ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ: ಉ.ಪ್ರ. ನಿಯೋಜಿತ ಸಿಎಂ ಯೋಗಿ ಆದಿತ್ಯನಾಥ್ಗೆ ನೋಟಿಸ್ ಜಾರಿ
ಲಕ್ನೋ: 4 ವರ್ಷಗಳ ಹಿಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗುವ ಹೇಳಿಕೆ ನೀಡಿರುವ ಆರೋಪದಡಿ ಉತ್ತರ ಪ್ರದೇಶದ ನಿಯೋಜಿತ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಮೌ ಜಿಲ್ಲಾ ನ್ಯಾಯಾಲಯ ಜಾರಿ ಮಾಡಿದೆ. ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಏ.26ಕ್ಕೆ ಕೋರ್ಟ್ ಮುಂದೂಡಿದೆ.
2018ರ ನ. 8ರಂದು ರಾಜಸ್ಥಾನದ ಅಲ್ವಾರ ಜಿಲ್ಲೆಯ ಮಳಖೇಡದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹನುಮಾನ್ ದೇವರ ಕುರಿತಂತೆ ಯೋಗಿ ಆದಿತ್ಯನಾಥ್ ಮಾತನಾಡಿದ್ದರು. ಹನುಮಾನ್ ಅರಣ್ಯವಾಸಿ, ವಂಚಿತ ಮತ್ತು ದಲಿತ ಎಂದು ಯೋಗಿ ಹೇಳಿದ್ದರು. ಅಲ್ಲದೇ, ಬಜರಂಗಬಲಿ ಹನುಮಾನ್ ಉತ್ತರದಿಂದ ದಕ್ಷಿಣಕ್ಕೆ ಮತ್ತು ಪೂರ್ವದಿಂದ ಪಶ್ಚಿಮಕ್ಕೆ ಎಲ್ಲ ಭಾರತೀಯ ಸಮುದಾಯಗಳನ್ನು ಒಟ್ಟಿಗೆ ಸೇರಿಸಿದ ಕೆಲಸ ಮಾಡಿದ್ದರು ಎಂದು ಅವರು ಹೇಳಿದ್ದರು.
ಯೋಗಿ ಆದಿತ್ಯನಾಥ್ ಅವರ ‘ಹನುಮಾನ್ ವಂಚಿತ ಹಾಗೂ ದಲಿತ’ ಎಂಬ ಹೇಳಿಕೆಯು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಕಿಶೋರ್ ಶರ್ಮಾ ಎಂಬವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಮೌ ಜಿಲ್ಲಾ ನ್ಯಾಯಾಲಯವು ಯೋಗಿ ಅವರಿಗೆ ನೋಟಿಸ್ ಜಾರಿ ಮಾಡಿದೆ. ಈ ಮೊದಲು ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಮುಂದೆ ಕಿಶೋರ್ ಶರ್ಮಾ ದೂರು ದಾಖಲಿಸಿದ್ದರು.
ಆದರೆ, ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ವಜಾಗೊಳಿಸಿದ್ದರು. ಹೀಗಾಗಿ ತಮ್ಮ ಅರ್ಜಿ ವಜಾ ಮಾಡಿದ್ದನ್ನು ಪ್ರಶ್ನಿಸಿ ಕಿಶೋರ್ ಶರ್ಮಾ ನ್ಯಾಯಾಲಯದ ಮೊರೆ ಹೋಗಿದ್ದರು. ಇದೀಗ ಮೌ ಜಿಲ್ಲಾ ನ್ಯಾಯಾಲಯವು ಯೋಗಿ ಆದಿತ್ಯನಾಥ್ ಅವರಿಗೆ ನೋಸ್ ಜಾರಿ ಮಾಡಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಟಿಂಬರ್ ಗೋದಾಮಿನಲ್ಲಿ ಭಾರೀ ಅಗ್ನಿ ಅನಾಹುತ: 11 ಮಂದಿ ಸಜೀವ ದಹನ
ಉತ್ತರ ಪ್ರದೇಶ: ಗುಂಡಿಟ್ಟು ಬಿಜೆಪಿ ನಾಯಕನ ಹತ್ಯೆ
ವಿಶ್ವದ ನಂಬರ್ 1 ಟೆನಿಸ್ ಆಟಗಾರ್ತಿ ಆಶ್ಲೆ ಬಾರ್ಟಿ ನಿವೃತ್ತಿ
‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಮೂಲಕ ಜನರನ್ನು ಸಂಘ ಪರಿವಾರ ಬೇರ್ಪಡಿಸುತ್ತಿದೆ: ಬೃಂದಾ ಕಾರಟ್ ಆರೋಪ