ಬಿಜೆಪಿ ಜತೆ ಮೈತ್ರಿ ಇಲ್ಲ: ಬಿಎಸ್‌ ಪಿ ವರಿಷ್ಠೆ ಮಾಯಾವತಿ ಸ್ಪಷ್ಟನೆ - Mahanayaka
9:47 PM Thursday 19 - September 2024

ಬಿಜೆಪಿ ಜತೆ ಮೈತ್ರಿ ಇಲ್ಲ: ಬಿಎಸ್‌ ಪಿ ವರಿಷ್ಠೆ ಮಾಯಾವತಿ ಸ್ಪಷ್ಟನೆ

mayavathi
26/02/2022

ಲಕ್ನೋ: ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಇಲ್ಲ ಎಂದು ಬಿಎಸ್‌ಪಿ ವರಿಷ್ಠೆ ಮಾಯಾವತಿ ಸ್ಪಷ್ಟಪಡಿಸಿದ್ದಾರೆ.

ಬಿಎಸ್‌ ಪಿ-ಬಿಜೆಪಿ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುತ್ತವೆ ಎಂದು ವಿರೋಧ ಪಕ್ಷಗಳು ಆರೋಪಿಸಿದ್ದವು. ಅಲ್ಲದೆ ಸಮಾಜವಾದಿ ಪಕ್ಷವು, ‘ಬಿಎಸ್‌ಪಿಯು ಬಿಜೆಪಿಯ ಬಿ ಟೀಂ’ ಎಂದು ಆರೋಪಿಸಿತ್ತು.

ಈ ಬಗ್ಗೆ ಚುನಾವಣಾ ಪ್ರಚಾರ ಸಭೆಯಲ್ಲಿ ಪ್ರತಿಕ್ರಿಯಿಸಿರುವ ಬಿಎಸ್‌ ಪಿ ವರಿಷ್ಠೆ ಮಾಯಾವತಿ, ನಮ್ಮ ಪಕ್ಷವು ಬಿಜೆಪಿಯ ಬಿ ಟೀಂ ಆಗಿದ್ದೇ ನಿಜವಾದರೆ, ಲೋಕಸಭಾ ಉಪಚುನಾವಣೆಯಲ್ಲಿ ನಮ್ಮ ಜೊತೆ ಸಮಾಜವಾದಿ ಪಕ್ಷವು ಮೈತ್ರಿ ಮಾಡಿಕೊಂಡಿದ್ದು ಏಕೆ ಎಂದು ಅವರು ಪ್ರಶ್ನಿಸಿದರು.


Provided by

ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಎಸ್‌ಪಿ ಇನ್ನೂ ಪ್ರಸ್ತುತವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಮಾಯಾವತಿ ಅವರು, ಸತ್ಯವನ್ನು ಒಪ್ಪಿಕೊಳ್ಳುವ ದೊಡ್ಡತನವನ್ನು ಅಮಿತ್ ಶಾ ತೋರಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್‌ನ ಅಧ್ಯಕ್ಷೆ ಸೋನಿಯಾ ಗಾಂಧಿ ಇರುವಂತೆ, ನಾನು ಒಂದು ರಾಷ್ಟ್ರೀಯ ಪಕ್ಷದ ಅಧ್ಯಕ್ಷೆ. ಸಂತ್ರಸ್ತರ ಮನೆಗೆ ಹೋಗಿ ಭೇಟಿ ನೀಡಲು, ನೆರವು ನೀಡಲು ನಮ್ಮ ಪಕ್ಷದಲ್ಲಿ ಪದಾಧಿಕಾರಿಗಳಿದ್ದಾರೆ. ಅವರು ಆ ಕೆಲಸ ಮಾಡುತ್ತಾರೆ ಎಂದು ಅವರು ಮಾಧ್ಯಮಗಳ ವಿರುದ್ಧವೂ ಹರಿಹಾಯ್ದಿದರು.

ಅತ್ಯಾಚಾರ, ಹಲ್ಲೆಗೆ ಗುರಿಯಾದ ದಲಿತರ ಮನೆಗೆ ಮಾಯಾವತಿ ಭೇಟಿ ನೀಡಿಲ್ಲ ಎಂದು ಈ ಮಾಧ್ಯಮಗಳು ಕೇಳುತ್ತಿವೆ. ಪ್ರಿಯಾಂಕಾ ಗಾಂಧಿಯಂತೆ ಸಂತ್ರಸ್ತರ ಮನೆಗೆ ಹೋಗಿ, ನಾಟಕವಾಡಲು ನಾನು ಯಾವುದೇ ಪಕ್ಷದ ಉಸ್ತುವಾರಿ ಅಥವಾ ಪ್ರಧಾನ ಕಾರ್ಯದರ್ಶಿ ಅಲ್ಲ ಎಂದರು.

