ರಷ್ಯಾದ ಸಾರಿಗೆ ವಿಮಾನ ಹೊಡೆದುರುಳಿಸಿದ ಉಕ್ರೇನ್ : ಅಧಿಕಾರಿಗಳ ಮಾಹಿತಿ
ಉಕ್ರೇನ್: ರಷ್ಯಾ ಮತ್ತು ಉಕ್ರೇನ್ ನಡುವಿನ ದಾಳಿ-ಪ್ರತಿದಾಳಿಗಳು ತೀವ್ರವಾಗುತ್ತಿದ್ದು, ಈ ಬೆನ್ನಲ್ಲೇ ರಷ್ಯಾದ ಸಾರಿಗೆ ವಿಮಾನ ಐಎಲ್-76 (IL-76)ನ್ನು ಉಕ್ರೇನ್ ಹೊಡೆದುರುಳಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಘಟನೆ ಕೀವ್ ನಗರದ ವಾಸಿಲ್ಕಿವ್ ಪಟ್ಟಣದ ಬಳಿ ನಡೆದಿದೆ. ಉಕ್ರೇನ್ ಸಶಸ್ತ್ರ ಪಡೆಗಳ ಜನರಲ್ ಸ್ಟಾಫ್ ಫೇಸ್‌ಬುಕ್‌ನಲ್ಲಿ ಈ ಕುರಿತು ಮಾಹಿತಿ ನೀಡಿದ್ದಾರೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಶನಿವಾರ ರಾತ್ರಿ ಕೀವ್ನಲ್ಲಿ ಸರಣಿ ಸ್ಫೋಟಗಳು ನಡೆಯುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋಗಳು ಪ್ರಸಾರವಾಗುತ್ತಿವೆ. ಕೀವ್‌ನ ವಾಯವ್ಯ ಪ್ರದೇಶದಲ್ಲಿ ಸ್ಫೋಟಗಳು ಹೆಚ್ಚಾಗಿ ಸಂಭವಿಸುತ್ತಿವೆ. ಮಿಲಿಟರಿ ನೆಲೆಯ ಪಕ್ಕದಲ್ಲಿರುವ ಬೆರೆಸ್ಟಿಸ್ಕಾ ಮೆಟ್ರೋ ನಿಲ್ದಾಣದ ಬಳಿ ಸ್ಫೋಟಗಳು ನಡೆದಿವೆ ಎಂದು ರಷ್ಯನ್ ಟಿವಿ ವರದಿ ಮಾಡಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಫ್ಲೆಕ್ಸ್ ಅಳವಡಿಸುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಸಾವು
ಕುಡಿಯಲು ಹಣ ನೀಡದ್ದಕ್ಕೆ ಹೆತ್ತ ತಾಯಿಯನ್ನೇ ಹತ್ಯೆಗೈದ ಮಗ
10ನೇ ಮಹಡಿಯ ಕಟ್ಟಡದಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ
ತರಬೇತಿ ವಿಮಾನ ಪತನ: ಮಹಿಳಾ ಪೈಲಟ್, ತರಬೇತಿ ನಿರತ ಪೈಲಟ್ ಸಾವು
ಇಂಡೋನೇಷ್ಯಾ ದಲ್ಲಿ ಪ್ರಬಲ ಭೂಕಂಪ: 7 ಮಂದಿ ಸಾವು, 85 ಮಂದಿಗೆ ಗಾಯ