ಸಂಬಂಧಿಕರ ಮನೆಗೆ ಬಂದಿದ್ದ ಯುವಕ ನೇಣಿಗೆ ಶರಣು
ಉಳ್ಳಾಲ: ಪಿಲಾರು ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಚಿಕ್ಕಮ್ಮನ ಮನೆಗೆ ಬಂದಿದ್ದ ಯುವಕನೋರ್ವ ಮನೆಯ ಕೋಣೆಯೊಳಗೆ ನೇಣು ಬಿಗಿದು ಆತ್ಮ ಹತ್ಯೆಗೈದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಪ್ರಕಾಶ್ ನಗರ ಎಂಬಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಮಂಗಳೂರು ಪಡೀಲು ನಿವಾಸಿ ಸೌರವ್ (21) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಸೋಮೇಶ್ವರ ಗ್ರಾಮದ ಪಿಲಾರಿನಲ್ಲಿ ಪಂಜಂದಾಯ ದೈವದ ದೊಂಪದ ಬಲಿ ಉತ್ಸವ ನಡೆಯುತ್ತಿದ್ದು, ಹೀಗಾಗಿ ಪಿಲಾರು ಪ್ರಕಾಶ್ ನಗರದ ಸುಜಾತಾ ಎಂಬವರ ಮನೆಗೆ ಪಡೀಲಿನಲ್ಲಿರುವ ಅವರ ಅಕ್ಕ, ಹಾಗೂ ಅವರ ಪುತ್ರ ಸೌರವ್ ಸೇರಿದಂತೆ ಕುಟುಂಬ ಸಮೇತ ಬಂದಿದ್ದರು.
ಜಾತ್ರೆಗೆ ತೆರಳಿ ಮಧ್ಯಾಹ್ನ ಮನೆಯಲ್ಲಿ ಊಟ ಮಾಡಿದ್ದ ಸೌರವ್ ನಿದ್ದೆ ಬರುತ್ತದೆ ಎಂದು ಹೇಳಿ ಕೋಣೆಗೆ ತೆರಳಿದ್ದಾನೆನ್ನಲಾಗಿದೆ. ಸಂಜೆಯ ವೇಳೆ ತಾಯಿ ಮಗನನ್ನು ಎಬ್ಬಿಸಲು ಹೋದಾಗ ಸೌರವ್ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಗೈದ ವಿಚಾರ ಬೆಳಕಿಗೆ ಬಂದಿದೆ. ಈ ಘಟನೆ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಆಸ್ತಿ ವಿಚಾರ: ಅಣ್ಣನಿಂದಲೇ ತಮ್ಮನ ಬರ್ಬರ ಕೊಲೆ
ಸೇನೆಗೆ ಸೇರುವ ಹಂಬಲ: ಉಕ್ರೇನ್ ಪಡೆಗೆ ಸೇರಿದ ತಮಿಳುನಾಡಿನ ಯುವಕ
ರಷ್ಯಾ-ಉಕ್ರೇನ್ ಯುದ್ಧದ ನಡುವೆಯೇ ಗಗನಕ್ಕೇರಿದ ಅಡುಗೆ ಎಣ್ಣೆ ಬೆಲೆ