ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿದ ತಂದೆ - Mahanayaka

ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿದ ತಂದೆ

rape
01/03/2022

ಚಿಕ್ಕಮಗಳೂರು: ಅಪ್ರಾಪ್ತೆ ಮೇಲೆ ಆಕೆಯ ಮಲ ತಂದೆಯೇ ಅತ್ಯಾಚಾರವೆಸಗಿರುವ ಘಟನೆ ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಗ್ರಾಮವೊಂದರಲ್ಲಿ ನಡೆದಿರುವ ಬಗ್ಗೆ ವರದಿಯಗಿದೆ.

ಕೃಷ್ಣ (34) ಈ ಕೃತ್ಯವೆಸಗಿದ ಆರೋಪಿ. ಈತನ ಪತ್ನಿ ಕೂಲಿ ಕೆಲಸಕ್ಕೆ ಹೋದಾಗ ಮಗಳ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಕಳೆದ 5 ತಿಂಗಳಿನಿಂದ 7 ಬಾರಿ ಮಗಳ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದೆ.

ಈ ಕುರಿತು ಯಾರಿಗೂ ಹೇಳದಂತೆ ಆರೋಪಿ ಕೃಷ್ಣ ಬಾಲಕಿಗೆ ಬೆದರಿಕೆ ಹಾಕಿದ್ದ. ಅಲ್ಲದೆ, ಇತ್ತೀಚೆಗೆ ತಾಯಿಗೆ ಈ ವಿಚಾರ ಗೊತ್ತಾಗಿ, ಗಂಡನನ್ನು ಪ್ರಶ್ನಿಸಿದ್ದಕ್ಕೆ ಆಕೆಯ ಮೇಲೆಯೂ ಹಲ್ಲೆ ನಡೆಸಿದ್ದಾನೆ.
ಈ ಘಟನೆ ಸಂಬಂಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಸಿಗರೇಟ್‍ ನಿಂದ ಸುಟ್ಟು ಗರ್ಭಿಣಿಗೆ ಕಿರುಕುಳ: ಪತಿ ಬಂಧನ

ಸಿಬಿಐ ಅಧಿಕಾರಿಗಳು ಎಂದು ಹೇಳಿ ಲಕ್ಷಾಂತರ ರೂ. ನಗದು, ಚಿನ್ನಾಭರಣ ದರೋಡೆ

ಜಾರ್ಖಂಡ್ ದೋಣಿ ದುರಂತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ

ವುಡ್​ ಕಾಂಪ್ಲೆಕ್ಸ್​​ ಬಳಿ ನಿಲ್ಲಿಸಿದ್ದ ಖಾಸಗಿ ಬಸ್​​​ಗಳಿಗೆ ಬೆಂಕಿ

ಉಕ್ರೇನ್ ಮೇಲೆ ರಷ್ಯಾ ವೈಮಾನಿಕ ದಾಳಿ: ಕರ್ನಾಟಕ ಮೂಲದ ವಿದ್ಯಾರ್ಥಿಯ ಸಾವು

 

ಇತ್ತೀಚಿನ ಸುದ್ದಿ