ಸ್ವಾಮೀಜಿಗಳಿಗೆ ಅವಮಾನಿಸಿಲ್ಲ, ನನ್ನ ಹೇಳಿಕೆ ತಿರುಚಲಾಗಿದೆ: ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಬೆಂಗಳೂರು: ಸಾಮಾನ್ಯವಾಗಿ ಎಲ್ಲರೂ ತಲೆ ಮೇಲೆ ಬಟ್ಟೆ ಹಾಕಿಕೊಳ್ಳುತ್ತಾರೆ ಎಂದು ಹೇಳಿದ್ದೆನೆಯೇ ಹೊರತು, ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ. ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಪ್ರಮುಖ ಮಠಗಳ ಹಿರಿಯ ಸ್ವಾಮೀಜಿಗಳು ಈ ಕುರಿತು ಮೌನವಾಗಿದ್ದಾರೆ, ಅವರಿಗೆ ಕೃತಜ್ಞತಾಪೂರ್ವಕ ನಮನಗಳು. ನಮ್ಮ ತಾಯಂದಿರು ಸೇರಿದಂತೆ ಸಾಮಾನ್ಯವಾಗಿ ಎಲ್ಲರೂ ತಲೆ ಮೇಲೆ ಬಟ್ಟೆ ಹಾಕಿಕೊಳ್ಳುತ್ತಾರೆ ಎಂದು ಹೇಳಿದ್ದೆನೆಯೇ ಹೊರತು ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ, ಅಗೌರವ ತೋರಿಲ್ಲ. ಅನಗತ್ಯವಾಗಿ ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದಿದ್ದಾರೆ.
ಸರ್ವ ಜಾತಿಗಳ ಸ್ವಾಮೀಜಿಗಳ ಬಗ್ಗೆ ನನಗೆ ಗೌರವವಿದೆ, ದೀರ್ಘಕಾಲದಿಂದ ನನಗೆ ಅವರ ಜೊತೆ ಹಾರ್ದಿಕ ಸಂಬಂಧ ಇದೆ. ಯಾವ ಸ್ವಾಮೀಜಿಗಳ ಬಗ್ಗೆಯೂ, ಯಾವಾಗಲೂ ನಾನು ಅಗೌರವದಿಂದ ನಡೆದುಕೊಂಡಿಲ್ಲ ಎನ್ನುವುದು ರಾಜ್ಯದ ಜನತೆಗೆ ಗೊತ್ತಿದೆ ಎಂದು ಹೇಳಿದ್ದಾರೆ.
ರಾಜಕೀಯ ವಿರೋಧಿಗಳು ದುರುದ್ದೇಶದಿಂದ ನನ್ನ ಹೇಳಿಕೆಯನ್ನು ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆ ಕೆಲವು ಮಾಧ್ಯಮಗಳು ಕೂಡಾ ಸಾಥ್ ನೀಡಿರುವುದು ವಿಷಾದನೀಯ ಬೆಳವಣಿಗೆ ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ನನ್ನ ಹೇಳಿಕೆಯನ್ನು ತಿರುಚಿರುವುದು ರಾಜ್ಯದ ಪ್ರಮುಖ ಮಠಗಳ ಹಿರಿಯ ಸ್ವಾಮೀಜಿಗಳಿಗೆ ಅರ್ಥವಾಗಿರುವ ಕಾರಣಕ್ಕಾಗಿಯೇ ಅವರು ಮೌನವಾಗಿದ್ದಾರೆ. ಅವರೆಲ್ಲರಿಗೂ ನನ್ನ ಕೃತಜ್ಞತಾಪೂರ್ವಕ ನಮನಗಳು ಎಂದು ಮಾಜಿ ಸಿಎಂ ಬರೆದುಕೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಬೆಳ್ಳಂಬೆಳಗ್ಗೆ ಜೆಸಿಬಿ ಸದ್ದು: ಉಡುಪಿಯಲ್ಲಿ ಎಸ್‌ಡಿಪಿಐ ಜಿಲ್ಲಾಧ್ಯಕ್ಷನ ಹೊಟೇಲ್ ತೆರವು
ಮಲಯಾಳಂ ನಟ ಸುರೇಶ್ ಗೋಪಿಯ ವಿಚಿತ್ರ ಗಡ್ಡ ನೋಡಿ ವೆಂಕಯ್ಯ ನಾಯ್ಡು ಕೇಳಿದ್ದೇನು? | ವಿಡಿಯೋ ವೈರಲ್
ಪ್ರೇಯಸಿಯ ನಗ್ನ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಯುವಕನ ಬಂಧನ
ಚಲಿಸುತ್ತಿದ್ದ ಬಸ್ಸಿನಲ್ಲಿ ಬಿಯರ್ ಕುಡಿದು ಡಾನ್ಸ್ ಮಾಡಿದ ವಿದ್ಯಾರ್ಥಿಗಳು!: ವಿಡಿಯೋ ವೈರಲ್