ಕಾಲೇಜಿನಿಂದ ಡಿಬಾರ್: 5ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ - Mahanayaka
10:10 AM Wednesday 11 - December 2024

ಕಾಲೇಜಿನಿಂದ ಡಿಬಾರ್: 5ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

bavya
05/03/2022

ಬೆಂಗಳೂರು; ಕಾಲೇಜಿನಿಂದ ಡಿಬಾರ್ ಮಾಡಿದಕ್ಕೆ ಮನನೊಂದು ವಿದ್ಯಾರ್ಥಿನಿಯೊಬ್ಬಳು 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಡಿಕೊಂಡಿರುವ ಘಟನೆ ನಡೆದಿದೆ.

ಭವ್ಯಾ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಜ್ಯೋತಿನಿವಾಸ್ ಕಾಲೇಜಿನಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದು, ಪರೀಕ್ಷೆ ನಕಲಿ ಮಾಡುತ್ತಿದ್ದ ಕಾರಣಕ್ಕೆ ಡಿಬಾರ್​ ಮಾಡಲಾಗಿತ್ತು. ಇದರಿಂದ ಮನನೊಂದು ತನ್ನ ಸಹೋದರಿ ದಿವ್ಯಾಗೆ ಕರೆ ಮಾಡಿ, ನನ್ನನ್ನು ಕಾಲೇಜಿನಿಂದ ಡಿಬಾರ್ ಮಾಡಿದ್ದಾರೆ. ಹೀಗಾಗಿ, ತಾನು ಬದುಕುವುದಿಲ್ಲ ಎಂದು ಲೇಡಿಸ್​ ಪಿಜಿ ಕಟ್ಟಡದ 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಈ ವಿಚಾರವನ್ನು ಭವ್ಯಾಳ ಸಹೋದರಿ ದಿವ್ಯಾ ತಂದೆಗೆ ತಿಳಿಸಿದ್ದಾಳೆ. ಆದರೆ, ಆಕೆಯ ತಂದೆ ಮುಳಬಾಗಿಲಿನಿಂದ ಪಿಜಿ ಬಳಿ ಬರುತ್ತಿದ್ದಂತೆ ಪೊಲೀಸರು ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಕರೆ ಮಾಡಿದ್ದಾರೆ. ಈ ಸಂಬಂಧ ಜೀವನ್​ ಭೀಮಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಶೇನ್ ವಾರ್ನ್ ಹಠಾತ್ ನಿಧನಕ್ಕೆ ಕಾರಣವೇನು?

ಆಸ್ಟ್ರೇಲಿಯಾದ ಕ್ರಿಕೆಟ್ ದಿಗ್ಗಜ ಶೇನ್​ ವಾರ್ನ್ ನಿಧನ

ಬಿಳಿಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿತ:10ಕ್ಕೂ ಹೆಚ್ಚು ಕಾರ್ಮಿಕರು ಮೃತಪಟ್ಟಿರುವ ಶಂಕೆ

ಮಸೀದಿಯಲ್ಲಿ ನಮಾಜ್ ವೇಳೆ ಬಾಂಬ್ ಸ್ಫೋಟ: 30 ಮಂದಿ ಸಾವು, 50ಕ್ಕೂ ಹೆಚ್ಚು ಮಂದಿಗೆ ಗಾಯ

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ

 

ಇತ್ತೀಚಿನ ಸುದ್ದಿ