ಎನ್‌ ಎಸ್‌ ಇ ಮಾಜಿ ಸಿಇಒ ಚಿತ್ರಾ ರಾಮಕೃಷ್ಣ ಬಂಧನ - Mahanayaka
3:22 PM Thursday 12 - December 2024

ಎನ್‌ ಎಸ್‌ ಇ ಮಾಜಿ ಸಿಇಒ ಚಿತ್ರಾ ರಾಮಕೃಷ್ಣ ಬಂಧನ

chithra
07/03/2022

ನವದೆಹಲಿ: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ ಮಾಜಿ ಸಿಇಒ ಚಿತ್ರಾ ರಾಮಕೃಷ್ಣ ಅವರನ್ನು ಸಿಬಿಐ ಭಾನುವಾರ ಬಂಧಿಸಿದೆ.

ಹಿಮಾಲಯದ ನಿಗೂಢ ಯೋಗಿಯೊಬ್ಬರ ಆದೇಶ ಪಾಲಿಸುತ್ತಿದ್ದ ಚಿತ್ರಾ ಮತ್ತು ಎನ್‌ಎಸ್‌ಇಯ ಇತರ ಅಧಿಕಾರಿಗಳು ಸೂಕ್ಷ್ಮ ಮಾಹಿತಿಗಳನ್ನು ಕಂಪೆನಿಯೊಂದಕ್ಕೆ ನೀಡಿದ ಆರೋಪ ಎದುರಿಸುತ್ತಿದ್ದಾರೆ.

ಚಿತ್ರಾ ರಾಮಕೃಷ್ಣ ಅವರನ್ನು ನವದೆಹಲಿಯಲ್ಲಿ ಬಂಧಿಸಿ, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಬಳಿಕ ಅವರನ್ನು ಸಿಬಿಐ ಕೆಂದ್ರ ಕಚೇರಿಯ ಲಾಕಪ್‌ನಲ್ಲಿ ಇರಿಸಲಾಗಿದೆ.
ಮೂರು ದಿನಗಳಿಂದ ಚಿತ್ರಾ ಅವರನ್ನು ವಿಚಾರಣೆ ನಡೆಸಿದ್ದ ಸಿಬಿಐ, ಅವರ ನಿವಾಸದಲ್ಲಿ ಶೋಧ ನಡೆಸಿದೆ. ಅಧಿಕಾರಿಗಳ ಪ್ರಶ್ನೆಗೆ ಚಿತ್ರಾ ಸಮರ್ಪಕ ಉತ್ತರ ನೀಡಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರೀಯ ತನಿಖಾ ಸಂಸ್ಥೆಯು ಕೇಂದ್ರೀಯ ವಿಧಿವಿಜ್ಞಾನ ಪ್ರಯೋಗಾಲಯದ ಹಿರಿಯ ಮನಶ್ಶಾಸ್ತ್ರಜ್ಞರ ಸೇವೆಯನ್ನು ಸಹ ಬಳಸಿಕೊಂಡಿದೆ. ಚಿತ್ರಾ ಬಂಧಿಸುವುದನ್ನು ಬಿಟ್ಟು ಏಜೆನ್ಸಿಗೆ ಯಾವುದೇ ಆಯ್ಕೆ ಇರಲಿಲ್ಲ. ಅವರು ಪ್ರತಿಕ್ರಿಯೆಗಳಿಂದ ತಪ್ಪಿಸಿಕೊಳ್ಳುತ್ತಿದ್ದಳು ಎಂಬ ತೀರ್ಮಾನಕ್ಕೆ ಮನಶ್ಶಾಸ್ತ್ರಜ್ಞರು ಬಂದಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಶನಿವಾರ, ಸಿಬಿಐನ ವಿಶೇಷ ನ್ಯಾಯಾಲಯವು ಚಿತ್ರಾ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನ ವಜಾ ಮಾಡಿತ್ತು. ಹಿಮಾಲಯದ ನಿಗೂಢ ಯೋಗಿಯೊಬ್ಬರ ಸಲಹೆ ಮೇರೆಗೆ ಚಿತ್ರಾ ಕಾರ್ಯ ನಿರ್ವಹಿಸುತ್ತಿದ್ದರು ಎಂಬ ಮಾಹಿತಿ ಸಿಕ್ಕ ಬಳಿಕ, ಫೆ. 25ರಂದು ಎನ್‌ಎಸ್‌ಇಯ ಮಾಜಿ ಸಿಒಒ ಆನಂದ್ ಸುಬ್ರಮಣಿಯನ್ ಅವರನ್ನು ಸಿಬಿಐ ಬಂಧಿಸಿತ್ತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಯುವತಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ

ವ್ಲಾಡಿಮಿರ್‌ ಪುಟಿನ್‌ ತೆಗೆದುಕೊಳ್ಳುವ ಮುಂದಿನ ನಿರ್ಧಾರವೇನು? | ಯುದ್ಧ ಮತ್ತೆ ಆರಂಭವಾಗುತ್ತಾ?

ಭಾರತದ ಪ್ಯಾಲೆಸ್ಟೈನ್​​​ ರಾಯಭಾರಿ ಮುಕುಲ್ ಆರ್ಯ ನಿಗೂಢ ಸಾವು

ಟೀಚರ್ ವಿರುದ್ಧ ದೂರು ಕೊಡಲು ಪೊಲೀಸ್ ಠಾಣೆಗೆ ಬಂದ 2ನೇ ತರಗತಿಯ ವಿದ್ಯಾರ್ಥಿ

ಮನೆಯವರೊಂದಿಗೆ ಸೇರಿ ಪ್ರೇಮಿಯ ಹತ್ಯೆ

 

ಇತ್ತೀಚಿನ ಸುದ್ದಿ