ಪ್ರೀತಿಸಿ ಮದುವೆಯಾದ ಯುವಕ ಆತ್ಮಹತ್ಯೆ: ಸತ್ತು ಮೂರು ದಿನವದರೂ ಕುಟುಂಬಸ್ಥರಿಗೆ ತಿಳಿಸದ ಪತ್ನಿ
ಹುಬ್ಬಳ್ಳಿ: ಪ್ರೀತಿಸಿ ಮದುವೆಯಾದ ವ್ಯಕ್ತಿಯೊರ್ವ ಆತ್ಮಹತ್ಯೆಗೆ ಶರಣಾದ ಘಟನೆ ನವನಗರದ ಎಲ್ಐಜಿನಲ್ಲಿ ನಡೆದಿದೆ.
ಮಂಜುನಾಥ್ ಅಬ್ಬಿಗೇರಿ (30) ಮೃತ ಯುವಕ. ಧಾರವಾಡದ ಎತ್ತಿನಗುಡ್ಡದ ನಿವಾಸಿಯಾಗಿರುವ ಮಂಜುನಾಥ ಅಬ್ಬಿಗೇರಿ ಕಳೆದ 9 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿ ನವನಗರದ ಎಲ್‌ಐಜಿಯಲ್ಲಿ ಬಾಡಿಗೆ ಮನೆಯಲ್ಲಿ ತನ್ನ ಹೆಂಡತಿಯೊಂದಿಗೆ ವಾಸವಾಗಿದ್ದರು. ಮಂಜುನಾಥ ಅಬ್ಬಿಗೇರಿ ಮೂರು ದಿನಗಳ ಹಿಂದೆ ಮನೆಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದು, ಆತನ ಪತ್ನಿ ಮಾತ್ರ ಈ ವಿಚಾರವನ್ನು ಕುಟುಂಬಸ್ಥರಿಗೆ ತಿಳಿಸಿಲ್ಲ ಎನ್ನಲಾಗಿದೆ.
ಮಂಜುನಾಥ ಅಬ್ಬಿಗೇರಿ ಶವದ ವಾಸನೆ ಬರುತ್ತಿದ್ದಂತೆ ಸ್ಥಳೀಯರು ನವನಗರ ಎಪಿಎಂಸಿ ಪೋಲಿಸ್ ಠಾಣೆಯ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿ ಮಂಜುನಾಥ ಅಬ್ಬಿಗೇರಿ ಶವವನ್ನು ವಶಕ್ಕೆ ಪಡೆದು ಕಿಮ್ಸ್ ಶವಗಾರಕ್ಕೆ ರವಾನಿಸಿದ್ದಾರೆ. ಮಂಜುನಾಥ ಅಬ್ಬಿಗೇರಿ ಸಾವಿನ ಬಗ್ಗೆ ಕುಟುಂಬಸ್ಥರು ಸಂಶಯ ವ್ಯಕ್ತಪಡಿಸಿದ್ದು, ಈ ಬಗ್ಗೆ ತನಿಖೆ ನಡೆಸಿ ಸತ್ಯಾಸತ್ಯತೆ ತಿಳಿಸಬೇಕೆಂದು ಆಗ್ರಹಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಕಂದಕಕ್ಕೆ ಉರುಳಿದ್ದ ಬೋಲೇರೋ ಜೀಪ್: ಸ್ಥಳದಲ್ಲೇ ಮಹಿಳೆ ಸಾವು
ಹೈಟೆಕ್ ವೇಶ್ಯಾವಾಟಿಕೆ ದಂಧೆ: ಮೂವರು ಆರೋಪಿಗಳ ಬಂಧನ
ಮಹಿಳೆಯ ನಗ್ನ ಫೋಟೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್: ಆರೋಪಿಯ ಬಂಧನ
ಉಕ್ರೇನ್: ನವೀನ್ ಬಲಿಯಾದ ಸ್ಥಳದಿಂದ 100 ಮೀಟರ್ ಅಂತರದಲ್ಲಿ ಸಿಲುಕಿದ್ದಾರೆ ಉಜಿರೆ ವಿದ್ಯಾರ್ಥಿನಿ!