ಕೋವಿಡ್-19 ಲಸಿಕೆ ಕಡ್ಡಾಯಗೊಳಿಸಿಲ್ಲ: ಸುಪ್ರೀಂ ಕೋಟ್‌ಗೆ ಕೇಂದ್ರ ಸರ್ಕಾರ ಸ್ಪಷ್ಟನೆ - Mahanayaka
11:13 PM Wednesday 11 - December 2024

ಕೋವಿಡ್-19 ಲಸಿಕೆ ಕಡ್ಡಾಯಗೊಳಿಸಿಲ್ಲ: ಸುಪ್ರೀಂ ಕೋಟ್‌ಗೆ ಕೇಂದ್ರ ಸರ್ಕಾರ ಸ್ಪಷ್ಟನೆ

suprim court
23/03/2022

ನವದೆಹಲಿ: ಕೋವಿಡ್-19 ಲಸಿಕೆಗಳನ್ನು ಕಡ್ಡಾಯಗೊಳಿಸಿಲ್ಲ. ಆದರೆ ಶೇ.100ರಷ್ಟು ಲಸಿಕೆ ನೀಡಬೇಕೆಂದು ಹೇಳಲಾಗಿದೆ ಎಂದು ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಶೇ.100ರಷ್ಟು ಜನರು ಕೋವಿಡ್‌ ಲಸಿಕೆಯನ್ನು ಪಡೆಯಲೇಬೇಕು ಎಂದು ಕೇಂದ್ರ ಸರ್ಕಾರವು ಆದೇಶ ನೀಡಿದೆ ಎಂದು ತಮಿಳುನಾಡು ಹೆಚ್ಚುವರಿ ಅಡ್ವೊಕೇಟ್ ಜನರಲ್ ಅಮಿತ್ ಆನಂದ್ ತಿವಾರಿ, ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರ ರಾವ್ ಮತ್ತು ಬಿ.ಆರ್.ಗವಾಯಿ ಅವರ ಪೀಠಕ್ಕೆ ತಿಳಿಸಿದ್ದರು. ಕೇಂದ್ರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಕೋವಿಡ್-19 ಲಸಿಕೆಗಳನ್ನು ಕಡ್ಡಾಯಗೊಳಿಸಿಲ್ಲ. ಆದರೆ ಶೇ.100ರಷ್ಟು ಲಸಿಕೆ ನೀಡಬೇಕೆಂದು ಹೇಳಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಕೋವಿಡ್‌ ಲಸಿಕೆಯನ್ನು ಶೇ.100ರಷ್ಟು ನೀಡಬೇಕು ಎಂದು ಕೇಂದ್ರ ಸರ್ಕಾರ ಹೇಳಿರುವುದರಿಂದ ಕಡ್ಡಾಯಗೊಳಿಸಿದ್ದೇವೆ ಎಂದು ತಮಿಳುನಾಡು ತಿಳಿಸಿದೆ. ಶೇ.100ರಷ್ಟು ಲಸಿಕೀಕರಣ ಆಗಬೇಕು ಎಂಬ ನಿಲುವನ್ನು ಕೇಂದ್ರ ವ್ಯಕ್ತಪಡಿಸಿದೆ. ಆದರೆ ಇದು ಆದೇಶವಲ್ಲ ಎಂದು ಮೆಹ್ತಾ ಮಾಹಿತಿ ನೀಡಿದ್ದಾರೆ.

ಜನಸಂಖ್ಯೆಯಲ್ಲಿ ಗಂಭೀರ ರೋಗವನ್ನು ತಡೆಗಟ್ಟಲು ಕೋವಿಡ್ ವಿರುದ್ಧ ವ್ಯಾಕ್ಸಿನೇಷನ್ ಅತ್ಯಗತ್ಯ ಎಂಬ ಕಾರಣಕ್ಕಾಗಿ ತಮಿಳುನಾಡು ಲಸಿಕೆ ಆದೇಶವನ್ನು ಹೊರತಂದಿದೆ ಎಂದು ಸುಪ್ರೀಂ ಕೋರ್ಟ್‌ಗೆ ತಿವಾರಿ ವರದಿ ಸಲ್ಲಿಸಿದ್ದಾರೆ.

ನಾನು ತಜ್ಞರ ವರದಿಗಳನ್ನು ಸಲ್ಲಿಸಿದ್ದೇನೆ. ಲಸಿಕೆ ಪಡೆಯದ ಜನರು ವೈರಸ್‌ಗಳ ರೂಪಾಂತರಕ್ಕೆ ಕಾರಣರಾಗಿದ್ದಾರೆ. ಇತರರಿಗೆ ಸೋಂಕು ತಗುಲುವ ಅಥವಾ ಹರಡುವ ಸಾಧ್ಯತೆಯಿದ್ದರೆ ಅಂತಹ ಆದೇಶಗಳನ್ನು ನೀಡುವ ಅಧಿಕಾರವನ್ನು ರಾಜ್ಯ ಸರ್ಕಾರ ಹೊಂದಿದೆ. ಲಸಿಕೆಗಳು ಗಂಭೀರ ರೋಗವನ್ನು ತಡೆಗಟ್ಟುತ್ತವೆ ಎಂದು ತೋರಿಸಲು ಸಾಕಷ್ಟು ಪುರಾವೆಗಳಿವೆ ಎಂದು ತಿವಾರಿ ತಿಳಿಸಿದ್ದಾರೆ.

ರೋಗ ಹರಡುವುದನ್ನು ತಡೆಯಲು ಸಾರ್ವಜನಿಕರು ಲಸಿಕೆ ಹಾಕಿಸಿಕೊಳ್ಳುವ ನಿಟ್ಟಿನಲ್ಲಿ ಈ ನಿಬಂಧನೆಗಳನ್ನು ವಿನ್ಯಾಸಗೊಳಿಸಲಾಗಿದೆ. ಪ್ರತಿಯೊಬ್ಬರ ಸುರಕ್ಷತೆಯನ್ನು ಖಾತ್ರಿ ಪಡಿಸುವ ನಿಟ್ಟಿನಲ್ಲಿ ಈ ಕ್ರಮವಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮುಸ್ಲಿಂ ಯುವಕನ ಹೆಸರಿನಲ್ಲಿ ಬಿಜೆಪಿ ಎಂಎಲ್ಸಿಗೆ ಜೀವ ಬೆದರಿಕೆ: ಆರೋಪಿಯ ಬಂಧನ

ದೇವಸ್ಥಾನದ ವಠಾರದಲ್ಲಿ ಯಾರು ಬ್ಯಾನರ್ ಹಾಕಿದ್ದಾರೆ ಎಂದು ಗೊತ್ತಿಲ್ಲ | ಬಪ್ಪನಾಡು ದೇವಸ್ಥಾನ ಮುಕ್ತೇಸರರು ಹೇಳಿದ್ದೇನು?

ಇಲಾಖೆಯ ಪೂರ್ವಾನುಮತಿ ಇಲ್ಲದೆ ವಿದೇಶ ಪ್ರಯಾಣ: ಇನ್‌ಸ್ಪೆಕ್ಟರ್‌ ಅಮಾನತು

ದಲಿತ ಯುವಕನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ: ಆ್ಯಸಿಡ್​​ನಿಂದ ಹಣೆ ಮೇಲೆ ತ್ರಿಶೂಲ ಬಿಡಿಸಿ, ಚಿತ್ರಹಿಂಸೆ

ಇತ್ತೀಚಿನ ಸುದ್ದಿ