ಬುದ್ಧಿಮಾಂದ್ಯ ಯುವತಿ ಮೇಲೆ ಅತ್ಯಾಚಾರ: ಆರೋಪಿಯ ಬಂಧನ
ಪುತ್ತೂರು: ಬುದ್ಧಿಮಾಂದ್ಯ ಯುವತಿಯ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಪುತ್ತೂರು ತಾಲೂಕಿನ ಕಾಣಿಯೂರು ಎಂಬಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಬಂಡಾಜೆ ಗ್ರಾಮದ ಚಂದ್ರಶೇಖರ್ (57) ಬಂಧಿತ ಆರೋಪಿಯಾಗಿದ್ದಾನೆ. ಯುವತಿಯ ಸಹೋದರ ಚಾರ್ವಾಕದಲ್ಲಿರುವ ತನ್ನ ಜಮೀನಿನಲ್ಲಿ ಕೃಷಿ ಕೆಲಸದ ಬಗ್ಗೆ ತಂದೆ, ತಾಯಿಯವರನ್ನು ಬಿಟ್ಟು ಬರಲು ಹೋಗಿರುವ ವೇಳೆ ಬುದ್ಧಿಮಾಂದ್ಯ ಯುವತಿ ಮನೆಯಲ್ಲಿ ಒಬ್ಬಳೇ ಇದ್ದರು ಎನ್ನಲಾಗಿದೆ.
ಈ ವೇಳೆ ಆಕೆಯನ್ನು ಆರೋಪಿ ಚಂದ್ರಶೇಖರ ನೀನು ನನ್ನ ಜತೆ ಗುಡ್ಡಕ್ಕೆ ಬರಬೇಕು. ಇಲ್ಲದಿದ್ದರೆ ನಿನಗೆ ತೊಂದರೆ ನೀಡುತ್ತೇನೆ ಎಂದು ಬೆದರಿಸಿ ಕರೆದೊಯ್ದಿದ್ದಾನೆ ಎಂದು ಆಕೆ ತಿಳಿಸಿರುವುದಾಗಿ ಸಹೋದರ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಬೈಕ್‌ಗೆ ಟಿಪ್ಪರ್ ಢಿಕ್ಕಿ: ಸವಾರ ಸ್ಥಳದಲ್ಲೇ ಸಾವು
ಭೀಕರ ಸ್ಫೋಟ: 11 ಮಂದಿ ಸಾವು; ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