ದಿ ಕಾಶ್ಮೀರ್ ಫೈಲ್ ಸಿನಿಮಾ ನಿರ್ದೇಶಕನ ವಿರುದ್ಧ ದೂರು ದಾಖಲು
ನವದೆಹಲಿ: ದೇಶಾದ್ಯಂತ ಭಾರೀ ಸದ್ದು ಮಾಡುತ್ತಿರುವ ‘ದಿ ಕಾಶ್ಮೀರ್ ಫೈಲ್’ ಸಿನಿಮಾ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಮೇಲೆ ದೂರು ದಾಖಲಾಗಿದೆ.
ನಿರ್ದೇಶಕ ವಿವೇಕ್ ಅಗ್ನಿಹೋತ್ರಿ, ಭೋಪಾಲ್ ಜನರ ಬಗ್ಗೆ ಅವಹೇಳನಕಾರಿ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಮುಂಬೈನ ವರ್ಸೋವಾದಲ್ಲಿನ ಪಿ.ಆರ್ ಮ್ಯಾನೇಜರ್ ರೋಹಿತ್ ಪಾಂಡೆ ಎನ್ನುವವರು ನಿರ್ದೇಶಕರ ವಿರುದ್ಧ ದೂರು ದಾಖಲಿಸಿದ್ದಾರೆ. ತಮ್ಮ ಊರಿನ ಜನರ ಬಗ್ಗೆ ವಿವೇಕ್ ಕೆಟ್ಟದ್ದಾಗಿ ಮಾತನಾಡಿದ್ದಾರೆ ಎಂದು ದೂರಿನಲ್ಲಿ ದಾಖಲಿಸಿದ್ದಾರೆ.
ವಿವೇಕ್ ಅಗ್ನಿಹೋತ್ರಿ ಸಂದರ್ಶನವೊಂದರಲ್ಲಿ ಭೋಪಾಲ್ ಜನರನ್ನು ಸಾಮಾನ್ಯವಾಗಿ ಸಲಿಂಗಿ ಕಾಮಿಗಳು ಅಂದುಕೊಳ್ಳುತ್ತಾರೆ. ಕಾರಣ ನವಾಬಿ ಆಸೆಗಳು. ನಾನೂ ಕೂಡ ಭೂಪಾಲದವನು. ಭೂಪಾಲಿ ಜನ ಎಂದರೆ ಅವರನ್ನು ಬೇರೆ ರೀತಿಯಲ್ಲೇ ಕಲ್ಪಿಸಿಕೊಳ್ಳುತ್ತಾರೆ. ಹಾಗಾಗಿ ನಾನು ಆ ಭಾಗದವನು ಎಂದು ಹೇಳಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ ಎನ್ನುವ ಕಾರಣಕ್ಕಾಗಿ ದೂರು ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಸವದತ್ತಿ ಯಲ್ಲಮ್ಮ ದೇವಸ್ಥಾನ ಬಳಿ ಅನ್ಯಧರ್ಮೀಯರ ವ್ಯಾಪಾರಕ್ಕೆ ಅವಕಾಶ ನೀಡದಂತೆ ಪ್ರಮೋದ್ ಮುತಾಲಿಕ್ ಮನವಿ
ಕಿಡಿಗೇಡಿಗಳಿಂದ ಜೋಗಿಮಟ್ಟಿ ಗಿರಿಧಾಮಕ್ಕೆ ಬೆಂಕಿ: ಅಪಾರ ಔಷಧಿ ಸಸಿಗಳು ನಾಶ