ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ | ಕೇಂದ್ರ ಇಂಧನ ಸಚಿವರು ಜನರಿಗೆ ನೀಡಿದ ಸ್ಪಷ್ಟನೆ ಏನು? - Mahanayaka

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ | ಕೇಂದ್ರ ಇಂಧನ ಸಚಿವರು ಜನರಿಗೆ ನೀಡಿದ ಸ್ಪಷ್ಟನೆ ಏನು?

hardeep singh puri
08/03/2022

ನವದೆಹಲಿ: ಉಕ್ರೇನ್ ಹಾಗೂ ರಷ್ಯಾ ನಡುವೆ ನಡೆಯುತ್ತಿರುವ ಯುದ್ಧದ ಪರಿಣಾಮ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಲಿದೆ ಎನ್ನುವ ಮಾತುಗಳು ಬಲವಾಗಿ ಕೇಳಿ ಬರುತ್ತಿರುವ ನಡುವೆಯೇ ಕೇಂದ್ರ ಪೆಟ್ರೋಲಿಯಂ ಸಚಿವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.


Provided by

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಕುರಿತು ಪ್ರತಿಕ್ರಿಯಿಸಿರುವ ಸಚಿವ ಹರ್ದೀಪ್‌ ಸಿಂಗ್‌ ಪುರಿ, ಸಾರ್ವಜನಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು  ಇಂಧನ ಬೆಲೆಗಳ ಬಗ್ಗೆ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ ಮತ್ತು ಗೋವಾ ಹಾಗೂ ಮಣಿಪುರದಲ್ಲಿ ವಿಧಾನಸಭೆ ಚುನಾವಣೆ ಕಾರಣಕ್ಕೆ ಇಂಧನ ಬೆಲೆ ಇಳಿಕೆ ಮಾಡಿ, ಇದೀಗ ಮತ್ತೆ ಬೆಲೆ ಏರಿಕೆ ಮಾಡಲಾಗುತ್ತಿದೆ ಎಂಬ ವಿಪಕ್ಷಗಳ ಟೀಕೆಗೆ ಉತ್ತರಿಸಿದ ಅವರು, ಈ ರೀತಿಯ ಹೇಳಿಕೆ ಸರಿಯಲ್ಲ, ನಮ್ಮ ಸಾಮರ್ಥ್ಯದ ಅವಶ್ಯಕತೆಗಳನ್ನು ಪೂರೈಸುವುದನ್ನು ನಾವು ಖಚಿತಪಡಿಸಿಕೊಳ್ಳುತ್ತೇವೆ ಎಂದಿದ್ದಾರೆ.

ದೇಶದಲ್ಲಿ ಕಚ್ಚಾ ತೈಲಗಳ ಕೊರತೆಯಾಗುವುದಿಲ್ಲ ಎಂದು ನಾನು ಭರವಸೆ ನೀಡುತ್ತೇನೆ. ನಮ್ಮ ಅವಶ್ಯಕತೆಗಳಲ್ಲಿ 85 ಪ್ರತಿಶತದಷ್ಟು ಕಚ್ಚಾ ತೈಲದ ಆಮದು ಮತ್ತು 50-55 ಪ್ರತಿಶತ ಅನಿಲದ ಮೇಲೆ ಅವಲಂಬಿತವಾಗಿದ್ದರೂ, ನಮ್ಮ ಶಕ್ತಿಯ ಅವಶ್ಯಕತೆಗಳನ್ನು ಪೂರೈಸಲಾಗಿದೆಯೇ ಎಂದು ನಾವು ಖಚಿತಪಡಿಸಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮಹಿಳಾ ದಿನಾಚರಣೆಯಂದೇ ಹೀನ ಕೃತ್ಯ: ವಿದೇಶಿ ಮಹಿಳೆಯ ಅತ್ಯಾಚಾರಕ್ಕೆ ಯತ್ನ

ಡ್ರ್ಯಾಗನ್ ಫ್ರೂಟ್ ಸೇವನೆಯಿಂದಾಗುವ ಲಾಭಗಳೇನು?

4 ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಜೇಮ್ಸ್!

ಲೈಂಗಿಕ ದೌರ್ಜನ್ಯ ಪ್ರಕರಣ: ಮಲಯಾಳಂ ನಟ ದಿಲೀಪ್ ಗೆ ಮತ್ತೊಂದು ಆಘಾತ

ಮಹಿಳೆಯರ ಹಕ್ಕುಗಳ ರಕ್ಷಕ: ಬಾಬಾಸಾಹೇಬ್ ಡಾ.ಅಂಬೇಡ್ಕರ್

ಇತ್ತೀಚಿನ ಸುದ್ದಿ