ಮೂಲ್ಕಿ ಬಸ್ ನಿಲ್ದಾಣದಲ್ಲಿ ಕಾರ್ಕಳದ ವ್ಯಕ್ತಿಯ ಶವ ಪತ್ತೆ - Mahanayaka
10:21 PM Wednesday 12 - March 2025

ಮೂಲ್ಕಿ ಬಸ್ ನಿಲ್ದಾಣದಲ್ಲಿ ಕಾರ್ಕಳದ ವ್ಯಕ್ತಿಯ ಶವ ಪತ್ತೆ

death
20/03/2022

ಮಂಗಳೂರು: ಮೂಲ್ಕಿ ಬಸ್ ನಿಲ್ದಾಣದಲ್ಲಿ ಭಾನುವಾರ ಬೆಳಗ್ಗೆ ವ್ಯಕ್ತಿಯೋರ್ವನ ಶವ ಮುಖ ಸಂಪೂರ್ಣ ನಜ್ಜುಗುಜ್ಜಾಗಿರುವ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ವರದಿಯಗಿದೆ.

ಕಾರ್ಕಳದ ಮುಂಡ್ಕೂರಿನ ಕಟ್ಟಡ ನಿರ್ಮಾಣ ಕಾರ್ಮಿಕ ಹರೀಶ್ ಸಾಲ್ಯಾನ್ (37) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಪ್ರಾಥಮಿಕ ತನಿಖೆ ವೇಳೆ ಮುಖಕ್ಕೆ ಕಲ್ಲಿನಿಂದ ಜಜ್ಜಿರುವುದು ಗೊತ್ತಾಗಿದ್ದು, ಇದೊಂದು ಕೊಲೆ ಎಂಬ ಶಂಕೆ ವ್ಯಕ್ತವಾಗಿದೆ.

ಈ ವ್ಯಕ್ತಿಯು ಶನಿವಾರ ರಾತ್ರಿ ಬಪ್ಪನಾಡು ದೇವಸ್ಥಾನ ಭೇಟಿಗೆಂದು ಆಗಮಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ವ್ಯಕ್ತಿಯ ಕಿಸೆಯಲ್ಲಿದ್ದ ಮೊಬೈಲ್ ಮತ್ತು ಪರ್ಸ್‌ನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಿದ್ದಾರೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪಠ್ಯ ಪುಸ್ತಕದಲ್ಲಿ ಭಗವದ್ಗೀತೆ ಸೇರಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ: ಸಚಿವ ಮಾಧುಸ್ವಾಮಿ

ಶಾಲೆಯಲ್ಲಿ ಭಗವದ್ಗೀತೆ ಕಲಿಸುವುದನ್ನು ಸ್ವಾಗತಿಸುತ್ತೇನೆ: ವಿಪಕ್ಷ ನಾಯಕ ಸಿದ್ದರಾಮಯ್ಯ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ ನಿರ್ಧಾರ ಕೊರೊನಾ ಮಹಾಮಾರಿಗಿಂತಲೂ ಮಾರಕ: ತನ್ವೀರ್‌ ಸೇಠ್‌

ಯುಪಿ ಸಿಎಂ ಆಗಿ ಮಾರ್ಚ್ 25ರಂದು ಯೋಗಿ ಪ್ರಮಾಣ ವಚನ

ಇತ್ತೀಚಿನ ಸುದ್ದಿ