ನ್ಯಾಯಾಧೀಶರಿಗೆ ಚಾಕುವಿನಿಂದ ಇರಿತ: ಕಚೇರಿ ಸಹಾಯಕ ಸಿಬ್ಬಂದಿಯ ಬಂಧನ - Mahanayaka
5:54 AM Thursday 12 - December 2024

ನ್ಯಾಯಾಧೀಶರಿಗೆ ಚಾಕುವಿನಿಂದ ಇರಿತ: ಕಚೇರಿ ಸಹಾಯಕ ಸಿಬ್ಬಂದಿಯ ಬಂಧನ

arrested
02/03/2022

ಚೆನ್ನೈ: ಕೋರ್ಟ್ ಕಚೇರಿಯ ಸಹಾಯಕ ಸಿಬ್ಬಂದಿಯೊಬ್ಬ ನ್ಯಾಯಾಧೀಶರಿಗೆ ಚಾಕುವಿನಿಂದ ಇರಿದಿರುವ ಘಟನೆ ಸೇಲಂನಲ್ಲಿ ನಡೆದಿದ್ದು, ಘಟನೆ ಸಂಬಂಧ ಆರೋಪಿಯನ್ನು ಬಂಧಿಸಲಾಗಿದೆ.

ಬಂಧಿತ ಆರೋಪಿಯನ್ನು ಪ್ರಕಾಶ್ (37) ಎಂದು ಗುರುತಿಸಲಾಗಿದೆ. ಪ್ರಕಾಶ್ ಬೇರೆ ಊರಿನಿಂದ ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾವಣೆಗೊಂಡಿದ್ದಕ್ಕಾಗಿ ಅಸಮಾಧಾನಗೊಂಡು ಮ್ಯಾಜಿಸ್ಟ್ರೇಟ್‌ಗೆ ಚಾಕುವಿನಿಂದ ಇರಿದಿದ್ದಾನೆ. ಕೂಡಲೇ ಸ್ಥಳದಲ್ಲಿದ್ದ ಸಿಬ್ಬಂದಿ ನ್ಯಾಯಾಧೀಶರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ತನ್ನ ವರ್ಗಾವಣೆ ಪ್ರಸ್ತಾವನೆಯನ್ನು ನಿರಾಕರಿಸಿದ್ದಕ್ಕೆ ನ್ಯಾಯಾಧೀಶ ಪೊನ್ಪಾಂಡಿಗೆ ಚಾಕುವಿನಿಂದ ಇರಿದಿರುವುದಾಗಿ ತನಿಖೆಯ ವೇಳೆ ಪ್ರಕಾಶ್ ತಪ್ಪೊಪ್ಪಿಕೊಂಡಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಅಪರೂಪದ ಬರ್ಕ ಜಿಂಕೆ ಬೇಟೆ: ಹಾಸನದಲ್ಲಿ ಮೂವರ ಬಂಧನ

ಚೂರಿಯೊಂದಿಗೆ ಮಸೀದಿಗೆ ನುಗ್ಗಲು ಯತ್ನ: ಆರೋಪಿ ವಶಕ್ಕೆ

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ

ಯುದ್ದಪೀಡಿತ ರಷ್ಯಾ ವಿರುದ್ಧ ಸಂಘರ್ಷಕ್ಕೆ ಇಳಿಯುವುದಿಲ್ಲ: ಜೋ ಬೈಡನ್‌

ಉಕ್ರೇನ್ ಮೇಲೆ ರಷ್ಯಾ ದಾಳಿ: ಕನ್ನಡಿಗ ನವೀನ್ ಮೃತದೇಹ ಪತ್ತೆ

 

ಇತ್ತೀಚಿನ ಸುದ್ದಿ