ಬೌದ್ಧ ಧರ್ಮದ ಅವಹೇಳನ ಆರೋಪ: ಸಚಿವ ಸುಧಾಕರ್ ವಿರುದ್ಧ ಪ್ರತಿಭಟನೆ
ಚಿಕ್ಕಬಳ್ಳಾಪುರ: ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್ ಬೌದ್ಧ ಧರ್ಮವನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ದಲಿತ ಸಂಘಟನೆಗಳ ಒಕ್ಕೂಟದ ಮುಖಂಡರು ಹಾಗೂ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.
ಎಂ.ಜಿ.ರಸ್ತೆಯ ಅಂಬೇಡ್ಕರ್ ವಸತಿ ನಿಲಯದ ಆವರಣದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಮುಖಂಡರು, ಎಂ.ಬಿ.ರಸ್ತೆ ಗಂಗಮ್ಮನಗುಡಿ ಮಾರ್ಗವಾಗಿ ಬಿ.ಬಿ. ರಸ್ತೆಯಲ್ಲಿ ಮೆರವಣಿಗೆ ನಡೆಸಿ, ಸಚಿವ ಸುಧಾಕರ್ ವಿರುದ್ಧ ಘೋಷಣೆ ಕೂಗಿದರು.
ಬೌದ್ಧ ಧರ್ಮದ ಬಗ್ಗೆ ಅವಹೇಳನಾಕಾರಿಯಾಗಿ ಮಾತನಾಡಿರುವ ಸುಧಾಕರ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಭಾರತವನ್ನು ಬುದ್ಧನ ನಾಡು ಎಂದು ಜಗತ್ತು ಗುರುತಿಸುತ್ತಿದೆ. ಅಂತಹ ಬೌದ್ಧ ಧರ್ಮದ ಬಗ್ಗೆ ಸುಧಾಕರ್ ಅವಹೇಳನಾಕಾರಿಯಾಗಿ ಮಾತನಾಡಿದ್ದಾರೆ. ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಬಿಜೆಪಿಗೆ ಹೇಗೆ ಮತ ಗಳಿಸಬೇಕು ಎಂದು ಗೊತ್ತಿದೆ: ರಾಕೇಶ್ ಟೀಕಾಯತ್ ಹೇಳಿಕೆ
ಮಲ್ಪೆ ಸಮುದ್ರದಲ್ಲಿ ಬಲೆಗೆ ಬಿದ್ದ ಗರಗಸ ಮೀನು !
ರಾಜೀವ್ ಹಂತಕ ಜಾಮೀನಿನಲ್ಲಿ ಬಿಡುಗಡೆಯಾಗುತ್ತಿದ್ದಂತೆಯೇ ಮದುವೆಗೆ ಸಿದ್ಧತೆ!