ಸಾಮಾಜಿಕ ಹೋರಾಟಗಾರ, ನಟ ಚೇತನ್‌ ಗೆ ನೀಡಿದ್ದ ಗನ್‌ ಮ್ಯಾನ್ ಹಿಂಪಡೆದ ಸರಕಾರ - Mahanayaka
1:22 AM Wednesday 11 - December 2024

ಸಾಮಾಜಿಕ ಹೋರಾಟಗಾರ, ನಟ ಚೇತನ್‌ ಗೆ ನೀಡಿದ್ದ ಗನ್‌ ಮ್ಯಾನ್ ಹಿಂಪಡೆದ ಸರಕಾರ

chethan kumar ahimsa
05/03/2022

ಬೆಂಗಳೂರು: ಸಾಮಾಜಿಕ ಹೋರಾಟಗಾರ, ನಟ ಚೇತನ್ ಅವರಿಗೆ ನೀಡಲಾಗಿದ್ದ ಗನ್ ಮ್ಯಾನ್ ಅನ್ನು ಸರಕಾರ ಹಿಂಪಡೆದಿರುವ ಬಗ್ಗೆ ವರದಿಯಾಗಿದೆ.

ಸರಕಾರದ ಈ ನಡೆಗೆ ಅವರು ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಅಲ್ಲದೆ, ತಮಗೆ ಈಗಲೂ ಜೀವಕ್ಕೆ ಅಪಾಯವಿದ್ದರೂ, ಗನ್ ಮ್ಯಾನ್ ಹಿಂಪಡೆದಿದ್ದಕ್ಕಾಗಿ ಚೇತನ್, ಶುಕ್ರವಾರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರನ್ನು ಭೇಟಿ ಮಾಡಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಚೇತನ್, ನನಗೆ ಈಗಲೂ ಜೀವ ಬೆದರಿಕೆ ಇದೆ. ಗೌರಿ ಲಂಕೇಶ್ ಹತ್ಯೆ ಬಳಿಕ ನೀಡಲಾಗಿದ್ದ ಗನ್ ಮ್ಯಾನ್ ಅನ್ನು ಏಕಾಏಕಿ ಹಿಂಪಡೆದಿದ್ದಾರೆ. ಹಾಗಾಗಿ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ, ಗನ್ ಮ್ಯಾನ್ ವಾಪಸ್ಸು ಕಳುಹಿಸುವಂತೆ ಮನವಿ ಮಾಡಿದ್ದೇನೆ ಎಂದರು.

ಇದೇ ಸಂದರ್ಭದಲ್ಲಿಯೇ ಅವರು ತಮ್ಮ ಮನೆಯ ಹತ್ತಿರ ಬೀಟ್ ವ್ಯವಸ್ಥೆಯನ್ನು ಹೆಚ್ಚಿಸುವಂತೆ ಚೇತನ್ ಮನವಿ ಮಾಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮೀನು ವ್ಯಾಪಾರಿ ಮೇಲೆ ತಲವಾರಿನಿಂದ ದಾಳಿ: 2 ಲಕ್ಷ ರೂ. ನಗದು ದರೋಡೆ

ಉಕ್ರೇನ್‌ ನಲ್ಲಿ ರಷ್ಯಾದಿಂದ ತಾತ್ಕಾಲಿಕ ಕದನ ವಿರಾಮ ಘೋಷಣೆ

ಕಾಲೇಜಿನಿಂದ ಡಿಬಾರ್: 5ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಶೇನ್ ವಾರ್ನ್ ಹಠಾತ್ ನಿಧನಕ್ಕೆ ಕಾರಣವೇನು?

ಬಿಳಿಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿತ:10ಕ್ಕೂ ಹೆಚ್ಚು ಕಾರ್ಮಿಕರು ಮೃತಪಟ್ಟಿರುವ ಶಂಕೆ

ಇತ್ತೀಚಿನ ಸುದ್ದಿ