ನಮ್ಮ ಮಗನ ಸಾವಿಗೆ ಈ ಸರ್ಕಾರವೇ ಕಾರಣ: ಮೃತ ನವೀನ್ ತಂದೆ ಶೇಖರಗೌಡ
ಹುಬ್ಬಳ್ಳಿ: ನಮ್ಮ ಮಗನ ಸಾವಿಗೆ ಈ ಸರ್ಕಾರವೇ ಕಾರಣ. ನಮ್ಮ ಮಗ ರಾಯಭಾರಿ ಕಚೇರಿಗೆ ಪೋನ್ ಮಾಡಿದರೆ ಅಲ್ಲಿಂದ ಸರಿಯಾದ ಪ್ರತಿಕ್ರಿಯೆ ಸಿಗಲಿಲ್ಲ ಎಂದು ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ತಂದೆ ಶೇಖರಗೌಡ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಮಗನ ಜೊತೆಗೆ ಬೆಳಗ್ಗೆ 10 ಗಂಟೆಗೆ ಮಾತನಾಡಿದ್ದೇನೆ. ನಂತರ ಫೋನ್ ಮಾಡಿದಾಗ ರಿಂಗ್ ಆಯಿತು, ಆದರೆ ಕರೆ ಸ್ವೀಕರಿಸಲಿಲ್ಲ. ಇದಾದ ಕೆಲವೇ ಗಂಟೆಯಲ್ಲಿ ನಮ್ಮ ಮಗನ ಸಾವಿನ ಸುದ್ದಿಯನ್ನ ರಾಯಭಾರಿ ಕಚೇರಿ ತಿಳಿಸಿತು. ನಮ್ಮ ಮಗನ ಸಾವಿಗೆ ಈ ಸರ್ಕಾರವೇ ಕಾರಣ. ನಮ್ಮ ಮಗ ರಾಯಭಾರಿ ಕಚೇರಿಗೆ ಪೋನ್ ಮಾಡಿದರೆ ಅಲ್ಲಿಂದ ಸರಿಯಾದ ಪ್ರತಿಕ್ರಿಯೆ ಸಿಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಅಲ್ಲಿಂದ ಪ್ರತಿಕ್ರಿಯೆ ಬಂದಿದ್ದರೆ ನಮ್ಮ ಸಾಯುತ್ತಿರಲಿಲ್ಲ. ನಾವು ನಮ್ಮ ಮಗನನ್ನ ಕಳೆದುಕೊಂಡಿದ್ದೇವೆ. ನಮಗಾದ ಸ್ಥಿತಿ ಬೇರೆ ಪೋಷಕರಿಗೆ ಆಗೋದು ಬೇಡ. ಆ ಮಕ್ಕಳನ್ನಾದರೂ ಸರ್ಕಾರ ಸುರಕ್ಷಿತವಾಗಿ ಕರೆತರಲಿ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಹಿರಿಮೆ ಕಾಪಾಡಿದ ಬೌದ್ಧ ಧರ್ಮದ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಿ: ಸಿಎಂಗೆ ಮನವಿ
ದೊಣ್ಣೆಯಿಂದ ಹೊಡೆದು ವ್ಯಕ್ತಿಯ ಭೀಕರ ಹತ್ಯೆ
ಪ್ರವಾಸಕ್ಕೆ ಬಂದ ಇಬ್ಬರು ವಿದ್ಯಾರ್ಥಿಗಳು ನದಿನೀರು ಪಾಲು
ಎರಡೂವರೆ ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ: ಅಪರಾಧಿಗೆ ಮರಣದಂಡನೆ
ಸಿಬಿಐ ಅಧಿಕಾರಿಗಳು ಎಂದು ಹೇಳಿ ಲಕ್ಷಾಂತರ ರೂ. ನಗದು, ಚಿನ್ನಾಭರಣ ದರೋಡೆ