾಯಿಲೆಯಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಸಾವು

ಡ್ರ್ಯಾಗನ್‍ ನಿಂದ ಚುಚ್ಚಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ

ಮದುವೆಯಾಗುವುದಾಗಿ ನಂಬಿಸಿ ಮಹಿಳೆಗೆ ವಂಚನೆ: ಮುಖ್ಯಪೇದೆ ವಿರುದ್ಧ ಎಫ್​ಐಆರ್ ದಾಖಲು

 

ಇತ್ತೀಚಿನ ಸುದ್ದಿ