ಅರವಿಂದ್ ಕೇಜ್ರಿವಾಲ್ ‘ಅರ್ಬನ್ ನಕ್ಸಲ್’: ಬಿಜೆಪಿ ಮುಖಂಡ ಅಮಿತ್ ಮಾಳವಿಯಾ
ನವದೆಹಲಿ: ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಗೆ ತೆರಿಗೆ ವಿನಾಯಿತಿ ನೀಡುವ ವಿಚಾರದಲ್ಲಿ ಕೇಜ್ರಿವಾಲ್ ಅವರನ್ನು ಬಿಜೆಪಿ ಮುಖಂಡ ಅಮಿತ್ ಮಾಳವಿಯಾ ‘ಅರ್ಬನ್ ನಕ್ಸಲ್’ ಎಂದು ಟೀಕಿಸಿದ್ದಾರೆ.
ಗುರುವಾರ ವಿಧಾನಸಭೆಯಲ್ಲಿ ಕಾಶ್ಮೀರ್ ಫೈಲ್ಸ್ ಸಿನಿಮಾ ಬಗ್ಗೆ ಪ್ರಸ್ತಾಪಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಸುಳ್ಳಿನ ಸಿನಿಮಾಗಳ ಪೋಸ್ಟರ್ ಸಹ ಹಾಕುವುದಿಲ್ಲ ಎಂದು ಹೇಳಿದ್ದರು.
ಬಿಜೆಪಿಗರು ದೆಹಲಿಯಲ್ಲಿ ಚಿತ್ರ ಪ್ರದರ್ಶನಕ್ಕೆ ತೆರಿಗೆ ವಿನಾಯಿತಿ ಕೇಳುತ್ತಿದ್ದಾರೆ. ಆ ಚಿತ್ರದ ನಿರ್ಮಾಣ ಮಾಡಿರುವವರು ಯೂಟ್ಯೂಬ್‌ನಲ್ಲಿ ಅಪ್ಲೋಡ್ ಮಾಡಬಹುದು. ಇದರಿಂದ ಸಿನಿಮಾವನ್ನು ಉಚಿತವಾಗಿ ನೋಡಲು ಸಾಧ್ಯವಾಗುತ್ತದೆ ಎಂದು ಕೇಜ್ರಿವಾಲ್ ಅಭಿಪ್ರಾಯಿಸಿದ್ದರು.
ಕೇಜ್ರಿವಾಲ್ ಅವರು 2016 ‘ನಿಲ್ ಬಟ್ಟೆ ಸನ್ನಾಟಾ’ ಮತ್ತು 2019ರಲ್ಲಿ ‘ಸಾಂಡ್ ಕಿ ಆಂಖ್’ ಸಿನಿಮಾಗಳಿಗೆ ದೆಹಲಿಯಲ್ಲಿ ತೆರಿಗೆ ವಿನಾಯಿತಿ ನೀಡಿದ್ದರ ಬಗ್ಗೆ ಪ್ರಕಟಿಸಿದ್ದ ಹಳೆಯ ಟ್ವೀಟ್‌ಗಳ ಸ್ಕ್ರೀನ್‌ಶಾಟ್‌ಗಳನ್ನು ಬಿಜೆಪಿ ನಾಯಕರು ಹಂಚಿಕೊಳ್ಳುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಪತಿಯನ್ನು ಮರಕ್ಕೆ ಕಟ್ಟಿ, ಪತ್ನಿ ಮೇಲೆ ಸಾಮೂಹಿಕ ಅತ್ಯಾಚಾರ
ಬಿರ್ಭೂಮ್ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಆದೇಶಿಸಿದ ಕೋಲ್ಕತ್ತಾ ಹೈಕೋರ್ಟ್
ಅಚ್ಚರಿಯ ಹೇಳಿಕೆ: ಚುನಾವಣಾ ರಾಜಕಾರಣದಿಂದ ನಿವೃತ್ತಿ; ವಿಪಕ್ಷ ನಾಯಕ ಸಿದ್ದರಾಮಯ್ಯ
ಶಾಸಕ ರೇಣುಕಾಚಾರ್ಯ ಪುತ್ರಿಗೆ ಎಸ್‌ಸಿ ಪ್ರಮಾಣ ಪತ್ರ: ಸರಕಾರ ಅವರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಲಿ; ಸಿದ್ದರಾಮಯ್ಯ