ಸಿಎಂ ಇಬ್ರಾಹಿಂಗೆ ದುರಾಸೆ ಹೆಚ್ಚಾಗಿ ಕಾಂಗ್ರೆಸ್ ಪಕ್ಷ ಬಿಟ್ಟು ಹೋಗಿದ್ದಾರೆ: ಮಾಜಿ ಸಿಎಂ ಸಿದ್ದರಾಮಯ್ಯ - Mahanayaka

ಸಿಎಂ ಇಬ್ರಾಹಿಂಗೆ ದುರಾಸೆ ಹೆಚ್ಚಾಗಿ ಕಾಂಗ್ರೆಸ್ ಪಕ್ಷ ಬಿಟ್ಟು ಹೋಗಿದ್ದಾರೆ: ಮಾಜಿ ಸಿಎಂ ಸಿದ್ದರಾಮಯ್ಯ

siddaramaiha
15/03/2022

ಬೆಂಗಳೂರು: ಸಿ.ಎಂ. ಇಬ್ರಾಹಿಂಗೆ ಆದರೆ ದುರಾಸೆ ಹೆಚ್ಚಾಗಿ ಕಾಂಗ್ರೆಸ್ ಪಕ್ಷ ಬಿಟ್ಟು ಹೋಗಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಇಬ್ರಾಹಿಂ ಅವರಿಗೆ ಕಾಂಗ್ರೆಸ್ ಪಕ್ಷ ಎಲ್ಲವನ್ನೂ ಕೊಟ್ಟಿದೆ. ಭದ್ರಾವತಿಯಲ್ಲಿ ಹಾಲಿ ಶಾಸಕ ಸಂಗಮೇಶ್‌ಗೆ ಟಿಕೆಟ್ ತಪ್ಪಿಸಿ ಇಬ್ರಾಹಿಂಗೆ ಕೊಡಲಾಗಿತ್ತು. ಆದರೆ ಅಲ್ಲಿ ಸೋತ ಬಳಿಕ ಆತನನ್ನು ವಿಧಾನ ಪರಿಷತ್ ಸದಸ್ಯನನ್ನಾಗಿ ಮಾಡಲಾಯಿತು. ಯೋಜನಾ ಆಯೋಗದ ಉಪಾಧ್ಯಕ್ಷನ್ನಾಗಿ ಮಾಡಲಾಗಿತ್ತು. ಆದರೂ ಸಹ ಪಕ್ಷ ಬಿಟ್ಟು ಹೋಗಿದ್ದಾನೆ ಎಂದು ಆಕ್ರೋಶ ಅವರು ವ್ಯಕ್ತಪಡಿಸಿದರು.

ಇನ್ನು ಶಾಸಕ ಜಿ.ಟಿ. ದೇವೇಗೌಡ ಅವರು ತನ್ನ ಮಗನಿಗೆ ಕಾಂಗ್ರೆಸ್ ಟಿಕೆಟ್ ಖಾತ್ರಿ ಮಾಡುವುದಾದರೆ ಪಕ್ಷಕ್ಕೆ ಸೇರುವುದಾಗಿ ಹೇಳಿದ್ದು, ಈ ಬಗ್ಗೆ ನನ್ನ ಜೊತೆಯೂ ಅವರು ಮಾತನಾಡಿದ್ದಾರೆ. ಆದರೆ ಈ ಬಗ್ಗೆ ಹೈಕಮಾಂಡ್ ಜೊತೆ ಇನ್ನೂ ಮಾತನಾಡಿಲ್ಲ ಎಂದರು.

ಇತ್ತೀಚಿನ ಸುದ್ದಿ