ರಸ್ತೆ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು
15/03/2022
ಬೆಂಗಳೂರು ನಗರದ ಎಂ.ಎಸ್. ಪಾಳ್ಯದ ಮುನೇಶ್ವರ ಲೇಔಟ್‌ನಲ್ಲಿ ನಿನ್ನೆ ರಾತ್ರಿ ಬೈಕ್ ಸವಾರ ರಸ್ತೆ ಗುಂಡಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.
ಹಾವೇರಿ ಮೂಲದ ಅಶ್ವಿನ್ ಮೃತ ಯುವಕ. ನಿನ್ನೆ ರಾತ್ರಿ ಜಲಮಂಡಳಿ ಅಗೆದಿದ್ದ ರಸ್ತೆ ಗುಂಡಿಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಆ್ಯಂಬುಲೆನ್ಸ್ ಸರಿಯಾದ ಸಮಯಕ್ಕೆ ಬಾರದ ಹಿನ್ನಲೆಯಲ್ಲಿ ಸ್ಥಳೀಯರೇ ಕಾರಿನಲ್ಲಿ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿದ್ದಾರೆ ಆದರೆ ಬೆಳಗಿನ ಜಾವ ಚಿಕಿತ್ಸೆ ಫಲಕಾರಿಯಾಗದೆ ಅಶ್ವಿನ್ ಮೃತಪಟ್ಟಿದ್ದಾರೆ.
ಘಟನೆಗೆ ಬಿಬಿಎಂಪಿ, ಜಲಮಂಡಳಿಯ ನಿರ್ಲಕ್ಷ್ಯವೇ ಕಾರಣ ಅಂತ ಆಕ್ರೋಶ ಕೇಳಿಬಂದಿದೆ. ತಾಯಿಗೆ ಒಬ್ಬನೇ ಮಗ ಅಶ್ವಿನ್ , ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಅಲ್ಲದೆ ಅಪಘಾತದ ಬಳಿಕ ಆ್ಯಂಬುಲೆನ್ಸ್ ಗೆ ಕರೆ ಮಾಡಿ ಒಂದು ಗಂಟೆಯಾದರೂ ಸ್ಥಳಕ್ಕೆ ಬರಲಿಲ್ಲ ಎಂದು ಸ್ಥಳೀಯರು ಆರೋಪಿದ್ದಾರೆ.