ಬಾಲಿವುಡ್ ‘ಗಲ್ಲಿ ಬಾಯ್’ ಖ್ಯಾತಿಯ ರಾಪರ್ ಧರ್ಮೇಶ್ ಪರ್ಮಾರ್ ನಿಧನ
ಮುಂಬೈ: ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್ ಅಭಿನಯದ ‘ಗಲ್ಲಿ ಬಾಯ್’ ಚಿತ್ರದ ರಾಪರ್ ಎಂಸಿ ಟಾಡ್ ಫೋಡ್ ಅಕಾ ಧರ್ಮೇಶ್ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಜೋಯಾ ಅಖ್ತರ್ ನಿರ್ದೇಶನದ ‘ಗಲ್ಲಿ ಬಾಯ್’ ಸಿನಿಮಾದ ಹಾಡಿನ ಮೂಲಕ ಖ್ಯಾತರಾಗಿದ್ದ ರಾಪರ್ ಧರ್ಮೇಶ್ ಪರ್ಮಾರ್ (24) ನಾಲ್ಕು ತಿಂಗಳ ಹಿಂದೆ ತನ್ನ ಸ್ನೇಹಿತರೊಂದಿಗೆ ಲಡಾಖ್‍ನಲ್ಲಿದ್ದಾಗ ಮೊದಲ ಹೃದಯಾಘಾತವಾಗಿತ್ತು. ಹೀಗಾಗಿ ಅವರು ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.
ರಾಪರ್ ಧರ್ಮೇಶ್ ಪರ್ಮಾರ್ ನಿಧನಕ್ಕೆ ಬಾಲಿವುಡ್ ಕಂಬಿನಿ ಮೀಡಿದಿದೆ. ಇವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಬಾಲಿವುಡ್‍ನ ತಾರೆಯರಾದ ಜೋಯಾ ಅಖ್ತರ್, ರಣವೀರ್ ಸಿಂಗ್, ಸಿದ್ಧಾಂತ್ ಚತುರ್ವೇದಿ ಸೇರಿದಂತೆ ಅನೇಕ ಕಲಾವಿದರು ಅಗಲಿದ ಗಾಯಕನಿಗೆ ಸಂತಾಪ ಸೂಚಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಪುಟಿನ್ ಪ್ರಮುಖ ಸಲಹೆಗಾರ ಅನಾಟೊಲಿ ಚುಬೈಸ್ ರಾಜೀನಾಮೆ
ಮಹಿಳಾ ಅಧಿಕಾರಿಗೆ ಲೈಂಗಿಕ ಕಿರುಕುಳ: ಬಿಬಿಎಂಪಿ ಉಪ ಆಯುಕ್ತರ ವಿರುದ್ಧ ಪ್ರಕರಣ ದಾಖಲು