2007ರಂತೆ ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲು ಬಿಸ್‌ಪಿ ಯತ್ನ
ಫೆ. 23ರಂದು ಯುಪಿ ವಿಧಾನಸಭಾ ಚುನಾವಣೆಯಲ್ಲಿ ನಾಲ್ಕನೇ ಹಂತದ ಮತದಾನ ಪೂರ್ಣಗೊಂಡಿದೆ. ಎಲ್ಲಾ ರಾಜಕೀಯ ಪಕ್ಷಗಳು ಮುಂದಿನ ಹಂತಗಳಿಗೆ ಸಂಪೂರ್ಣವಾಗಿ ಸಿದ್ಧತೆ ನಡೆಸಿವೆ. ಹೀಗಿರುವಾಗ ಬಿಎಸ್‌ಪಿ ಅಧ್ಯಕ್ಷೆ ಮಾಯಾವತಿ ಅವರು 2007ರಂತೆ ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸುವ ಸಾಧನೆಗೆ ಮರಳಿ ಯತ್ನಿಸುತ್ತೇವೆ.

ಈ ಮೂಲಕ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರ ಸರ್ಕಾರ ರಚಿಸುವ ಎಲ್ಲಾ ಕನಸುಗಳು ನುಚ್ಚು ನೂರಾಗುತ್ತವೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಇದೇ ಸಂದರ್ಭದಲ್ಲಿ, ಬಿಎಸ್‌ಪಿ ಅಧ್ಯಕ್ಷೆ ಮಾಯಾವತಿ ಬಿಎಸ್‌ಪಿಯ ಪ್ರಸ್ತುತತೆ ಹಾಗೇ ಉಳಿಯಬೇಕು ಎಂದು ಉಲ್ಲೇಖಿಸಿದ್ದ ಅಮಿತ್ ಶಾ ಅವರನ್ನುದ್ದೇಶಿಸಿ ಸತ್ಯ ಒಪ್ಪಿಕೊಂಡಿರುವುದು ಅವರ ದೊಡ್ಡತನ ಎಂದು ಅವರು ಹೊಗಳಿದ್ದಾರೆ.

ಮಾಯಾವತಿ ಅವರು ಮತ ಚಲಾಯಿಸಿದ ನಂತರ ಸಾಮಾಜಿಕ ಮಾಧ್ಯಮ ಟ್ವಿಟರ್ ಹ್ಯಾಂಡಲ್‌ನಿಂದ ಪತ್ರಿಕಾ ಪ್ರಕಟಣೆಯನ್ನು ಶೇರ್ ಮಾಡಿಕೊಂಡಿದ್ದಾರೆ. ಬುಧವಾರ ಬೆಳಗ್ಗೆ 7 ಗಂಟೆಗೆ ಬಿಎಸ್‌ ಪಿ ಮುಖ್ಯಸ್ಥರು ತಮ್ಮ ಹಕ್ಕು ಚಲಾಯಿಸಿದ್ದಾರೆ ಎಂದೂ ಹೇಳಲಾಗಿದೆ. ಈ ನಡುವೆ ಮಾಧ್ಯಮದವರೊಂದಿಗೆ ಸಂವಾದ ನಡೆಸಿದ್ದಾರೆ. ಹೀಗಿರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿಎಸ್‌ಪಿ ಕೂಡ ಚುನಾವಣೆಯಲ್ಲಿ ಪ್ರಬಲವಾಗಿ ಹೋರಾಡುತ್ತಿದೆ. ದಲಿತರು ಮತ್ತು ಮುಸ್ಲಿಮರ ಮತಗಳನ್ನು ಹೆಚ್ಚು ಪಡೆಯುತ್ತಿದೆ ಎಂಬ ಬಗ್ಗೆ ತಿಳಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

 ಇಂಡೋನೇಷ್ಯಾ ದಲ್ಲಿ ಪ್ರಬಲ ಭೂಕಂಪ: 7 ಮಂದಿ ಸಾವು, 85 ಮಂದಿಗೆ ಗಾಯ

ಮಾರಾಕಾಸ್ತ್ರ ತೋರಿಸಿ ದರೋಡೆಗೆ ಯತ್ನ: ಇಬ್ಬರು ಆರೋಪಿಗಳ ಸೆರೆ

ಪತಿಯನ್ನು ಕೊಂದು ದೇಹದ ತುಂಡು ಟ್ಯಾಂಕ್‍ನಲ್ಲಿ ಬಚ್ಚಿಟ್ಟ ಪತ್ನಿ

ಉಕ್ರೇನ್‌ ಸೇನೆಯಿಂದ ರಷ್ಯಾದ ಇಬ್ಬರು ಸೈನಿಕರ ಸೆರೆ

ಮಾರಕ ಕಾಯಿಲೆಯಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಸಾವು

 

ಇತ್ತೀಚಿನ ಸುದ್ದಿ