ಫೇಸ್ ಬುಕ್, ಟ್ವಿಟ್ಟರ್ ಸಾಮಾಜಿಕ ಜಾಲತಾಣಗಳ ಬಗ್ಗೆ ಸೋನಿಯಾ ಗಾಂಧಿ ಗಂಭೀರ ಆರೋಪ
ನವದೆಹಲಿ: ಯಾರೇ ಅಧಿಕಾರದಲ್ಲಿದ್ದರೂ ನಮ್ಮ ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ಸಾಮರಸ್ಯವನ್ನು ನಾವು ರಕ್ಷಿಸಬೇಕಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ.
ಲೋಕಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಪ್ರಜಾಪ್ರಭುತ್ವವನ್ನು ಹ್ಯಾಕ್ ಮಾಡಲು ಸಾಮಾಜಿಕ ಮಾಧ್ಯಮಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ಫೇಸ್ ಬುಕ್ ಮತ್ತು ಟ್ವಿಟರ್ ನಂತಹ ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ದೇಶದಲ್ಲಿ ರಾಜಕೀಯ ಕಾರ್ಯಕ್ಕೆ ಬಳಸಲಾಗುತ್ತಿದೆ ಎಂದರು.
ಜಾಗತಿಕ ಸೋಶಿಯಲ್ ಮೀಡಿಯಾ ಕಂಪೆನಿಗಳು ಎಲ್ಲಾ ಪಕ್ಷಗಳಿಗೆ ಸರಿಯಾದ ವೇದಿಕೆ ಒದಗಿಸುತ್ತಿಲ್ಲ. ಈ ವಿಚಾರ ಪದೇ ಪದೇ ಸಾರ್ವಜನಿಕರ ಗಮನಕ್ಕೆ ಬರುತ್ತಿದೆ. ಫೇಸ್ ಬುಕ್ ಮೂಲಕ ಸಾಮಾಜಿಕ ಸಾಮರಸ್ಯವನ್ನು ಕದಡುತ್ತಿದೆ ಇದು ನಮ್ಮ ಪ್ರಜಾಪ್ರಭುತ್ವಕ್ಕೆ ಅಪಾಯಕಾರಿಯಾಗಿದೆ ಎಂದು ಹೇಳಿದರು.
ಭಾವನಾತ್ಮಕ ಹೇಳಿಕೆಗಳಿಂದ ಯುವ ಮತ್ತು ಹಿರಿಯ ಮನಸ್ಸುಗಳಲ್ಲಿ ದ್ವೇಷ ತುಂಬಲಾಗುತ್ತಿದೆ. ಇಂತಹ ಪ್ರಾಕ್ಸಿ ಜಾಹೀರಾತು ಕಂಪೆನಿಗಳು ಅದರ ಬಗ್ಗೆ ತಿಳಿದಿವೆ. ಅಷ್ಟೇ ಅಲ್ಲದೆ ಅದರಿಂದ ಲಾಭ ಪಡೆಯುತ್ತಿವೆ ಎಂದು ಅವರು ಆರೋಪಿಸಿದರು.
ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ರಾಜಕೀಯದಲ್ಲಿ, ಫೇಸ್‍ಬುಕ್ ಮತ್ತು ಇತರ ಸಾಮಾಜಿಕ ಮಾಧ್ಯಮ ವ್ಯವಸ್ಥಿತ ಪ್ರಭಾವ ಮತ್ತು ಹಸ್ತಕ್ಷೇಪವನ್ನು ಕೊನೆಗೊಳಿಸಬೇಕು. ಇದು ಪಕ್ಷಗಳು ಮತ್ತು ರಾಜಕೀಯವನ್ನು ಮೀರಿದೆ. ಯಾರೇ ಅಧಿಕಾರದಲ್ಲಿದ್ದರೂ ನಮ್ಮ ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ಸಾಮರಸ್ಯವನ್ನು ನಾವು ರಕ್ಷಿಸಬೇಕಾಗಿದೆ ಎಂದು ಅವರು ಸರ್ಕಾರವನ್ನು ಒತ್ತಾಯಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಹಿಜಾಬ್ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರಿಗೆ ಕಾಲೇಜು ಪ್ರವೇಶ ನಿರಾಕರಣೆ
ಮುಧೋಳ ಫೈಲ್ಸ್ !: ಜೋಡಿ ಕೊಲೆ ಪ್ರಕರಣ ಮಾಸುವ ಮೊದಲೇ ದಲಿತ ಯುವಕನ ಮೇಲೆ ಮಾರಣಾಂತಿ ಹಲ್ಲೆ!
ಚಿನ್ನ ಖರೀದಿಗೆ ಮುಗಿಬಿದ್ದ ಜನ: ಮತ್ತಷ್ಟು ಇಳಿಕೆಯಾಯ್ತು ಗೋಲ್ಡ್, ಸಿಲ್ವರ್ ರೇಟ್
ಕನ್ನಡ ಚಿತ್ರರಂಗ ನಟ, ನಿರ್ದೇಶಕ, ನಿರ್ಮಾಪಕ ಎಸ್.ನಾರಾಯಣ್ ರಾಜಕೀಯಕ್ಕೆ ಎಂಟ್ರಿ