ವಿಷಪೂರಿತ ಮಿಠಾಯಿ ಸೇವಿಸಿ ನಾಲ್ವರು ಮಕ್ಕಳ ದಾರುಣ ಸಾವು
ಉತ್ತರ ಪ್ರದೇಶ ಖುಷಿ ನಗರದಲ್ಲಿ ವಿಷಪೂರಿತ ಮಿಠಾಯಿ ತಿಂದು ಇಬ್ಬರು ಬಾಲಕಿಯರು ಮತ್ತು ಇಬ್ಬರು ಬಾಲಕರು ಸೇರಿದಂತೆ ನಾಲ್ವರು ಮಕ್ಕಳು ಸಾವನ್ನಪ್ಪಿದ ಘಟನೆ ನಡೆದಿದೆ.
ಮಕ್ಕಳ ಮನೆಯ ಮುಂದೆ ಯಾರೋ ಮಿಠಾಯಿಗಳನ್ನು ಎಸೆದು ಹೋಗಿದ್ದು, ಮಕ್ಕಳು ಇದನ್ನು ತಿಂದು ದುರಂತ ಅಂತ್ಯ ಕಂಡಿದ್ದಾರೆ. ಮೃತರ ಪೈಕಿ ಮೂವರು ಮಕ್ಕಳು ಒಂದೇ ಕುಟುಂಬದವರಾಗಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಿಯೋಜಿತ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಕ್ಕಳ ಕುಟುಂಬಗಳಿಗೆ ನೆರವು ನೀಡಲು ಸೂಚಿಸಿದ್ದಾರೆ.
ಮಕ್ಕಳನ್ನು ಕಳೆದುಕೊಂಡಿರುವ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಮಕ್ಕಳು ಮಿಠಾಯಿ ತಿಂದು ಅಸ್ವಸ್ಥರಾದ ವೇಳೆ ತಕ್ಷಣವೇ ಆಂಬುಲೆನ್ಸ್ ಗೆ ಕರೆ ಮಾಡಲಾಗಿತ್ತು. ಆದರೆ, ಆಂಬುಲೆನ್ಸ್ ತಡವಾಗಿ ಬಂದಿದ್ದು, ಮಕ್ಕಳನ್ನು ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ದಾಖಲಿಸಲು ಸಾಧ್ಯವಾಗಿಲ್ಲ ಎಂದು ಮಕ್ಕಳ ಪೋಷಕರು ಕಣ್ಣೀರು ಹಾಕಿದ್ದಾರೆ.
ಇನ್ನೂ ವಿಷಪೂರಿತ ಮಿಠಾಯಿ ಯಾರು ಇಲ್ಲಿ ತಂದು ಹಾಕಿದ್ದರು, ಅವರ ಉದ್ದೇಶ ಏನು ಎನ್ನುವುದು ತಿಳಿದು ಬಂದಿಲ್ಲ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಹಾಸನದ ‘ರಾಜೀವ್ ಆಸ್ಪತ್ರೆ’ಯಲ್ಲಿ ಮಾರ್ಚ್ 25ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ
ಕೋವಿಡ್-19 ಲಸಿಕೆ ಕಡ್ಡಾಯಗೊಳಿಸಿಲ್ಲ: ಸುಪ್ರೀಂ ಕೋಟ್‌ಗೆ ಕೇಂದ್ರ ಸರ್ಕಾರ ಸ್ಪಷ್ಟನೆ
ದಲಿತ ಯುವಕನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ: ಆ್ಯಸಿಡ್ನಿಂದ ಹಣೆ ಮೇಲೆ ತ್ರಿಶೂಲ ಬಿಡಿಸಿ, ಚಿತ್ರಹಿಂಸೆ
ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ: ಉ.ಪ್ರ. ನಿಯೋಜಿತ ಸಿಎಂ ಯೋಗಿ ಆದಿತ್ಯನಾಥ್ಗೆ ನೋಟಿಸ್ ಜಾರಿ