ಮಾತು ಬಾರದ, ಕಿವಿಯೂ ಕೇಳದ ಯುವಕನ ವರಿಸಿದ ಪದವೀಧರ ಯುವತಿ - Mahanayaka
6:40 AM Wednesday 5 - February 2025

ಮಾತು ಬಾರದ, ಕಿವಿಯೂ ಕೇಳದ ಯುವಕನ ವರಿಸಿದ ಪದವೀಧರ ಯುವತಿ

dampathya
22/03/2022

ಗದಗ: ಪಟ್ಟಣದಲ್ಲಿ ಸೋಮವಾರ ಮಾತು ಬಾರದ, ಕಿವಿಯೂ ಕೇಳದ ಯುವಕನನ್ನು ಪದವೀಧರ ಯುವತಿ ಮದುವೆಯಾಗಿದ್ದಾರೆ.

ನರಗುಂದ ಪಟ್ಟಣದ ದಂಡಾಪುರ ಬಡಾವಣೆಯ ಲಾಲಮಹಮ್ಮದ್, ಆರೀಫಾಭಾನು ದಂಪತಿ ಪುತ್ರ ಮಹಮ್ಮದ್ ಸಾಧಿಕ್ ಹಾಗೂ ಗದುಗಿನ ಗಂಗಿಮಡಿ ಬಡಾವಣೆಯ ಮಲೀಕಸಾಬ್-ಮಮತಾಜ್‌ಬೇಗಂ ಪಲ್ಲೇದ ದಂಪತಿ ಪುತ್ರಿ ಸುಮಯ್ಯಾ ರವಿವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ನರಗುಂದದ ನಿವಾಸಿ ವರ ಮಹಮ್ಮದ್ ಸಾಧಿಕ್ ನರೇಗಲ್‌ನ ಶ್ರೀಅನ್ನದಾನೇಶ್ವರ ಕಿವುಡ ಮತ್ತು ಮೂಕರ ಶಾಲೆಯಲ್ಲಿ ಪ್ರಾಥಮಿಕ, ಪ್ರೌಢ ಶಿಕ್ಷಣವನ್ನು ಪೂರೈಸಿ, ನಂತರ ಮೈಸೂರಿನ ಜೆಎಸ್‍ಎಸ್ ಕಾಲೇಜಿಲ್ಲಿ ಪಿಯುಸಿ ಓದಿ ಆಟೋ ಇಲೆಕ್ಟ್ರೀಷಿಯನ್ ಆಗಿ ಸ್ವಂತ ಉದ್ಯೋಗದಲ್ಲಿದ್ದಾರೆ.

ವಧು ಸುಮಯ್ಯಾ ನರಗುಂದದ ಶಾರದಾಂಬಾ ಶಾಲೆಯಲ್ಲಿ10ನೇ ತರಗತಿ ಓದಿ, ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎರಡು ವರ್ಷ ಕಲಾ ಶಿಕ್ಷಣ ಪಡೆದಿದ್ದು, ಬಳಿಕ ಸಿದ್ದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆದಿದ್ದಾರೆ. ಇವರು ಮದುವೆಯಾಗಿರುವ ಸುದ್ದಿ ಇದೀಗ ಎಲ್ಲೆಡೆ ವೈರಲ್ ಆಗಿದೆ.

ಇತ್ತೀಚಿನ ಸುದ್ದಿ